ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ದಲಿತರು,ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಮಾಜಿ ಶಾಸಕ ರಾಮಪ್ಪ

Date:

“ಅಂಬೇಡ್ಕರರ ಹೋರಾಟದ ಫಲವಾಗಿ ದಲಿತರು, ಹಿಂದುಳಿದವರು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಾಣಲು ಸಾಧ್ಯವಾಗಿದೆ. ಅವರು ಸಂವಿಧಾನವನ್ನು ರಚಿಸದಿದ್ದರೆ ಭಾರತದ ಸ್ಥಿತಿ ಬೇರೆಯಾಗಿರುತ್ತಿತ್ತು” ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ಜಿಲ್ಲೆ ಹರಿಹರ ನಗರದ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಸಂಸ) ತಾಲೂಕು ಸಮಿತಿಯಿಂದ ಬುಧವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ವಿತರಣೆ ಹಾಗೂ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಹಲವರ ವಿರೋಧದ ನಡುವೆಯೂ ಹರಿಹರ ನಗರದ ಮುಖ್ಯ ಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ನಿವೇಶನ ಮಂಜೂರು ಮಾಡಿಸಿದೆ” ಎಂದು ಮಾಜಿ ಶಾಸಕ ಎಸ್. ರಾಮಪ್ಪ ನೆನಪಿಸಿಕೊಂಡರು.

“ವಾಣಿಜ್ಯ ಪ್ರದೇಶವಾಗುವುದರಿಂದ ಹಳೆ ಕೋರ್ಟ್ ಜಾಗದಲ್ಲಿ ಅಂಬೇಡ್ಕರ್ ಭವನಕ್ಕೆ ನಿವೇಶನ ಕೊಡಿಸುವುದು ಬೇಡ ಎಂದು ಹಲವರು ತಕರಾರು ಮಾಡಿದರು. ಆದರೆ ಆಗ ಶಾಸಕನಿದ್ದ ನಾನು ಸರ್ಕಾರದ ಮೇಲೆ ಒತ್ತಡ ಹೇರಿ ವಾಣಿಜ್ಯ ಪ್ರದೇಶದಲ್ಲೇ ನಿವೇಶನ ಮಂಜೂರು ಮಾಡಿಸಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, “ನಾಡಿನ ದಲಿತರು, ಹಿಂದುಳಿದವರ ಆಶಾಕಿರಣವಾದ ಪ್ರೊ.ಬಿ.ಕೃಷ್ಣಪ್ಪರು ಜನಿಸಿದ ಬೀದಿಯಲ್ಲೇ ಬಡ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ವಿತರಣೆ ಮಾಡಿ ಅವರನ್ನು ಸ್ಮರಿಸುವ ಕಾರ್ಯ ಸಂಘಟನೆಯಿಂದ ನಡೆಸಲಾಗುತ್ತಿದೆ” ಎಂದರು.

“ಒಳ ಮೀಸಲಾತಿಯ ಬೀಜವನ್ನು ನಾಡಿನಲ್ಲಿ ಮೊದಲು ಬಿತ್ತಿದ ಕೀರ್ತಿ ಪ್ರೊ. ಬಿ ಕೃಷ್ಣಪ್ಪರಿಗೆ ಸಲ್ಲುತ್ತದೆ.‌ ಈ ಕೇರಿಯಲ್ಲಿರುವ ಅವರು ಜನಿಸಿದ ಮನೆ ಶಿಥಿಲಾವಸ್ಥೆಯಲ್ಲಿದೆ. ಅದನ್ನು ಜೀರ್ಣೋದ್ದಾರ ಮಾಡಿ ಜಿಲ್ಲಾಡಳಿತ ಸ್ಮಾರಕವನ್ನಾಗಿ ರೂಪಿಸಬೇಕು. ಅಲ್ಲಿ ವಾಸವಿರುವ ಅವರ ಬಂಧುಗಳಿಗೆ ಪರ್ಯಾಯ ವಸತಿ ವ್ಯವಸ್ಥೆ ಮಾಡಬೇಕಿದೆ” ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಧೂಡಾ ಮಾಜಿ ಸದಸ್ಯ ಜಿ.ವಿ.ವೀರೇಶ್ ಮಾತನಾಡಿ, “ದೇಶದಲ್ಲಿ ಅಂಬೇಡ್ಕರರು, ಕರ್ನಾಟಕದಲ್ಲಿ ಪ್ರೊ. ಬಿ ಕೃಷ್ಣಪ್ಪನವರು ಮಾಡಿದ ಹೋರಾಟವನ್ನು ನಾವು ಸದಾ ಸ್ಮರಿಸಬೇಕು. ಅವರಿಗೆ ಗೌರವ ಸಲ್ಲಿಸುವ ಜೊತೆಗೆ ಅವರ ಆದರ್ಶಗಳನ್ನೂ ಪಾಲನೆ ಮಾಡುವತ್ತಲೂ ಆದ್ಯತೆ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೊಲಿಗೆಯಂತ್ರ ತರಬೇತಿಗೆ ಅಪರಿಚಿತರಿಗೆ ಹಣ ಪಾವತಿಸಿ ಮೋಸಹೋಗಬೇಡಿ: ಕೈಗಾರಿಕಾ ಇಲಾಖೆ ಸ್ಪಷ್ಟನೆ

ಶ್ರೀಶೈಲ ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಬಿ.ಆರ್.ಗುರುದೇವ ಸಂವಿಧಾನ ಪೀಠಿಕೆ ವಾಚಿಸಿದರು. ಸಮಾರಂಭದಲ್ಲಿ 1000 ನೋಟ್‍ಬುಕ್‍ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸಹನಾ ಆರ್ಕೇಷ್ಟ್ರಾ ತಂಡದವರಿಂದ ರಸ ಮಂಜರಿ ಕಾರ್ಯಕ್ರಮ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ.ಹನುಮಂತಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಆರ್.ಸುರೇಶ್, ಎಚ್.ಜೆ.ಮರಿದೇವ, ಯಶವಂತಪ್ಪ, ಮೂಕ ಮೈಲಪ್ಪ, ನೋಟದವರ ಕರಿಲಿಂಗಪ್ಪ, ಹಾಲೇಶಪ್ಪ ಡಿ, ರಾಜೂ ಜೆ, ಷಣ್ಮುಖಪ್ಪ, ಮಾರುತಿ ಪಿಬಿ, ಕುಮಾರ್ ಡಿ, ಗೋಣಿಬಸಪ್ಪ, ಗಾಯಕರಾದ ಬಿ.ಆರ್.ಹನುಮಂತಪ್ಪ, ಚಂದ್ರಶೇಖರ್ , ಅಮ್ಜದ್ ಸೇರಿದಂತೆ ಇತರ ಮುಖಂಡರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...