ಕನ್ನಡಿಗರಿಗೆ ಶೇ.75 ರಷ್ಟು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಅದು ಕೂಡ ಜಾಗತಿಕ ಮಟ್ಟದಲ್ಲಿ ಉನ್ನತ ಸ್ಥಾನದಲ್ಲಿರುವವರು, ಕಂಪನಿಯ ಮಾಲೀಕರು ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ. ಆದರೆ, ಕನ್ನಡಪರ ಸಂಘಟನೆಗಳು ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದರು. ಆದರೆ, ಅವರ ಸಂತಸಕ್ಕೆ ಸರ್ಕಾರವೇ ತಣ್ಣೀರು ಎರಚಿದೆ.



