ಹೌದಿಗಳ ಮೇಲೆ ಅಮೆರಿಕ ದಾಳಿ; 24 ಮಂದಿ ಬಂಡುಕೋರರು ಸಾವು

Date:

ಯೆಮನ್ ರಾಜಧಾನಿ ಸನಾ ಮೇಲೆ ಹೌದಿ ಬಂಡುಕೋರರನ್ನು ಗುರಿ ಮಾಡಿ ಅಮೆರಿಕ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. ಮತ್ತಷ್ಟು ಮಾರಕ ಬಲಪ್ರಯೋಗ ಮಾಡುವುದಾಗಿ ಅಮೆರಿಕ ಬೆದರಿಕೆ ಹಾಕಿದೆ. ಅಮೆರಿಕದ ದಾಳಿಗೆ ವಿರುದ್ಧವಾಗಿ ಹೌದಿ ಬಂಡುಕೋರರು ಪ್ರತಿದಾಳಿಯ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ದಾಳಿಯಲ್ಲಿ ಮಕ್ಕಳೂ ಸೇರಿದಂತೆ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ ಎಂದು ಹೌದಿ ಬಂಡುಕೋರರು ವರದಿ ಮಾಡಿದ್ದಾರೆ. ಈ ಮೊದಲು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ನೀಡಿದ ಹೇಳಿಕೆಯನ್ನು ಹೌದಿಯ ಅನ್ಸರೋಲ್ಹಾ ಮೀಡಿಯಾ ಪರಿಷ್ಕರಿಸಿದೆ. ರಾಜಧಾನಿ ಸನಾ ಮತ್ತು ಉತ್ತರದ ಸಾದಾ ಪ್ರದೇಶದ ಮೇಲೆ ದಾಳಿ ನಡೆದಿದೆ ಎಂದು ಸ್ಪಷ್ಟಪಡಿಸಿದೆ.

ಟ್ರಂಪ್ ಕಳೆದ ಜನವರಿಯಲ್ಲಿ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹೌದಿಗಳ ವಿರುದ್ಧ ಅಮೆರಿಕದ ನಡೆಸಿದ ಮೊದಲ ದಾಳಿ ಇದಾಗಿದೆ. ಗಾಝಾ ಸಂಘರ್ಷದ ನಡುವೆಯೇ ಬಂಡುಕೋರರು ಇಸ್ರೇಲ್ ಹಾಗೂ ಕೆಂಪು ಸಮುದ್ರದ ಹಡಗುಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಈ ವಾಯುದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತಕ್ಕೆ ಬೇಕಿರುವುದು ಬಣ್ಣಗಳ ಸಂಗಮ, ಸಂಘರ್ಷದ ಸಂಭ್ರಮವಲ್ಲ!

ಹೌದಿಗಳು ನಿರ್ವಹಿಸುವ ಮಸೀರ್ಹ್ ಟಿವಿ, ಸನಾ ಮೇಲಿನ ದಾಳಿಯನ್ನು ದೃಢಪಡಿಸಿದ್ದು, ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಏತನ್ಮ್ಯೆ ಹೌದಿಗಳ ಆರೋಗ್ಯ ಮತ್ತು ಪರಿಸರ ಸಚಿವಾಲಯ ಸಬಾ ಸುದ್ದಿ ಸಂಸ್ಥೆಯ ಮೂಲಕ ಹೇಳಿಕೆ ನೀಡಿ, “ದಾಳಿಯಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು, ಇತರ ಒಂಬತ್ತು ಮಂದಿ ತೀವ್ರ ಗಾಯಗೊಂಡಿದ್ದಾರೆ. ಈ ಪೈಕಿ ಬಹುತೇಕ ಮಂದಿಯ ಸ್ಥಿತಿ ಗಂಭೀರವಾಗಿದೆ” ಎಂದು ಸ್ಪಷ್ಟಪಡಿಸಿದೆ.

ದಾಳಿ ಬಗ್ಗೆ ಟ್ರುಥ್ ಸೋಶಿಯಲ್ ನಲ್ಲಿ ಹೇಳಿಕೆ ನೀಡಿರುವ ಟ್ರಂಪ್, “ನಮ್ಮ ಗುರಿಸಾಧನೆಯ ವರೆಗೆ ಮಾರಕ ಅಸ್ತ್ರಗಳ ಮಳೆಗೆರೆಯುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. “ದಾಳಿಗೆ ಪ್ರತಿದಾಳಿ ನಡೆಸದೇ ಬಿಡುವುದಿಲ್ಲ” ಎಂದು ಹೌದಿಗಳು ಎಚ್ಚರಿಕೆ ನೀಡಿದ್ದಾರೆ. “ಈ ಅತಿಕ್ರಮಣ ಪ್ರತೀಕಾರದ ದಾಳಿ ಇಲ್ಲದೇ ಮುನ್ನಡೆಯದು. ನಮ್ಮ ಯೆಮನ್ ಪಡೆಗಳು ದಾಳಿಗೆ
ದಾಳಿಯಿಂದಲೇ ಉತ್ತರಿಸಲು ಸರ್ವಸನ್ನದ್ಧವಾಗಿದೆ” ಎಂದು ಬಂಡುಕೋರರ ರಾಜಕೀಯ ಬ್ಯೂರೊ ಹೇಳಿಕೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...