ಇರಾನ್‌ನಲ್ಲಿ ಬಾಂಬ್ ಸ್ಪೋಟ: 103 ಕ್ಕೂ ಅಧಿಕ ಮಂದಿ ಸಾವು

Date:

ಇರಾನ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಸೇನಾಧಿಕಾರಿಗಳ ಸ್ಮರಣಾರ್ಥದ ಕಾರ್ಯಕ್ರಮದ ವೇಳೆ ನಡೆದ ಅವಳಿ ಬಾಂಬ್‌ ಸ್ಟೋಟದಲ್ಲಿ 103 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು 141ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇರಾನ್‌ನ ದಕ್ಷಿಣ ನಗರಿ ಕೆರ್ಮಾನ್‌ನಲ್ಲಿ ಆಯೋಜಿಸಲಾಗಿದ್ದ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ ಅವರ ಸ್ಮರಣೆಯ ಕಾರ್ಯಕ್ರಮದ ವೇಳೆ ದುರ್ಘಟನೆ ನಡೆದಿದೆ.

ಅಮೆರಿಕಾವು 2020ರಲ್ಲಿ ಬಾಗ್ದಾದ್‌ದ ವಿಮಾನ ನಿಲ್ದಾಣದ ಮೇಳೆ ನಡೆಸಿದ್ದ ಢ್ರೋಣ್‌ ದಾಳಿಯಲ್ಲಿ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ ಹತರಾಗಿದ್ದರು. ಇದರ ಸ್ಮರಣಾರ್ಥ ಪ್ರತಿ ವರ್ಷ ಇರಾನ್‌ನಲ್ಲಿ ಸ್ಮರಣೆಯ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

 

ಕೆರ್ಮಾನ್‌ನಲ್ಲಿರುವ ಕಾಸ್ಸೇಮ್‌ ಸೋಲೈಮನಿ ಅವರ ಸ್ಮಾರಕದ ಬಳಿಯೇ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷದ ಕಾರ್ಯಕ್ರಮ ಬುಧವಾರ ನಡೆಯುತ್ತಿತ್ತು. ಅಲ್ಲಿ ಇರಾನ್‌ ಸೇನೆಯ ಕೆಲ ಅಧಿಕಾರಿಗಳು, ಸ್ಥಳೀಯರು ಅಪಾರ ಸಂಖ್ಯೆಯಲ್ಲಿಯೇ ಸೇರಿದ್ದರು. ಈ ವೇಳೆ ಮೊದಲು ಅನಿಲ ತುಂಬಿದ ಡಬ್ಬಿಯನ್ನು ಎಸೆಯಲಾಯಿತು. ಇದು ಸಿಡಿಯುತಲೇ ಇನ್ನಷ್ಟು ಡಬ್ಬಗಳನ್ನು ನಿರಂತರವಾಗಿ ಎಸೆಯಲಾಯಿತು. ಆಗ ಸ್ಪೋಟಗಳು ಸಂಭವಿಸಿದವು ಎಂದು ಇರಾನ್‌ನ ನೌರ್‌ ನ್ಯೂಸ್‌ ವರದಿ ಮಾಡಿದೆ.

ಈ ದಾಳಿಯಿಂದ ಮೊದಲು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಆನಂತರ ಸಾವಿನ ಸಂಖ್ಯೆ ಹೆಚ್ಚಿ ಸಂಜೆ ವೇಳೆಗೆ ಸಾವಿನ ಸಂಖ್ಯೆ 103 ದಾಟಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...