ಇಂಗ್ಲೆಂಡ್‌ನಲ್ಲಿ 12 ಮಂದಿ ಭಾರತೀಯರ ಬಂಧನ

Date:

ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ 11 ಮಂದಿ ಪುರುಷರು ಮತ್ತು ಓರ್ವ ಮಹಿಳೆಯನ್ನು ಇಂಗ್ಲೆಂಡ್‌ನ ‘ಇಮಿಗ್ರೇಷನ್’ (ವಲಸೆ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಭಾರತೀಯ ಪ್ರಜೆಗಳು ಎಂದು ಹೇಳಲಾಗಿದೆ. ಅವರೆಲ್ಲರೂ ಹಾಸಿಗೆ ಮತ್ತು ಕೇಕ್‌ ತಯಾರಿಕಾ ಫ್ಯಾಕ್ಟರಿಗಳಲ್ಲಿ ಅಕ್ರಮವಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ ಪ್ರದೇಶದ ಫ್ಯಾಕ್ಟರಿಯಲ್ಲಿ ಅಕ್ರಮ ಕೆಲಸ ನಡೆಯುತ್ತಿದೆ ಎಂಬ ಗುಪ್ತಚರ ಮಾಹಿತಿ ಆಧಾರದ ಮೇಲೆ ‘ಇಮಿಗ್ರೇಷನ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಇಂಗ್ಲೆಂಡ್‌ ಗೃಹ ಕಚೇರಿ ಮಾಹಿತಿ ನೀಡಿದೆ.

“ಮಿಡ್‌ಲ್ಯಾಂಡ್ಸ್‌ನಲ್ಲಿದ್ದ ಹಾಸಿಗೆ ಫ್ಯಾಕ್ಟರಿಯಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ. ಸಮೀಪವೇ ಇದ್ದ ಕೇಕ್‌ ಫ್ಯಾಕ್ಟರಿಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಅಲ್ಲದೆ, ಮನೆಗೆಲಸ ಮಾಡುತ್ತಿದ್ದ ಮಹಿಳೆಯನ್ನು ಮನೆಯೊಂದರಲ್ಲಿ ಬಂಧಿಸಲಾಗಿದೆ. ಇವೆಲ್ಲರೂ ಭಾರತೀಯ ಪ್ರಜೆಗಳು” ಎಂದು ಗೃಹ ಕಚೇರಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಧಿತರು ಇಂಗ್ಲೆಂಡ್‌ನ ವೀಸಾ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಒಬ್ಬರು ಕಾನೂನುಬಾಹಿರವಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ವರು ಅಪರಾಧಿಗಳನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಗಡೀಪಾರು ಮಾಡಲು ಪರಿಗಣಿಸುವ ಪ್ರಕ್ರಿಯೆ ಬಾಕಿ ಇವೆ. ಉಳಿದ ಎಂಟು ಮಂದಿಯನ್ನು ಗೃಹ ಕಚೇರಿಗೆ ನಿಯಮಿತವಾಗಿ ವರದಿ ಮಾಡಿಕೊಳ್ಳುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಿಯಮಗಳನ್ನು ಉಲ್ಲಂಘಿಸುತ್ತಿರುವ ಉದ್ಯೋಗದಾತರು ಕ್ರಮ ಮತ್ತು ದಂಡಕ್ಕೆ ಗುರಿಯಾಗುತ್ತಾರೆ. ಬಂಧಿತ ಕಾರ್ಮಿಕರಿಗೆ ಇಂಗ್ಲೆಂಡ್‌ನಲ್ಲಿ ವಾಸಿಸಲು ಅಥವಾ ಕೆಲಸ ಮಾಡಲು ಯಾವುದೇ ಹಕ್ಕಿಲ್ಲ ಎಂದು ಕಂಡುಬಂದರೆ, ನಾವು ಅವರನ್ನು ದೇಶದಿಂದ ಗಡಿಪಾರು ಮಾಡಲು ಹಿಂಜರಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಮಾನವ ಕಳ್ಳಸಾಗಣೆದಾರರು ವಲಸಿಗರಿಗೆ ಇಂಗ್ಲೆಂಡ್‌ನಲ್ಲಿ ಕೆಲಸ ಮಾಡಬಹುದೆಂದು ಸುಳ್ಳು ಹೇಳಿ ಕರೆತರುತ್ತಾರೆ. ವಾಸ್ತವದಲ್ಲಿ, ಅಂತಹ ಯಾವುದೇ ಅವಕಾಶವಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...