ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

Date:

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಗಂಭೀರ ಕೊರತೆ ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಅವಳಿ ಜಿಲ್ಲೆಯಲ್ಲಿರುವ ಸರ್ಕಾರಿ ಸ್ವಾಮ್ಯ ಹಾಗೂ ಖಾಸಗಿ ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳು ಪೂರೈಕೆಯಾಗುತ್ತವೆ. ದೇಶದ ನಾನಾ ಭಾಗಗಳಲ್ಲಿರಿವ ಗ್ಯಾಸ್ ರೀಫಿಲ್ಲಿಂಗ್ ಘಟಕಗಳಿಂದ ಸಿಲಿಂಡರ್‌ಗಳು ಬಂದು ತಲುಪುತ್ತವೆ. ‌ಇರಾನ್‌ ಯುದ್ಧದಿಂದಾಗಿ ಅಡುಗೆ ಅನಿಲ ಸಿಗುವುದಿಲ್ಲ ಎಂಬ ವದಂತಿ ಆಧರಿಸಿ ಸ್ಥಳೀಯರೆಲ್ಲರೂ ಗೃಹಬಳಕೆ ಸಿಲಿಂಡರ್‌ಗಳನ್ನು ಬುಕ್ ಮಾಡಿಕೊಳ್ಳುತ್ತಿದ್ದಾರೆ.

ವಿಜಯಪುರ ಜಿಲ್ಲೆಯೊಂದರಲ್ಲಿ ನಿತ್ಯವೂ 200ರಷ್ಟು ಸಿಲಿಂಡರ್ ಬುಕ್ ಮಾಡಲಾಗುತ್ತಿತ್ತು. ಆದರೆ, ಸದ್ಯ 600ರಷ್ಟು ಸಿಲಿಂಡರ್ ಬುಕ್ ಆಗುತ್ತಿವೆ. ಮುಂದಿನ ದಿನಗಳಲ್ಲಿ ಅಲಭ್ಯವಾದರೆ ಎಂಬ ಭೀತಿಯಲ್ಲಿ ಜನರು ಸಿಲಿಂಡರ್‌ಗಳನ್ನು ಕಾಯ್ದಿಟ್ಟುಕೊಳ್ಳಲು ಹವಣಿಸುತ್ತಿದ್ದಾರೆ. ಕೆಲವರು ಸಿಲಿಂಡರ್ ಖಾಲಿ ಇಲ್ಲದ್ದಿದ್ದರೂ ಬುಕ್ ಮಾಡುತ್ತಿರುವ ಉದಾಹರಣೆಗಳು ಕಂಡುಬರುತ್ತವೆ.

ಏಕೆಂದರೆ ಕೊಲ್ಲಿ ಯುದ್ಧದ ಬಿಸಿ ರಾಜ್ಯದ ಜಿಲ್ಲೆಗಳಿಗೂ ತಟ್ಟಲು ಶುರುವಾಗಿದೆ. ಸದ್ಯದ ಮಟ್ಟಿಗೆ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಗೃಹಬಳಕೆ ಸಿಲಿಂಡರ್‌ಗಳ ಪೂರೈಕೆ ಸರಾಗವಾಗಿದೆ. ಆದರೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಬೇಡಿಕೆಯಷ್ಟು ಪೂರೈಸುವಲ್ಲಿ ಸ್ವಲ್ಪಮಟ್ಟಿನ ತೊಂದರೆ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಜಿಲ್ಲೆಯಲ್ಲಿ ಗೃಹಬಳಕೆ ಸಂಪರ್ಕ ಹೊಂದಿರುವ 5,81,591 ಮನೆಗಳನ್ನು ಹೊಂದಿದ್ದರೆ, 8,555 ವಾಣಿಜ್ಯ ಬಳಕೆ ಅಡುಗೆ ಅನಿಲವನ್ನು ಹೊಂದಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 37 ಏಜೆನ್ಸಿಗಳಿವೆ ಎಂದು ಅಂದಾಜಿಸಲಾಗಿದೆ. ಹಾಗೆಯೇ ಬಾಗಲಕೋಟೆ ಜಿಲ್ಲೆಯಲ್ಲಿ ಗೃಹಬಳಕೆ ಸಂಪರ್ಕ ಹೊಂದಿರುವ ಎಲ್‌ಪಿಜಿ ಸಿಲಿಂಡರ್ ಸಂಖ್ಯೆ 4,78,596 ಇದ್ದರೆ, ವಾಣಿಜ್ಯ ಬಳಕೆ ಸಂಪರ್ಕ 17,462 ಹೊಂದಿ‌ವೆ. ಒಟ್ಟಾರೆ 35 ಏಜಿನ್ಸಿಗಳು ಸಿಲಿಂಡರ್‌ಗಳನ್ನು ಪೂರೈಕೆ ಮಾಡುತ್ತಿದ್ದಾರೆ ಎಂಬುದು ಅಧಿಕೃತ ಮೂಲಗಳು ತಿಳಿದುಬಂದಿದೆ.

ಸರ್ಕಾರಿ ಅಧಿಕಾರಿಗಳು ಹಾಗೂ ಗ್ಯಾಸ್ ಏಜಿನ್ಸಿಗಳ ಪ್ರಕಾರ, ಗೃಹಬಳಕೆ ಸಿಲೆಂಡರ್‌ಗಳ ಕೊರೆತೆ ಕಂಡುಬಂದಿಲ್ಲ. ಕಳೆದ ವಾರದಿಂದ ಯಥಾಪ್ರಕಾರ ಸಿಲಿಂಡರ್ ಪೂರೈಕೆಯಾಗುತ್ತಿದೆ. ಆದರೆ ಕೇಂದ್ರ ವಾಣಿಜ್ಯ ಬಳಕೆಯ ಸಿಲಿಂಡರ್ ಬೇಡಿಕೆ ಕಳುಹಿಸಿಕೊಡಲಾಗುತ್ತದೆ. ಆದರೆ, ಕೇಂದ್ರ ಸರ್ಕಾರ ಗೃಹಬಳಕೆ ಸಿಲಿಂಡರ್‌ಗಳ ನಿಯಮಿತ ಪೂರೈಕೆಗೆ ಆದೇಶಿಸಿದೆ. ಹೀಗಾಗಿ ಸಿಲಿಂಡರ್ ಪೂರೈಕೆ ಸರಾಗವಾಗಿದೆ. ಆದರೆ, ಬೇಡಿಕೆ ಹೆಚ್ಚಾದ ಕಾರಣ ಕೆಲವಡೆ ನಿಗದಿತ ದಿನಗಳಂದು ಗ್ರಾಹಕರಿಗೆ ಸಿಲಿಂಡರ್ ಪೂರೈಕೆ‌ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಹೇಗಿರುತ್ತದೆ ಎಂಬದು ಸದ್ಯಕ್ಕೆ ಖಚಿತವಾಗಿಲ್ಲ. ಗೃಹಬಳಕೆ ಸಿಲಿಂಡರ್ ಪೂರೈಕೆಗೆ ಪ್ರಥಮ ಆದ್ಯತೆ ನೀಡಲಾಗಿದೆ. ಹೋಟೆಲ್‌ಗಳು, ಪಿಜಿಗಳು ಸೇರಿದಂತೆ ವಾಣಿಜ್ಯ ಬಳಕೆಗೆ ಸಿಲಿಂಡರ್ ಪೂರೈಸಲಾಗುತ್ತಿದೆ. ಆದರೆ ಕೆಲವಡೆ ಹೆಚ್ಚುವರಿ ಸಿಲಿಂಡರ್ ಕೊಡುತ್ತಿಲ್ಲ. ಅಗತ್ಯವಿದ್ದಷ್ಟು ಮಾತ್ರ ಸಿಲಿಂಡರ್ ಪೂರೈಸಲಾಗುತ್ತಿದೆ. ಇನ್ನು ಒಂದು ವಾರದಲ್ಲಿ ಸ್ಥಿತಿ ಸರಿಹೋಗಲಿದೆ ಎನ್ನವುದು ಏಜಿನ್ಸಿಯೊಂದರ ಅಭಿಪ್ರಾಯ. ಆದರೆ ಯಾವುದೇ ಏಜಿನ್ಸಿಯವರೂ ಈವರೆಗೆ ಸಿಲಿಂಡರ್ ದೊರೆಯುವುದಿಲ್ಲವೆಂದು ನಿಖರವಾಗಿ ತಿಳಿಸಿಲ್ಲ. ಜಿಲ್ಲೆಯಲ್ಲಿ ಪೂರೈಕೆ ಸಹಜವಾಗಿದೆ.

ವಿಜಯಪುರ ನಗರದ ರೇಷ್ಮಾ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮಗೆ ಸಿಲಿಂಡರ್ ಸಮಸ್ಯೆ ಆಗಿಲ್ಲ ರೀ. ಆದರೆ ಟಿವಿಯಲ್ಲಿ ಬಂದಿದ್ದ ಮಂದಿ ನಮಗಾ ಮುಂದ ಸಿಲಿಂಡರ್ ಸಿಗಲ್ಲ, ಈಗಲೆ ತೆಗೆದಿಟ್ಟುಕೋ ಬರ್ರಿ, ನಾವು ತಗಂದಿವಿ ನೀವು ಇನ್ನೂ ತಗಂದಿಲ್ಲ ಅಂತಾ ಕೇಳಿಕತ್ತ್ಯಾರ್‌ ನೋಡ್ರಿ” ಎಂದು ಆತಂಕ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ ಮಾತನಾಡಿ, “ಸದ್ಯ ಜಿಲ್ಲೆಯಲ್ಲಿ ಸಿಲಿಂಡರ್‌ಗಳ ಸಮಸ್ಯೆ ಉಲ್ಬಣಿಸಿಲ್ಲ. ನಮ್ಮ ಜಿಲ್ಲೆಗೆ ಸಾಕಷ್ಟು ಸ್ಟಾಕ್ ಇವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿದ್ದೀರಾ? ಇರಾನ್‌ ಯುದ್ಧ | ರಾಯಚೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ: ಹೋಟೆಲ್‌, ಹಾಸ್ಟೆಲ್‌ಗಳಿಗೆ ಸಂಕಷ್ಟ

ಒಟ್ಟಾರೆ ನೋಡಿದರೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಗಂಭೀರ ಕೊರತೆ ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಯುದ್ಧದ ಕುರಿತಾಗಿ ಹರಿದಾಡುತ್ತಿರುವ ವದಂತಿಗಳ ಪರಿಣಾಮವಾಗಿ ಜನರಲ್ಲಿ ಅನಾವಶ್ಯಕ ಭೀತಿ ಉಂಟಾಗಿ, ಅಗತ್ಯಕ್ಕಿಂತ ಹೆಚ್ಚಾಗಿ ಸಿಲಿಂಡರ್‌ಗಳನ್ನು ಬುಕ್ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಇದರಿಂದ ಕೆಲವಡೆ ತಾತ್ಕಾಲಿಕ ಒತ್ತಡ ಉಂಟಾದರೂ, ಗೃಹಬಳಕೆ ಸಿಲಿಂಡರ್‌ಗಳ ನಿಯಮಿತ ಪೂರೈಕೆಗೆ ಸರ್ಕಾರ ಆದ್ಯತೆ ನೀಡಿರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿಯೇ ಇದೆ ಎನ್ನಲಾಗುತ್ತಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...