ರುವಾಂಡ | ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ 135 ಸಾವು

Date:

  • ರುವಾಂಡದಲ್ಲಿ 20 ಸಾವಿರ ಜನರ ಸುರಕ್ಷಿತ ಸ್ಥಳಾಂತರ
  • ಭಾರೀ ಮಳೆಗೆ ಭೂಮಿ ಕುಸಿದು 110 ಜನರಿಗೆ ಗಾಯ

ರುವಾಂಡ ದೇಶದಲ್ಲಿ ಈ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದೆ. ಪರಿಣಾಮ ಸುಮಾರು 135 ಮಂದಿ ಮೃತಪಟ್ಟಿದ್ದಾರೆ.

ಭೂಕುಸಿತದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಮುನ್ನೆಚ್ಚರಿಕೆಯಾಗಿ ಅಪಾಯ ವಲಯದ 20 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸರ್ಕಾರ ತಿಳಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮೇ ಮೊದಲ ವಾರದಲ್ಲಿ ದೇಶದ ಉತ್ತರ ಹಾಗೂ ದಕ್ಷಿಣ ಪ್ರಾಂತ್ಯಗಳಲ್ಲಿ ಅಪಾರ ಪ್ರಮಾಣದ ಮಳೆಯಾಗಿದೆ. ಇದರಿಂದ ಭೂಕುಸಿತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಕುಸಿತದಲ್ಲಿ ಸುಮಾರು 110 ಜನರು ಗಾಯಗೊಂಡಿದ್ದಾರೆ. 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಂತ್ಯಗಳ ನಾನಾ ಪ್ರದೇಶಗಳಲ್ಲಿನ 5,963 ಮನೆಗಳು ಧ್ವಂಸಗೊಂಡ ಪರಿಣಾಮ ರುವಾಂಡದ 20 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ” ಎಂದು ತುರ್ತು ನಿರ್ವಹಣಾ ಇಲಾಖೆ ಶನಿವಾರ (ಮೇ 13) ತಿಳಿಸಿದೆ.

ರುವಾಂಡ ದೇಶದ ಅಧ್ಯಕ್ಷ ಪಾಲ್‌ ಕಗಾಮೆ ಅವರು ಅಧಿಕ ಮಳೆಯಿಂದ ಹಾನಿಗೊಳಗಾದ ರುಬಾವು ಜಿಲ್ಲೆಯ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಇಮ್ರಾನ್‌ ಖಾನ್ ಬಂಧನಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಗಂಟೆಯೊಳಗೆ ಮಾಜಿ ಪ್ರಧಾನಿ ಹಾಜರುಪಡಿಸಿದ ಎನ್‌ಎಬಿ

ಮಳೆ, ಭೂಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ನೆರವು ನೀಡಲಾಗುವುದು ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...