ಧರ್ಮಸ್ಥಳ ಪ್ರಕರಣ: ಕೊಂದವರು ಯಾರು? ತಂಡದಿಂದ ನಾಳೆ ಮಹಿಳಾ ನ್ಯಾಯ ಸಮಾವೇಶ; ಹೀಗೆ ನೋಂದಾಯಿಸಿಕೊಳ್ಳಿ

Date:

ನಿರ್ಭಯ ಪ್ರಕರಣ ನಡೆದ ದಿನವಾದ ಡಿಸೆಂಬರ್ 16ರಂದು(ನಾಳೆ) ಕರ್ನಾಟಕದಲ್ಲೂ ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು, ಎಲ್ಲ ಶೋಷಿತ, ದಮನಿತ ಮಹಿಳೆಯರಿಗೂ ನ್ಯಾಯ ಮತ್ತು ಘನತೆಯ ಬದುಕು ಖಾತ್ರಿಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ’ಗಳು ನಡೆಯಲಿವೆ. ಈ ಸಮಾವೇಶಕ್ಕೆ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲೇ ನೋಂದಾಯಿಸಿಕೊಳ್ಳಬೇಕಾಗಿದೆ.

ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ‘ಕೊಂದವರು ಯಾರು?’ ಸಹಿ ಸಂಗ್ರಹ ಅಭಿಯಾನ(who killed women in Dharmasthala?) ನಡೆದಿದೆ. ಈ ಆಂದೋಲನದ ಮುಂದುವರಿದ ಭಾಗವಾಗಿ ಬೆಳ್ತಂಗಡಿಯಲ್ಲಿ ನಾಳೆ ಮಹಿಳಾ ನ್ಯಾಯ ಸಮಾವೇಶ ನಡೆಯಲಿದ್ದು ತಯಾರಿ ನಡೆಯುತ್ತಿದೆ.

ಇದನ್ನು ಓದಿದ್ದೀರಾ? ಕೊಂದವರು ಯಾರು? | ಒಂಟಿ ಮಹಿಳೆ ಹೋರಾಡಿದರೆ ಕಥೆ, ಮಹಿಳೆಯರೆಲ್ಲ ಕೂಡಿ ಹೋರಾಡಿದರೆ ಕ್ರಾಂತಿ: ಡಾ. ನಾಗಲಕ್ಷ್ಮೀ ಚೌಧರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳ್ತಂಗಡಿಯಲ್ಲಿ ನಡೆಯುತ್ತಿರುವುದು ಮಹಿಳೆಯರೇ ಸೇರಿ ನಡೆಸುತ್ತಿರುವ ಸಮಾವೇಶ. ಜಾಥಾ ಮತ್ತು ಸಭೆಯಲ್ಲಿ ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ. ಆದ ಕಾರಣ, ನ್ಯಾಯಕ್ಕಾಗಿ ಹಂಬಲಿಸುವ ಪುರುಷರು ನೇರವಾಗಿ ಭಾಗಿಯಾಗದೇ ತಮ್ಮ ಕುಟುಂಬಗಳ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಳಿಸುವ ಮೂಲಕ ಸಮಾವೇಶಕ್ಕೆ ಬೆಂಬಲಿಸಬೇಕು” ಎಂದು ಕೊಂದವರು ಯಾರು ಸಂಚಲನಾ ಸಮಿತಿಯು ಮನವಿ ಮಾಡಿದೆ. ಹಾಗೆಯೇ ವಾಟ್ಸಾಪ್ ಮತ್ತು ಕರೆಗಳ ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ ನೀಡಿದೆ.

kondavaru yaru
ಮಹಿಳಾ ನ್ಯಾಯ ಸಮಾವೇಶ, ಜಾಥಾದ ತಯಾರಿ ನಡೆಸುತ್ತಿರುವ ತಂಡ

ನೋಂದಾಯಿಸಿಕೊಳ್ಳುವುದು ಹೇಗೆ?

ರಾಜ್ಯದ ಬೇರೆ ಊರುಗಳಿಂದ ಸಮಾವೇಶಕ್ಕೆ ಆಗಮಿಸುತ್ತಿರುವ ಮಹಿಳೆಯರು ಮತ್ತು ತಂಡಗಳು ತಮ್ಮ ಹೆಸರುಗಳನ್ನು ವಾಟ್ಸಾಪ್ ಮಸೇಜ್/ಫೋನ್ ಕರೆಯ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಸಮಾವೇಶದಲ್ಲಿ ಭಾಗವಹಿಸಲು ಇಚ್ಛಿಸುವವರು ನಾಳೆ ಬೆಳಿಗ್ಗೆ 9 ಗಂಟೆವರೆಗೂ ನೋಂದಾಯಿಸಿಕೊಳ್ಳಲು ಅವಕಾಶವಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆ: ನೋಂದಾಯಿಸಿಕೊಳ್ಳಲು ಸಂಪರ್ಕ ಸಂಖ್ಯೆ 9972551999

ಬೆಂಗಳೂರು, ದೊಡ್ಡಬಳ್ಳಾಪುರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು: ನೋಂದಾಯಿಸಿಕೊಳ್ಳಲು ಸಂಪರ್ಕ ಸಂಖ್ಯೆ 9341274999

ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉತ್ತರಕನ್ನಡ: ನೋಂದಾಯಿಸಿಕೊಳ್ಳಲು ಸಂಪರ್ಕ ಸಂಖ್ಯೆ 8971232329

ದಕ್ಷಿಣ ಕನ್ನಡ ಮತ್ತು ಉಡುಪಿ: ನೋಂದಾಯಿಸಿಕೊಳ್ಳಲು ಸಂಪರ್ಕ ಸಂಖ್ಯೆ 9980260218

ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ: ನೋಂದಾಯಿಸಿಕೊಳ್ಳಲು ಸಂಪರ್ಕ ಸಂಖ್ಯೆ 8892323523

ಈ ಆಂದೋಲನವನ್ನು ಮಹಿಳಾ ಹೋರಾಟಗಾರ್ತಿಯರು, ಬರಹಗಾರರಾದ ಡಾ.ವಸುಂಧರಾ ಭೂಪತಿ, ಡಾ. ದು ಸರಸ್ವತಿ, ಇಂದಿರಾ ಕೃಷ್ಣಪ್ಪ, ಡಾ.‌ ಕೆ.ಶರೀಫಾ, ಡಾ.ಎನ್ ಗಾಯತ್ರಿ, ಚಂಪಾವತಿ, ಗೌರಮ್ಮ, ಮೀನಾಕ್ಷಿ, ಇಂದ್ರಮ್ಮ, ಜ್ಯೋತಿ ಎ., ಕೆ.ಎಸ್. ವಿಮಲಾ, ಶಾಂತಮ್ಮ, ಮಧು ಭೂಷಣ್, ಮಮತಾ ಯಜಮಾನ್, ಗೌರಿ, ಗೀತಾ ಸಾಧನಾ, ವೀಣಾ ಹರಿಗೋವಿಂದ್, ಮಲ್ಲಿಗೆ ಸಿರಿಮನೆ, ಸುಷ್ಮಾ ವರ್ಮಾ ಮೊದಲಾದವರು ಮುನ್ನಡೆಸುತ್ತಿದ್ದು, ಡಿಸೆಂಬರ್ 10ರಂದು ತಂಡವು ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಸಾಂಸ್ಕೃತಿಕ ಅಭಿವ್ಯಕ್ತಿ, ತಮಟೆ ವಾದನ, ಹಾಡು, ಕಿರುಪುಸ್ತಕ ಬಿಡುಗಡೆ, ಸಹಿಸಂಗ್ರಹ ಸಲ್ಲಿಕೆ ಕಾರ್ಯಕ್ರಮವನ್ನು ನಡೆಸಿದೆ.

ಕೊಂದವರು ಯಾರು ತಂಡದ ಹಕ್ಕೊತ್ತಾಯಗಳೇನು?

  1. ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಡೆದಿರುವ ಎಲ್ಲ ಅಪರಾಧ ಪ್ರಕರಣಗಳ ಸಮಗ್ರ ತನಿಖೆ ಮುಗಿಯುವ ತನಕ ಎಸ್‌ಐಟಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಹೊರಗಿನ ಇಲ್ಲವೇ ಒಳಗಿನ ಯಾವ ಒತ್ತಡ, ತೊಡಕು ಅಥವಾ ಹಸ್ತಕ್ಷೇಪವೂ ಇಲ್ಲದೆ ಕಾರ್ಯನಿರ್ವಹಿಸಲು, ಅಪರಾಧಿಗಳನ್ನು ಪತ್ತೆಮಾಡಲು ಎಸ್‌ಐಟಿಗೆ ಸರ್ಕಾರ ಸೂಕ್ತ ಸೌಕರ್ಯಗಳನ್ನು ಒದಗಿಸಬೇಕು.
  2. ಹಿಂದಿನ ಪ್ರಕರಣಗಳು, ಹೊಸದಾಗಿ ದಾಖಲಾದ ಮತ್ತು ದಾಖಲಾಗುವ ದೂರುಗಳು ಹಾಗೂ ಸಾಕ್ಷಿಗಳ ದಿಢೀರ್ ಸಾವಿನ ಪ್ರಕರಣಗಳನ್ನು ಎಸ್‌ಐಟಿ ಸಮಗ್ರವಾಗಿ ತನಿಖೆ ಮಾಡಬೇಕು. ವಿಶೇಷವಾಗಿ ಸೌಜನ್ಯ ಪದ್ಮಲತಾ ಮತ್ತು ಯಮುನ/ ನಾರಾಯಣರಂತಹ ಮುಚ್ಚಿಹಾಕಿರುವ ಪ್ರಕರಣಗಳನ್ನು ಎಸ್‌ಐಟಿ ತನಿಖೆಗೆ ಒಳಪಡಿಸಬೇಕು. ಸೌಜನ್ಯ ಪ್ರಕರಣದ ಸಾಕ್ಷಿಗಳಾದ ರವಿ ಪೂಜಾರಿ, ಗೋಪಾಲಕೃಷ್ಣ ಗೌಡ, ದಿನೇಶ್ ಗೌಡ, ವಾರಿಜ ಆಚಾರ್ಯ ಮತ್ತು ಹರೀಶ್ ಮಡಿವಾಳ ಅವರ ದಿಢೀ‌ರ್ ಸಾವುಗಳು ತನಿಖೆಯಾಗಬೇಕು. ಅಗತ್ಯವಿದ್ದಲ್ಲಿ ಸರ್ಕಾರ ಈ ಕುರಿತು ಮತ್ತೊಂದು ಆದೇಶ ಹೊರಡಿಸಬೇಕು.
  3. ಸೌಜನ್ಯ ಪ್ರಕರಣದ ತನಿಖೆಯಲ್ಲಿ ತಮ್ಮ ಕರ್ತವ್ಯಲೋಪದ ಮೂಲಕ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳಲು ಅವಕಾಶ ನೀಡಿದ ವೈದ್ಯರು, ತನಿಖಾಧಿಕಾರಿಗಳು ಹಾಗೂ ಇತರ ಸರ್ಕಾರಿ ಅಧಿಕಾರಿಗಳ ವಿರುದ್ಧ ಐಪಿಎಸ್ ಸೆಕ್ಷನ್ 166ಎ ಹಾಗೂ ಇತರೆ ಕಾನೂನುಗಳ ಅನ್ವಯ ಕಠಿಣ ಶಿಕ್ಷೆ ವಿಧಿಸಬೇಕು. ಸಿಬಿಐ ನ್ಯಾಯಾಲಯದ ತೀರ್ಪಿನ ಅನ್ವಯ ಕಟ್ಟುನಿಟ್ಟಾಗಿ ಕ್ರಮ ಜರುಗಿಸಬೇಕು.
  4. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಗಳಿಗೆ ಸಂಬಂಧಿಸಿದ ಉಗ್ರಪ್ಪ ಸಮಿತಿ ವರದಿಯ ಮತ್ತು ನ್ಯಾಯಮೂರ್ತಿ ವರ್ಮಾ ಸಮಿತಿ ವರದಿಯ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಮತ್ತು ಶೀಘ್ರವಾಗಿ ಜಾರಿಗೊಳಿಸಬೇಕು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...