ಅಮೆರಿಕದಲ್ಲಿ ನಾಪತ್ತೆಯಾದ ಕರ್ನಾಟಕ ಮೂಲದ ವಿದ್ಯಾರ್ಥಿ

Date:

ಅಮೆರಿಕದ ಬರ್ಕ್ ಲೇಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಫೆಬ್ರವರಿ 9ರಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಸಾಕೇತ್ ಶ್ರೀನಿವಾಸಯ್ಯ ಕೊನೆಯದಾಗಿ ಬರ್ಕ್ ಲೇಯಲ್ಲಿರುವ ಅಂಝಾ ಕೆರೆಯ ಬಳಿ ಕಂಡು ಬಂದಿದ್ದರು. ರಾಯಭಾರಿ ಕಚೇರಿ ಮುಖ್ಯಸ್ಥರು ಶ್ರೀನಿವಾಸಯ್ಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಆತನನ್ನು ಪತ್ತೆ ಹಚ್ಚಲು ಸ್ಥಳೀಯ ಪ್ರಾಧಿಕಾರಗಳೊಂದಿಗೂ ಸಂಪರ್ಕದಲ್ಲಿರುವುದಾಗಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.

“ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಯಾದ ಕರ್ನಾಟಕದ ಸಾಕೇತ್ ಶ್ರೀನಿವಾಸಯ್ಯ ನಾಪತ್ತೆಯಾಗಿರುವ ಬಗ್ಗೆ ಭಾರತೀಯ ರಾಯಭಾರಿ ಕಚೇರಿಯ ಮುಖ್ಯಸ್ಥರು ತೀವ್ರ ಕಳವಳಗೊಂಡಿದ್ದಾರೆ. ನಾವು ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಆತನನ್ನು ಪತ್ತೆ ಹಚ್ಚಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುವುದು” ಎಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿನ ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಸ್ಪತ್ರೆಯಲ್ಲಿ ರಕ್ತಪೂರಣ ಮಾಡಿಸಿಕೊಳ್ತೀರಲ್ಲ, ಆಗ ಜಾತಿ ಯಾಕೆ ಮುಖ್ಯ ಆಗುವುದಿಲ್ಲ?

ಸಾಕೇತ್ ಶ್ರೀನಿವಾಸಯ್ಯರನ್ನು ಪತ್ತೆ ಹಚ್ಚಲು ನೆರವು ನೀಡುವಂತೆ ಆತನ ಸ್ನೇಹಿತರು ಬನೀತ್ ಸಿಂಗ್ LinkedIn ನಲ್ಲಿ ಪೋಸ್ಟ್ ಮಾಡಿದ್ದಾರೆ.

22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕರ್ನಾಟಕ ಮೂಲದವರಾಗಿದ್ದಾರೆ. ಆತನ ಲಿಂಕ್ಡ್ ಇನ್ ಸ್ವವಿವರಗಳ ಪ್ರಕಾರ, 2025ರಲ್ಲಿ ಐಐಟಿ ಮದ್ರಾಸ್ ನಿಂದ ಬಿಟೆಕ್ ಪದವಿ ಪಡೆದಿದ್ದಾರೆ. ಬರ್ಕ್ ಲೇಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ರಾಸಾಯನಿಕ ಮತ್ತು ಜೈವಿಕ ಅಣು ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...