ಕರ್ನಾಟಕಕ್ಕೆ ಅಗತ್ಯ ಇರುವ ಅಕ್ಕಿ ಕೊಡುತ್ತೇನೆ ಎಂದು ಒಪ್ಪಿಗೆ ಸೂಚಿಸಿದ್ದ FCI, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಂತರ ನಿರಾಕರಿಸಿದ್ದಾರೆ. ಅನ್ನಭಾಗ್ಯ ಯೋಜನೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದೆ ಅನ್ನೋದು ಕಾಂಗ್ರೆಸ್ ಆರೋಪ. ಬಿಜೆಪಿ ತಂತ್ರವನ್ನು ಸೋಲಿಸಲು ಅಕ್ಕಿ ಬದಲು ಹಣ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.