ಇಸ್ರೇಲ್ ನಿಯಂತ್ರಿತ ಗೋಲನ್ ಹೈಟ್ಸ್ ಮೇಲೆ ರಾಕೆಟ್ ದಾಳಿ: 12 ಮಕ್ಕಳು ಸಾವು; ಹೆಜ್ಬುಲ್ಲಾ ಮೇಲೆ ಆರೋಪ

Date:

ಇಸ್ರೇಲ್ ನಿಯಂತ್ರಿತ ಗೋಲನ್ ಹೈಟ್ಸ್‌ನ ಹಳ್ಳಿಯೊಂದಕ್ಕೆ ಶನಿವಾರ ಅನೇಕ ರಾಕೆಟ್‌ಗಳು ಅಪ್ಪಳಿಸಿದ್ದು ಮಕ್ಕಳು ಸೇರಿದಂತೆ ಕನಿಷ್ಠ ಹತ್ತರಿಂದ ಇಪ್ಪತ್ತು ವಯಸ್ಸಿನ ಸುಮಾರು 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಿಂದಾಗಿ ದೀರ್ಘಾವಧಿಯ ಸಂಘರ್ಷ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇರಾನ್ ಬೆಂಬಲಿತ ಲೆಬನಾನಿನ ಉಗ್ರಗಾಮಿ ಗುಂಪು ಹೆಜ್ಬುಲ್ಲಾದ ಮೇಲೆ ಇಸ್ರೇಲ್ ಆರೋಪಿಸಿದೆ. ಲೆಬನಾನ್‌ನಿಂದ ಸುಮಾರು 30 ಸ್ಪೋಟಕ ರಾಕೆಟ್‌ಗಳು ಅಪ್ಪಳಿಸಿದೆ ಎಂದು ಇಸ್ರೇಲ್ ಹೇಳಿದೆ. ಈ ದಾಳಿಯು ಇಸ್ರೇಲ್ ಮತ್ತು ಇರಾನ್ ಗಡಿಯಲ್ಲಿ ಉಲ್ಭಣವಾಗಿರುವ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸುವ ಅಪಾಯವಿದೆ.

ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ಹೆಜ್ಬುಲ್ಲಾ ‘ಭಾರೀ ಬೆಲೆಯನ್ನು ತೆರಬೇಕಾಗುತ್ತದೆ’ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಗಾಜಾ ಮೇಲೆ ಇಸ್ರೇಲ್ ದಾಳಿಯನ್ನು ಜನಾಂಗೀಯ ಹತ್ಯೆ ಎಂದು ಖಂಡಿಸಿದ ಅಮೆರಿಕದ ಮುಸ್ಲಿಂ ನರ್ಸ್ ಕೆಲಸದಿಂದ ವಜಾ

ಇನ್ನು ವರದಿ ಪ್ರಕಾರ ಡ್ರೂಜ್ ಸಮುದಾಯದ ನೆಲೆಯಾಗಿರುವ ಹಳ್ಳಿಯಾದ ಮಜ್ದಲ್ ಶಮ್ಸ್‌ನಲ್ಲಿ ನಡೆದ ದಾಳಿಯಲ್ಲಿ 12 ಸಾವುಗಳ ಜೊತೆಗೆ, ಕನಿಷ್ಠ 29 ಜನರು ಗಾಯಗೊಂಡಿದ್ದಾರೆ.

ಸುಮಾರು 20,000 ಡ್ರೂಜ್ ಅರಬ್ಬರು ಗೋಲನ್ ಹೈಟ್ಸ್‌ನಲ್ಲಿ ವಾಸಿಸುತ್ತಿದ್ದಾರೆ. 1967ರಲ್ಲಿ ಈ ಗೋಲನ್ ಹೈಟ್ಸ್‌ ಅನ್ನು ಆರು ದಿನಗಳ ಯುದ್ಧದ ಸಮಯದಲ್ಲಿ ಇಸ್ರೇಲ್ ಸಿರಿಯಾದಿಂದ ವಶಪಡಿಸಿಕೊಂಡಿದೆ. 1981ರಲ್ಲಿ ಸ್ವಾಧೀನಪಡಿಸಿಕೊಂಡಿದೆ.

ಅಂತರಾಷ್ಟ್ರೀಯ ಕಾನೂನು ಮತ್ತು ಯುಎನ್ ಭದ್ರತಾ ಮಂಡಳಿಯ ನಿರ್ಣಯಗಳ ಅಡಿಯಲ್ಲಿ ಇದನ್ನು ಆಕ್ರಮಿತ ಪ್ರದೇಶವೆಂದು ಪರಿಗಣಿಸಲಾಗಿದೆ. ಈ ಪ್ರದೇಶವು ಸುಮಾರು 50,000 ಇಸ್ರೇಲಿ ಯಹೂದಿಗಳಿಗೆ ಮತ್ತು ಡ್ರೂಜ್‌ಗಳಿಗೆ ನೆಲೆಯಾಗಿದೆ. ಹೆಚ್ಚಿನ ಡ್ರೂಜ್ ಸಮುದಾಯದವರು ಸಿರಿಯನ್ ಎಂದು ಗುರುತಿಸಿಕೊಳ್ಳುತ್ತಿದ್ದಾರೆ ಮತ್ತು ಇಸ್ರೇಲಿ ಪೌರತ್ವವನ್ನು ತಿರಸ್ಕರಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...