ಇರಾನ್‌ ಯುದ್ಧ | ರಾಯಚೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ: ಹೋಟೆಲ್‌, ಹಾಸ್ಟೆಲ್‌ಗಳಿಗೆ ಸಂಕಷ್ಟ

Date:

ಭವಿಷ್ಯದಲ್ಲಿ ಇಂತಹ ಜಾಗತಿಕ ಬೆಳವಣಿಗೆಗಳಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆಗೆ ಉಂಟಾಗುವ ಪರಿಣಾಮಗಳನ್ನು ಕಡಿಮೆ ಮಾಡಲು ದೀರ್ಘಕಾಲಿಕ ಯೋಜನೆಗಳು ಹಾಗೂ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುವುದು ಅತ್ಯಾವಶ್ಯಕವಾಗಿದೆ. ಇದರಿಂದ ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿದ್ದು, ಸಾಮಾನ್ಯ ಜನರ ನಿತ್ಯದ ಜೀವನವೂ ಸುಗಮವಾಗಲು ನೆರವಾಗುತ್ತದೆ.

ಇಸ್ರೇಲ್-ಅಮೆರಿಕಾ ಜಂಟಿಯಾಗಿ ನಡೆಸಿದ ದಾಳಿಯಿಂದ ಇರಾನ್ ಯುದ್ಧ ಉದ್ವಿಗ್ನತೆ ಪಡೆದುಕೊಂಡಿದ್ದು, ಜಾಗತಿಕ ಮಟ್ಟದಲ್ಲಿ ಮಾತ್ರವಲ್ಲದೆ ಸ್ಥಳೀಯ ಆರ್ಥಿಕ ಚಟುವಟಿಕೆಗಳ ಮೇಲೂ ಗೋಚರಿಸುತ್ತಿದೆ. ಇದರ ಪರಿಣಾಮವಾಗಿ ರಾಯಚೂರು ನಗರದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ(ಕಮರ್ಷಿಯಲ್ ಗ್ಯಾಸ್ ಸಿಲಿಂಡರ್) ಕೊರತೆ ಉಂಟಾಗಿ ಹೋಟೆಲ್ ಉದ್ಯಮಿಗಳು ಸೇರಿದಂತೆ ವಿದ್ಯಾರ್ಥಿ ಹಾಸ್ಟೆಲ್‌ಗಳು, ಪಿಜಿ ವಸತಿ ಗೃಹಗಳು ಹಾಗೂ ಇನ್ನಿತರ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಅನೇಕ ಹೋಟೆಲ್‌ಗಳು ಮತ್ತು ಉಪಹಾರ ಗೃಹಗಳು ನಿತ್ಯದ ಅಡುಗೆ ಕಾರ್ಯಗಳಿಗೆ ಕಮರ್ಷಿಯಲ್ ಗ್ಯಾಸ್ ಮೇಲೆ ಅವಲಂಬಿತವಾಗಿದ್ದು, ಇತ್ತೀಚಿನ ದಿನಗಳಲ್ಲಿ ಸಿಲಿಂಡರ್‌ಗಳ ಸರಬರಾಜು ತಡವಾಗುತ್ತಿರುವುದು ಹಾಗೂ ಲಭ್ಯತೆ ಕಡಿಮೆಯಾಗಿರುವುದರಿಂದ ವ್ಯಾಪಾರಿಗಳಿಗೆ ತೀವ್ರ ತೊಂದರೆಯನ್ನುಂಟುಮಾಡಿದೆ. ಕೆಲವೆಡೆ ಗ್ಯಾಸ್ ಪಡೆಯಲು ಹೆಚ್ಚಿನ ಸಮಯ ಕಾಯಬೇಕಾದ ಪರಿಸ್ಥಿತಿಯೂ ಎದುರಾಗಿದೆ.

ಹೋಟೆಲ್ ಉದ್ಯಮಿಗಳು ಹೇಳುವಂತೆ, “ಗ್ಯಾಸ್ ಕೊರತೆಯಿಂದ ಅಡುಗೆ ಕಾರ್ಯಗಳಲ್ಲಿ ವ್ಯತ್ಯಯ ಉಂಟಾಗಿ ಗ್ರಾಹಕರಿಗೆ ಸಮಯಕ್ಕೆ ಆಹಾರ ಒದಗಿಸುವುದು ಕಷ್ಟಕರವಾಗುತ್ತಿದೆ. ಇದೇ ಸಮಸ್ಯೆ ವಿದ್ಯಾರ್ಥಿ ಹಾಸ್ಟೆಲ್‌ಗಳು ಹಾಗೂ ಪಿಜಿ ವಸತಿ ಗೃಹಗಳಿಗೂ ತಟ್ಟಿದ್ದು, ನೂರಾರು ವಿದ್ಯಾರ್ಥಿಗಳ ಆಹಾರ ವ್ಯವಸ್ಥೆ ನಡೆಸುವುದು ಸವಾಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿರುವ ಐದು ಗ್ಯಾಸ್ ಏಜೆನ್ಸಿಗಳಲ್ಲಿ ಬಹುತೇಕ ಕಡೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಂಗ್ರಹ ಈಗಾಗಲೇ ಮುಕ್ತಾಯಗೊಂಡಿದ್ದು, ಕೆಲ ಏಜೆನ್ಸಿಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ಸಿಲಿಂಡರ್‌ಗಳು ಉಳಿದಿವೆ. ಎರಡು ದಿನಗಳಲ್ಲಿ ಈ ಸಂಗ್ರಹವೂ ಸಂಪೂರ್ಣವಾಗಿ ಖಾಲಿಯಾಗುವ ಸಾಧ್ಯತೆ ಇರುವುದರಿಂದ ಹೋಟೆಲ್ ಹಾಗೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಪ್ರಸ್ತುತ ಗೃಹಬಳಕೆ ಸಿಲಿಂಡರ್ ಕೊರತೆ ಕಂಡುಬಂದಿಲ್ಲ. ಆದರೆ, ವಾಣಿಜ್ಯ ಸಿಲಿಂಡರ್ ಲಭ್ಯವಾಗದ ಹಿನ್ನೆಲೆಯಲ್ಲಿ ಕೆಲವು ಹೋಟೆಲ್ ಮಾಲೀಕರು ಗೃಹಬಳಕೆ ಸಿಲಿಂಡರ್ ಕಡೆ ಮುಖ ಮಾಡುವ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಗೃಹಬಳಕೆ ಗ್ಯಾಸ್ ಪೂರೈಕೆಯ ಮೇಲೂ ಒತ್ತಡ ಬೀಳುವ ಸಾಧ್ಯತೆ ತಳ್ಳಿಹಾಕಲು ಸಾಧ್ಯವಿಲ್ಲ.

ಯುದ್ಧದ ಪರಿಣಾಮವಾಗಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಸುಮಾರು ₹270ರಷ್ಟು ಹೆಚ್ಚಳ ಕಂಡಿದೆ. ಗೃಹಬಳಕೆ ಸಿಲಿಂಡರ್ ಬೆಲೆಯೂ ₹60 ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರೊಂದಿಗೆ ಹೋಟೆಲ್ ಉದ್ಯಮಿಗಳೂ ಕೂಡ ಆರ್ಥಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಇದರ ನಡುವೆ ಅನಿಲ ಪೂರೈಕೆ ಪ್ರಮಾಣ ಕುಸಿಯುತ್ತಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ.

ರಾಯಚೂರು ಜಿಲ್ಲಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಸಣ್ಣ, ಮಧ್ಯಮ ಹಾಗೂ ದೊಡ್ಡ ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲ ಹೋಟೆಲ್‌ಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆಯೇ ಪ್ರಮುಖವಾಗಿದ್ದು, ಜತೆಗೆ ರಸ್ತೆ ಬದಿ ತಿಂಡಿ ಬಂಡಿಗಳು ಮತ್ತು ಸಣ್ಣ ವ್ಯಾಪಾರಿಗಳೂ ಇದೇ ಸಿಲಿಂಡರ್ ಬಳಸುತ್ತಿದ್ದಾರೆ. ಈಗ ಸಿಲಿಂಡರ್ ಕೊರತೆಯಿಂದ ಹಲವಾರು ಹೋಟೆಲ್ ಮಾಲೀಕರು ವ್ಯಾಪಾರ ಸ್ಥಗಿತಗೊಳಿಸುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಹೋಟೆಲ್ ಉದ್ಯಮಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮುಂದಿನ ಎರಡು–ಮೂರು ದಿನಗಳಲ್ಲಿ ವಾಣಿಜ್ಯ ಗ್ಯಾಸ್ ಪೂರೈಕೆ ಆಗದಿದ್ದರೆ ರಾಯಚೂರಿನಲ್ಲೂ ಕೆಲವು ಹೋಟೆಲ್‌ಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಬಹುದು. ಹೋಟೆಲ್‌ಗಳಲ್ಲಿ ಉರುವಲು ಕಟ್ಟಿಗೆ ಬಳಸಿ ಆಹಾರ ತಯಾರಿಸಲಾಗುವುದು. ನಗರಗಳಲ್ಲಿ ಜನರಿಗೆ ಎಲ್ಲವನ್ನೂ ಫಟಾಫಟ್ ಕೊಡಬೇಕು. ತಡ ಮಾಡಿದರೆ ಹೊರಟೇ ಬಿಡುತ್ತಾರೆ” ಎಂದರು.

ಯುದ್ಧ ಆರಂಭಗೊಂಡ ಕೇವಲ ಒಂದು ವಾರದಲ್ಲೇ ವಾಣಿಜ್ಯ ಗ್ಯಾಸ್ ಕೊರತೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಯುದ್ಧ ಮುಂದುವರಿದರೆ ಗೃಹಬಳಕೆ ಗ್ಯಾಸ್ ಪೂರೈಕೆಯ ಸ್ಥಿತಿ ಏನು? ಪರ್ಯಾಯ ಕ್ರಮಗಳು ಯಾವುವು? ಎಂಬ ಚರ್ಚೆಗಳು ಈಗಾಗಲೇ ಸಾರ್ವಜನಿಕರಲ್ಲಿ ಉಂಟಾಗಿವೆ.

ವಿದ್ಯಾರ್ಥಿ ಹಾಸ್ಟೆಲ್‌ನ ವಾರ್ಡನ್ ಮಾತನಾಡಿ, “ಈವರೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಸರ್ಕಾರದಿಂದಲೂ ಗ್ಯಾಸ್ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂಬ ಸೂಚನೆ ನೀಡಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳೂ ಕೂಡ ಸರಬರಾಜು ನಿರಂತರವಾಗಿರುತ್ತದೆಂದು ತಿಳಿಸಿದ್ದಾರೆ. ಆದ್ದರಿಂದ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ” ಎಂದು ಹೇಳಿದರು.

“ನಮ್ಮ ಹಾಸ್ಟೆಲ್‌ನಲ್ಲಿ ತಿಂಗಳಿಗೆ ಸರಾಸರಿ 15ರಿಂದ 20 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಅಗತ್ಯವಿರುತ್ತದೆ. ಸರಬರಾಜು ನಿಯಮಿತವಾಗಿ ಬಂದರೆ ವಿದ್ಯಾರ್ಥಿಗಳ ಆಹಾರ ವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗುವುದಿಲ್ಲ” ಎಂದು ಮಾಹಿತಿ ನೀಡಿದರು.

ಇಡ್ಲಿ ಬಂಡಿ, ಫಾಸ್ಟ್ ಫುಡ್ ವ್ಯಾಪಾರಸ್ಥ ಮಹ್ಮದ್ ಹಸ್ಮತ ಮಾತನಾಡಿ, “ರಾಯಚೂರು ತಾಲೂಕಿನಲ್ಲಿ ಸುಮಾರು 200ಕ್ಕಿಂತ ಹೆಚ್ಚು ಫಾಸ್ಟ್ ಫುಡ್ ವ್ಯಾಪಾರಸ್ಥರಿದ್ದಾರೆ. ಎರಡ್ಮೂರು ದಿನಕ್ಕೆ ಒಂದು ಸಿಲಿಂಡರ್ ಬೇಕು. ಹಿಂದೆ ಆಪತ್ಕಾಲದಲ್ಲಿ ಸೀಮೆ ಎಣ್ಣೆಯನ್ನು ಒಂದು ಮಟ್ಟಿಗೆ ಪರ್ಯಾಯವಾಗಿ ಬಳಸಲಾಗುತ್ತಿತ್ತು. ಆದರೆ ಈಗ ಸೀಮೆ ಎಣ್ಣೆ ಲಭ್ಯತೆ ಇಲ್ಲದಿರುವುದು ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ಸದ್ಯ ದೊಡ್ಡ ಪ್ರಮಾಣದಲ್ಲಿ ಗ್ರಾಹಕರು ಇರುವುದರಿಂದ ಅಷ್ಟು ಪ್ರಮಾಣದ ಕಟ್ಟಿಗೆಗಳಿಂದ ಅಡುಗೆ ತಯಾರಿಸಲು ಕಷ್ಟಸಾಧ್ಯವಾಗಿದೆ” ಎಂದರು.

ಇದನ್ನೂ ಓದಿದ್ದೀರಾ? ಇರಾನ್ ಯುದ್ಧ | ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ; ಬಂದ್‌ ಆಗಲಿವೆ ಹೋಟೆಲ್‌ಗಳು!

ಈ ಹಿನ್ನೆಲೆಗಳಲ್ಲಿ ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ಕೂಡಲೇ ಸಮಸ್ಯೆಗೆ ಸ್ಪಂದಿಸಿ ಅನಿಲ ಸರಬರಾಜನ್ನು ಸುಗಮಗೊಳಿಸುವ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಹಾಗೆಯೇ ಭವಿಷ್ಯದಲ್ಲಿ ಇಂತಹ ಜಾಗತಿಕ ಬೆಳವಣಿಗೆಗಳಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆಗೆ ಉಂಟಾಗುವ ಪರಿಣಾಮಗಳನ್ನು ಕಡಿಮೆ ಮಾಡಲು ದೀರ್ಘಕಾಲಿಕ ಯೋಜನೆಗಳು ಹಾಗೂ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುವುದು ಅತ್ಯಾವಶ್ಯಕವಾಗಿದೆ. ಇದರಿಂದ ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿದ್ದು, ಸಾಮಾನ್ಯ ಜನರ ನಿತ್ಯದ ಜೀವನವೂ ಸುಗಮವಾಗಲು ನೆರವಾಗುತ್ತದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆ.ಸಿ ವ್ಯಾಲಿ ನೀರು ಸುರಕ್ಷಿತ: ಮಣ್ಣಿನ ಗುಣಮಟ್ಟವೂ ವೃದ್ಧಿ  

'ಕೆ.ಸಿ ವ್ಯಾಲಿ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಅಂತರ್ಜಲ...

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...