91 ವರ್ಷದ ವೃದ್ದೆ ಮೇಲೆ ಲೈಂಗಿಕ ದೌರ್ಜನ್ಯ; ತಪ್ಪೊಪ್ಪಿಕೊಂಡ 14ರ ಬಾಲಕ

Date:

14 ವರ್ಷದ ಬಾಲಕನೊಬ್ಬ ಏಕಾಂಗಿಯಾಗಿ ಬದುಕುತ್ತಿದ್ದ 91 ವರ್ಷದ ವೃದ್ದೆಯ ಮನೆಗೆ ನುಗ್ಗಿ, ಆಕೆಗೆ ಥಳಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಫ್ಲೋರಿಡಾದಲ್ಲಿ ನಡೆದಿದೆ. ಘಟನೆ ನಡೆದು ಆರು ತಿಂಗಳಾಗಿದ್ದು, ಆರಂಭದಲ್ಲಿ ಕೃತ್ಯ ಎಸಗಿದ್ದ ತಾನಲ್ಲವೆಂದು ಬಾಲಕ ವಾದಿಸಿದ್ದ. ಇದೀಗ, ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಆರೋಪಿ ಜೆಸ್ಸಿ ಸ್ಟೋನ್ ಎಂಬಾತ ರಾತ್ರಿ ವೇಳೆ ವೃದ್ದೆಯ ಮನೆಗೆ ನುಗ್ಗಿ, ಕೃತ್ಯ ಎಸಗಿದ್ದ. ಘಟನೆ ಬಗ್ಗೆ ವೃದ್ದೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ, ಆತನನ್ನು ಬಂಧಿಸಲಾಗಿತ್ತು. ಆತನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಪ್ರಕರಣ ದಾಖಲಿಸಲಾಗಿತ್ತು.

ದೂರು ನೀಡಿದ್ದ ವೃದ್ದೆ, “ತಾನು ರಾತ್ರಿ ಮಲಗಿದ್ದಾಗ, ಮನೆಯೊಳಗೆ ಬಾಲಕ ನುಗ್ಗಿದ್ದಾನೆ. ತನ್ನನ್ನು ಥಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಆರೋಪಿಸಿದ್ದಾರೆ. ಆರೋಪಿ ಬಾಲಕ ವೃದ್ದೆಯ ಮನೆ ಬಳಿ ಅಡ್ಡಾಡುವುದನ್ನು ನೆರೆಹೊರೆಯವರು ವಿಡಿಯೋ ಮಾಡಿದ್ದರು. ಅದನ್ನೂ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಕೃತ್ಯ ಎಸಗಿರುವುದು ತಾನಲ್ಲವೆಂದು ಬಾಲಕ ವಾದಿಸಿದ್ದ. ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ ಬಳಿಕ, ಆತನೇ ಕೃತ್ಯ ಎಸಗಿದ್ದಾನೆಂದು ವಿಧಿವಿಜ್ಞಾನ ಸಂಶೋಧಕರು ದೃಢಪಡಿಸಿದ್ದರು. ಬಳಿಕ, ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಶ್ಲೀಲ ವಿಡಿಯೋಗಳನ್ನು ನೋಡಿ, ಕೃತ್ಯ ಎಸಗಿದ್ದಾಗಿಯೂ ಹೇಳಿದ್ದಾನೆ ಎಂದು ಮರಿಯನ್ ಕೌಂಟಿ ಶ್ರಾಫ್ ಕಚೇರಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...