ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು
ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ನೀಡಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪು ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿದೆ, ಈ ತೀರ್ಪು ತನ್ನ ಕುಟುಂಬಕ್ಕೆ ಸಾವು ಎಂದು ಸಂತ್ರಸ್ತೆಯ ಕುಟುಂಬಸ್ಥರು ಬಣ್ಣಿಸಿದ್ದಾರೆ.



