ಪಾಕಿಸ್ತಾನ | ಆಲಿಕಲ್ಲು ಸಹಿತ ಭಾರೀ ಮಳೆಗೆ 25 ಮಂದಿ ಸಾವು; 145 ಮಂದಿಗೆ ಗಾಯ

Date:

  • ಕಳೆದ ವರ್ಷ ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ 1,700 ಮಂದಿ ಸಾವು
  • ಹವಾಮಾನ ವೈಪರೀತ್ಯ ಪರಿಹಾರಕ್ಕಾಗಿ 2.3 ಬಿಲಿಯನ್‌ ಡಾಲರ್ ಮೀಸಲು

ಪಾಕಿಸ್ತಾನ ದೇಶದಲ್ಲಿ ಬಿಪರ್‌ಜಾಯ್ ಚಂಡಮಾರುತ ಅಪ್ಪಳಿಸುವುದಕ್ಕೂ ಮುನ್ನ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಿಂದ 25 ಮಂದಿ ಮೃತಪಟ್ಟಿದ್ದಾರೆ ಎಂದು ಭಾನುವಾರ (ಜೂನ್‌ 11) ವರದಿಯಾಗಿದೆ.

ದೇಶದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನು, ಲಕ್ಕಿ ಮಾರ್ವಾಟ್ ಮತ್ತು ಕರಕ್ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಇದರಿಂದ ಮರಗಳು ನೆಲಕ್ಕೆ ಉರುಳಿವೆ. ವಿದ್ಯುತ್‌ ಕಂಬಗಳು ಬಿದ್ದಿವೆ. ಮನೆಗಳು ನೆಲಸಮಗೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಲಿಕಲ್ಲು ಸಹಿತ ಮಳೆಗೆ 145 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಪಾಕಿಸ್ತಾನದ ನಾನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿ ಖತೀರ್‌ ಅಹಮದ್‌ ತಿಳಿಸಿದರು.

ಬಿಪರ್‌ಜಾಯ್‌ ಚಂಡಮಾರುತ ಪಾಕಿಸ್ತಾನದ ಕರಾಚಿಗೆ ಅಪ್ಪಳಿಸುವ ಮುನ್ನವೇ ಈ ಅವಘಡ ನಡೆದಿದೆ.

ಕಳೆದ ವರ್ಷ ಪಾಕಿಸ್ತಾನ ಭಾಗದಲ್ಲಿ ಉಂಟಾದ ಮಾನ್ಸೂನ್‌ ಮಳೆ ಮತ್ತು ಪ್ರವಾಹದಿಂದಾಗಿ 1,700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಇದರಿಂದ ದೇಶದ 3.3 ಕೋಟಿ ಜನರಿಗೆ ತೊಂದರೆಯುಂಟಾಗಿತ್ತು. ಅಲ್ಲದೆ ಸುಮಾರು 80 ಲಕ್ಷ ಮಂದಿ ಬೇರೆಡೆ ವಲಸೆ ಹೋಗಿದ್ದರು.

ಪಾಕಿಸ್ತಾನ ಸರ್ಕಾರ ಶುಕ್ರವಾರ ಮಂಡಿಸಿದ ರಾಷ್ಟ್ರೀಯ ಬಜೆಟ್‌ನಲ್ಲಿ ಹವಾಮಾನ ವೈಪರೀತ್ಯದ ಪರಿಹಾರಕ್ಕಾಗಿ 2.3 ಬಿಲಿಯನ್‌ ಅಮೆರಿಕ ಡಾಲರ್‌ ಮೀಸಲಿಟ್ಟಿದೆ.

ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್‌ ಶರೀಫ್‌ ಶನಿವಾರ ಮಳೆ ಸಂಬಂಧಿತ ಅವಘಡದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಬಿಪರ್‌ಜಾಯ್‌ ಚಂಡಮಾರುತ ತೀವ್ರ ಸ್ವರೂಪದಲ್ಲಿ ಪಾಕಿಸ್ತಾನಕ್ಕೆ ಅಪ್ಪಳಿಸುವ ಹಿನ್ನೆಲೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಶಹಬಾಜ್ ಶರೀಫ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತೀವ್ರ ಸ್ವರೂದಲ್ಲಿ ಬಿಪರ್‌ಜಾಯ್ ಚಂಡಮಾರುತ ಗಂಟಗೆ 150 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಇದು ದೇಶದ ದಕ್ಷಿಣ ಭಾಗಕ್ಕೆ ಆಗಮಿಸುತ್ತಿದೆ ಎಂದು ಪಾಕಿಸ್ತಾನ ವಿಪತ್ತು ನಿರ್ವಹಣಾ ಸಂಸ್ಥೆ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...