ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಸುಳಿವು ನೀಡಿದವರಿಗೆ 5.5 ಕೋಟಿ ರೂ. ಬಹುಮಾನ: ಆಸ್ಟ್ರೇಲಿಯಾ ಘೋಷಣೆ

Date:

ಸುಮಾರು ಒಂದು ದಶಕದ ಹಿಂದೆ ನಡೆದ ಬೆಂಗಳೂರಿನ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ಪ್ರಕರಣ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ(5,57,31,700 ರೂ.) ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ.

ಪ್ರಭಾ ಅರುಣ್ ಕುಮಾರ್ ಅವರನ್ನು 2015ರ ಮಾರ್ಚ್ 7ರಂದು ಸಿಡ್ನಿಯ ಪಶ್ಚಿಮದಲ್ಲಿನ ಪರಮಟ್ಟ ಪಾರ್ಕ್‌ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ 41 ವರ್ಷದ ಪ್ರಭಾ ಅವರ ಕುತ್ತಿಗೆ ಇರಿದು ಹತ್ಯೆ ಮಾಡಲಾಗಿತ್ತು. ಘಟನೆ ನಡೆದು 10 ವರ್ಷಗಳಾದರೂ ಈವರೆಗೂ ಹಂತಕರ ಸುಳಿವು ದೊರಕಿಲ್ಲ. ಇದು ಆಸ್ಟ್ರೇಲಿಯಾ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

“ತನಿಖೆ ಸಂದರ್ಭದಲ್ಲಿ ಪೊಲೀಸ್ ಪಡೆಯ ಪತ್ತೇದಾರರು ಅನೇಕ ಹಂತದ ವಿಚಾರಣೆಗಳನ್ನು ನಡೆಸಿದ್ದಾರೆ. ಮಾಹಿತಿಗಾಗಿ ಸಾರ್ವಜನಿಕರ ನೆರವಿಗಾಗಿ ಹಲವು ಬಾರಿ ಮನವಿಗಳನ್ನು ಮಾಡಲಾಗಿದೆ. ಆದರೂ ಈ ಪ್ರಕರಣ ಬಗೆಹರಿಯದೆ ಉಳಿದಿದೆ” ಎಂದು ಎನ್‌ಎಸ್‌ಡಬ್ಲ್ಯೂ ಪೊಲೀಸರು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಬೆಂಗಳೂರಿನ ಮೈಂಡ್ ಟ್ರೀ ಕಂಪೆನಿಯ ಉದ್ಯೋಗಿಯಾಗಿದ್ದ ಪ್ರಭಾ ಅವರು ಕರ್ತವ್ಯದ ನಿಯೋಜನೆ ಮೇರೆಗೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿದ್ದ ಪತಿ ಅರುಣ್ ಕುಮಾರ್ ಜತೆ ಫೋನ್‌ನಲ್ಲಿ ಮಾತನಾಡುತ್ತಾ ತೆರಳುತ್ತಿದ್ದ ಅವರಿಗೆ ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬ ಅನುಮಾನ ಮೂಡಿತ್ತು. ಅದನ್ನು ಪತಿ ಬಳಿ ಹೇಳಿದ್ದರು. ಅದೇ ವೇಳೆ ಅವರ ಮೇಲೆ ದಾಳಿ ನಡೆದಿತ್ತು. ಅವರು ವಾಸವಿದ್ದ ಸ್ಥಳದಿಂದ ಕೇವಲ 300 ಮೀಟರ್ ದೂರದಲ್ಲಿ ಈ ಹತ್ಯೆ ನಡೆದಿತ್ತು.

ಪತ್ನಿ ಶವವನ್ನು ವಾಪಸ್ ತರುವ ಸಲುವಾಗಿ ಅರುಣ್ ಕುಮಾರ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ ಜತೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಹತ್ಯೆ ಮಾಡಿದ ವ್ಯಕ್ತಿ ಪ್ರಭಾ ಅವರಿಗೆ ಅಪರಿಚಿತನಾದರೂ, ಆಸ್ಟ್ರೇಲಿಯಾ ಅಥವಾ ಭಾರತದಲ್ಲಿರುವ ಅವರ ಪರಿಚಿತರೇ ಈ ಕೊಲೆ ಮಾಡಿಸಿರಬಹುದು ಎನ್ನುವುದು ಪೊಲೀಸರ ಅನುಮಾನವಾಗಿದೆ. ತನಿಖೆ ವೇಳೆ ಅನೇಕ ಪುರಾವೆಗಳು ದೊರಕಿದರೂ, ಹಂತಕರ ಬಂಧನಕ್ಕೆ ಅಗತ್ಯವಾದ ಪ್ರಬಲ ಸಾಕ್ಷ್ಯ ಅಥವಾ ಸುಳಿವು ಈವರೆಗೂ ಲಭ್ಯವಾಗಿಲ್ಲ.

ಪ್ರಭಾ ಅವರು ಮನೆ ಸಮೀಪದ ಉದ್ಯಾನದಲ್ಲಿ ನಡೆದುಕೊಂಡು ಬರುವುದನ್ನು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಸೆರೆಹಿಡಿದಿದ್ದವು. ಆದರೆ ಅವರನ್ನು ಹಿಂಬಾಲಿಸುತ್ತಿದ್ದವರು ಯಾರು ಎನ್ನುವುದು ಈವರೆಗೂ ಸ್ಪಷ್ಟವಾಗಿಲ್ಲ. ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದ್ದರೂ ಪ್ರಯೋಜನವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...