ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

Date:

ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾರಿನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ಕೆನಡಾ ದ ಸೌತ್ ವನ್‌ಕೌವೆರ್‌ ಪ್ರದೇಶದಲ್ಲಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಹರಿಯಾಣ ನಿವಾಸಿಯಾದ 24 ವರ್ಷದ ಚಿರಾಗ್‌ ಅನ್‌ತಿಲ್ ಎಂಬಾತನನ್ನು ಸೌತ್ ವನ್‌ಕೌವೆರ್‌ ಪ್ರದೇಶದ ಕಾರಿನಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದ್ದು, ಗುಂಡಿನ ಶಬ್ದ ಕೇಳಿದ ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 12ರಂದು ರಾತ್ರಿ 11 ಗಂಟೆ ಸುಮಾರಿಗೆ ಈಸ್ಟ್‌ 55 ಅವೆನ್ಯೂ ಪ್ರದೇಶದ ಮುಖ್ಯ ರಸ್ತೆಯಲ್ಲಿ ಗುಂಡಿನ ಶಬ್ದ ಕೇಳಿದ ನಂತರ ಸ್ಥಳೀಯರು ಪೊಲೀಸ್‌ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ.24 ವರ್ಷದ ಚಿರಾಗ್‌ ಅನ್‌ತಿಲ್ ವಾಹನದಲ್ಲೇ ಮೃತರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಲಾಗಿಲ್ಲ,ತನಿಖೆ ಮುಂದುವರೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ವಿದೇಶಾಂಗ ಇಲಾಖೆಯು ವಿದ್ಯಾರ್ಥಿ ಕುಟುಂಬದವರಿಗೆ ನೆರವು ನೀಡುವಂತೆ ವಿದ್ಯಾರ್ಥಿ ಕಾಂಗ್ರೆಸ್ ಘಟಕದ ರಾಷ್ಟ್ರೀಯ ಅಧ್ಯಕ್ಷರಾದ ವರುಣ್ ಚೌಧರಿ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕೆನಡಾದ ಸೌತ್ ವನ್‌ಕೌವೆರ್‌ ಪ್ರದೇಶದಲ್ಲಿ ಹತ್ಯೆಯಾಗಿರುವ ಭಾರತೀಯ ವಿದ್ಯಾರ್ಥಿ ಚಿರಾಗ್ ಅನ್‌ತಿಲ್ ಬಗ್ಗೆ ತುರ್ತಾಗಿ ಗಮನಹರಿಸಬೇಕಾಗಿದೆ.ತನಿಖೆಯ ಪ್ರಗತಿ ಹಾಗೂ ಶೀಘ್ರ ನ್ಯಾಯ ದೊರಕಿಸಲು ವಿದೇಶಾಂಗ ಇಲಾಖೆ ನಿಕಟವಾಗಿ ಕ್ರಮವಹಿಸಬೇಕು ಎಂದು ನಾವು ಆಗ್ರಹಿಸುತ್ತೇವೆ” ಎಂದು ಚೌಧರಿ ತಿಳಿಸಿದ್ದಾರೆ.

“ಅಲ್ಲದೆ, ಇಂತಹ ಕಷ್ಟದ ಸಮಯದಲ್ಲಿ ಮೃತನ ಕುಟುಂಬಕ್ಕೆ ತುರ್ತು ನೆರವು ಒದಗಿಸುವಂತೆ ಇಲಾಖೆಗೆ ಮನವಿ ಮಾಡುತ್ತೇವೆ” ಎಂದು ಚೌಧರಿ ಹೇಳಿದ್ದಾರೆ.

ಚಿರಾಗ್ ಅನ್‌ತಿಲ್ ಮೃತದೇಹವನ್ನು ಭಾರತಕ್ಕೆ ತರಲು ಆತನ ಕುಟುಂಬ ಕ್ರೌಡ್‌ಫಂಡಿಂಗ್‌ ವೇದಿಕೆಯ ಮೂಲಕ ಹಣ ಸಂಗ್ರಹಿಸುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಚಿರಾಗ್ ಅನ್‌ತಿಲ್ ಅವರು ಕೆನಡಾ ವೆಸ್ಟ್ ವಿವಿಯಲ್ಲಿ ಎಂಬಿಎ ವ್ಯಾಸಂಗಕ್ಕಾಗಿ 2022ರ ಸೆಪ್ಟೆಂಬರ್‌ನಲ್ಲಿ ಕೆನಡಾಕ್ಕೆ ತೆರಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...