2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ; 86 ಮಂದಿ ಸಾವಿಗೆ ಇಸ್ರೇಲ್‌ ಹೊಣೆ: ಸಿಪಿಜೆ ವರದಿ

Date:

ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಜಾಗತಿಕವಾಗಿ ಹತ್ಯೆಗೀಡಾಗಿದ್ದಾರೆ. ಈ ಪೈಕಿ ಮೂರನೇ ಎರಡರಷ್ಟು ಅಂದರೆ 86 ಮಂದಿ ಪತ್ರಕರ್ತರ ಕೊಲೆಯನ್ನು ಇಸ್ರೇಲ್‌ ಮಾಡಿದೆ ಎಂದು ಪತ್ರಕರ್ತರ ರಕ್ಷಣಾ ಸಮಿತಿ ಬುಧವಾರ ತಿಳಿಸಿದೆ.

ಪತ್ರಕರ್ತರ ಹತ್ಯೆ ಸತತ ಎರಡನೇ ವರ್ಷ ಹೆಚ್ಚಳ ಕಾಣುತ್ತಿದೆ. ಅದರಲ್ಲೂ ಇಸ್ರೇಲ್ ಎರಡನೇ ಬಾರಿಗೆ ಅಧಿಕ ಪತ್ರಕರ್ತರ ಕೊಲೆಯಲ್ಲಿ ಭಾಗಿಯಾಗಿದೆ ಎಂದು ಪತ್ರಕರ್ತರ ಮೇಲಿನ ದಾಳಿಗಳನ್ನು ದಾಖಲಿಸುವ ನ್ಯೂಯಾರ್ಕ್ ಮೂಲದ ಸ್ವತಂತ್ರ ಸಂಸ್ಥೆ ಸಿಪಿಜೆ ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025ರಲ್ಲಿ ಇಸ್ರೇಲ್ ಗುಂಡೇಟಿಗೆ 86 ಪತ್ರಕರ್ತರು ಸಾವನ್ನಪ್ಪಿದ್ದು ಈ ಪೈಕಿ ಹೆಚ್ಚಿನವರು ಗಾಝಾದಲ್ಲಿನ ಪ್ಯಾಲೆಸ್ತೀನಿಯನ್ನರು. ಯೆಮೆನ್‌ನಲ್ಲಿರುವ ಹೌತಿ ಮಾಧ್ಯಮ ಕೇಂದ್ರದ ಮೇಲಿನ ದಾಳಿಯ ಮೂಲಕ 31 ಮಂದಿ ಮಾಧ್ಯಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರೂ ಇದರಲ್ಲಿ ಸೇರಿದ್ದಾರೆ. ಇದು ಸಿಪಿಜೆ ದಾಖಲಿಸಿದ ಎರಡನೇ ಅತ್ಯಂತ ಮಾರಕ ದಾಳಿಯಾಗಿದೆ ಎಂದು ಉಲ್ಲೇಖಿಸಿದೆ.

ಸಿಪಿಜೆ ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡ ಅಥವಾ ಕೊಲೆ ಎಂದು ವರ್ಗೀಕರಿಸಿದ 47 ಹತ್ಯೆಗಳಲ್ಲಿ ಶೇಕಡ 81ರಷ್ಟು ಸಾವಿಗೆ ಇಸ್ರೇಲ್ ಕಾರಣವಾಗಿದೆ ಎಂದು ಸಿಪಿಜೆ ಹೇಳಿದೆ. ಗಾಝಾದಲ್ಲಿ ಸದ್ಯ ಪ್ರವೇಶ ನಿರ್ಬಂಧ ಇರುವ ಕಾರಣದಿಂದಾಗಿ ಈ ಸಂಖ್ಯೆ ಬಹುಶಃ ಇನ್ನೂ ಅಧಿಕವಾಗಿರಬಹುದು ಎಂದೂ ವರದಿ ಹೇಳಿದೆ. ಇನ್ನು ಹಲವಾರು ಸಂದರ್ಭಗಳಲ್ಲಿ ಇಸ್ರೇಲ್ ಗಾಝಾದಲ್ಲಿರುವ ಪತ್ರಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ಒಪ್ಪಿಕೊಂಡಿದೆ. ಕೊಲ್ಲಲ್ಪಟ್ಟ ವರದಿಗಾರರಿಗೆ ಉಗ್ರಗಾಮಿಗಳೊಂದಿಗೆ ಸಂಪರ್ಕವಿದೆ ಎಂದು ಹೇಳಿಕೊಂಡಿದೆ. ಆದರೆ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಈ ಆರೋಪವನ್ನು ಬಲವಾಗಿ ನಿರಾಕರಿಸಿವೆ.

ಇಸ್ರೇಲ್ ವಿದೇಶಿ ಪತ್ರಕರ್ತರನ್ನು ಗಾಝಾ ಪ್ರವೇಶಿಸಲು ಅನುಮತಿಸುವುದಿಲ್ಲ. ಆದ್ದರಿಂದಾಗಿ ಅಲ್ಲಿ ಕೊಲ್ಲಲ್ಪಟ್ಟ ಎಲ್ಲಾ ಮಾಧ್ಯಮ ಕಾರ್ಯಕರ್ತರು ಪ್ಯಾಲೆಸ್ತೀನಿಯನ್ನರು. “ಇಸ್ರೇಲ್ ಮಿಲಿಟರಿ ಈಗ ಯಾವುದೇ ಇತರ ಸರ್ಕಾರದ ಮಿಲಿಟರಿಗಿಂತ ಹೆಚ್ಚು ಪತ್ರಕರ್ತರ ಹತ್ಯೆಗಳನ್ನು ಮಾಡಿದೆ” ಎಂದು ಸಿಪಿಜೆ ವರದಿ ಹೇಳಿದೆ.

ಕೊಲ್ಲಲ್ಪಟ್ಟ 129 ಪತ್ರಕರ್ತರಲ್ಲಿ ಕನಿಷ್ಠ 104 ಮಂದಿ ಸಂಘರ್ಷಗಳಲ್ಲಿ ಸಾವನ್ನಪ್ಪಿದ್ದಾರೆ. ಗಾಝಾ ಮತ್ತು ಯೆಮೆನ್ ಹೊರತುಪಡಿಸಿ, ಪತ್ರಕರ್ತರಿಗೆ ಅತ್ಯಂತ ಮಾರಕ ದೇಶಗಳಲ್ಲಿ ಸುಡಾನ್ ಸೇರಿವೆ. ಅಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಮೆಕ್ಸಿಕೊದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾದ ಪಡೆಗಳಿಂದ ನಾಲ್ಕು ಉಕ್ರೇನಿಯನ್ ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಫಿಲಿಪೈನ್ಸ್‌ನಲ್ಲಿ ಮೂವರು ಪತ್ರಕರ್ತರು ಸಾವನ್ನಪ್ಪಿದರು ಎಂದು ಸಿಪಿಜೆ ವರದಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...