ಬ್ರೆಝಿಲ್‌ನಲ್ಲಿ ಭೀಕರ ವಿಮಾನ ಅಪಘಾತ: ಪ್ರವಾಸಕ್ಕೆ ಹೋದ 14 ಮಂದಿ ದಾರುಣ ಸಾವು

Date:

  • ಘಟನೆಯಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಮೃತ್ಯು
  • ಪ್ರವಾಸಿ ಪಟ್ಟಣವಾದ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ನಡೆದ ಅಪಘಾತ

ಬ್ರೆಝಿಲ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲ 14 ಮಂದಿ ಸಾವನ್ನಪ್ಪಿದ್ದಾರೆ.

ಬ್ರೆಝಿಲ್‌ನ ಜನಪ್ರಿಯ ಪ್ರವಾಸಿ ಪಟ್ಟಣವಾದ ಬಾರ್ಸೆಲೋಸ್‌ನಲ್ಲಿ ಬಿರುಗಾಳಿ ಇದ್ದ ವೇಳೆ ಇಳಿಯಲು ಪ್ರಯತ್ನಿಸುತ್ತಿದ್ದಾಗ ಉತ್ತರ ಅಮೆಜಾನ್‌ನಲ್ಲಿ ಕೆಳಕ್ಕೆ ಉರುಳಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಗವರ್ನರ್​ ವಿಲ್ಸನ್​ ಲಿಮಾ ಘೋಷಿಸಿದ್ದಾರೆ.

ಈ ವಿಮಾನದ ಪೈಲಟ್ ಭಾರೀ ಮಳೆಯಲ್ಲಿ, ಸರಿಯಾಗಿ ಕಾಣದಿದ್ದ ಸಂದರ್ಭದಲ್ಲಿ ಪಟ್ಟಣವನ್ನು ಸಮೀಪಿಸುತ್ತಿದ್ದರು ಮತ್ತು ಅಜಾಗರೂಕತೆಯಿಂದ ರನ್‌ವೇ ಮಧ್ಯದಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿದರು ಎಂದು ರಾಜ್ಯ ಭದ್ರತಾ ಕಾರ್ಯದರ್ಶಿ ವಿನಿಶಿಯಸ್ ಅಲ್ಮೇಡಾ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನವು ಲ್ಯಾಂಡಿಂಗ್ ಪ್ರದೇಶದಿಂದ ಹೊರಬಂದ ನಂತರ ಪತನಗೊಂಡಿದ್ದು, ಘಟನೆಯಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸಾವನ್ನಪ್ಪಿದರು ಎಂದು ಅವರು ಹೇಳಿದರು.

ಪ್ರಾಥಮಿಕ ತನಿಖೆಯ ಪ್ರಕಾರ ಪ್ರಯಾಣಿಕರೆಲ್ಲರೂ ಬ್ರೆಝಿಲಿಯನ್ ಮೀನುಗಾರಿಕೆ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದರು ಎಂದು ಅಲ್ಲಿನ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

BRAZIL PLANE CRASH 1

ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿಮೀ ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ. ವಿಮಾನವು ರಾಜ್ಯದ ರಾಜಧಾನಿ ಮನೌಸ್‌ನಿಂದ ಬಾರ್ಸೆಲೋಸ್‌ಗೆ ಸುಮಾರು 90 ನಿಮಿಷಗಳ ಹಾರಾಟದ ಹಾದಿಯಲ್ಲಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...