ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮೇಲೆ ಪಾಕ್‌ ವಾಯು ದಾಳಿ: 30 ನಾಗರಿಕರ ಸಾವು

Date:

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸೋಮವಾರ ತಡರಾತ್ರಿ ನಡೆದ ಪಾಕಿಸ್ತಾನ ವಾಯುಪಡೆಯ ದಾಳಿಯಲ್ಲಿ ಕನಿಷ್ಠ 30 ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ.

ಸ್ಥಳೀಯ ವರದಿಗಳ ಪ್ರಕಾರ, ಜೆಎಫ್–17 ಯುದ್ಧವಿಮಾನಗಳಿಂದ ಎಂಟು ಎಲ್‌ಎಸ್–6 ಬಾಂಬ್‌ಗಳನ್ನು ಪಶ್ತೂನ್ ಬಹುಸಂಖ್ಯಾತ ಮತ್ರೆ ದರಾ ಗ್ರಾಮದಲ್ಲಿ ಬಿದ್ದಿದ್ದು, ರಾತ್ರಿ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಭೀಕರ ಸ್ಫೋಟದಿಂದ ಗ್ರಾಮದ ದೊಡ್ಡ ಭಾಗ ನಾಶವಾಗಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಈ ದಾಳಿಯ ಗುರಿಯು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಉಗ್ರಗಾಮಿಗಳ ರಹಸ್ಯ ತಾಣಗಳಾಗಿದ್ದವು. ಆದರೆ, ದಾಳಿಯಲ್ಲಿ ಸಾವನ್ನಪ್ಪಿದವರೆಲ್ಲರೂ ನಾಗರಿಕರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿರಾಹ್ ಕಣಿವೆಯಲ್ಲಿರುವ ಮಾತ್ರೆ ದಾರಾ ಗ್ರಾಮದ ಮೇಲಿನ ಈ ದಾಳಿಯ ಚಿತ್ರಗಳು ಮತ್ತು ವಿಡಿಯೋಗಳು ಭಯಾನಕ ದೃಶ್ಯಗಳನ್ನು ತೋರಿಸಿವೆ. ಮಕ್ಕಳ ಶವಗಳು ಸೇರಿದಂತೆ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ರಕ್ಷಣಾ ತಂಡಗಳು ಶಿಥಿಲಗೊಂಡ ಕಟ್ಟಡಗಳ ಕೆಳಗೆ ಶವಗಳನ್ನು ಹುಡುಕುತ್ತಿವೆ, ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಿಎಸ್‌ಟಿ ದರ ಇಳಿಕೆ ಲಾಭ ಗ್ರಾಹಕರಿಗೆ ದೊರೆಯಲಿ!

ಇತ್ತೀಚಿನ ದಿನಗಳಲ್ಲಿ, ಆಫ್ಘಾನಿಸ್ತಾನದ ಗಡಿಯಲ್ಲಿರುವ ಈ ಪರ್ವತಮಯ ಪ್ರಾಂತ್ಯದಲ್ಲಿ ಉಗ್ರಗಾಮಿಗಳ ವಿರುದ್ಧ ಹಲವಾರು ಸೇನಾ ಕಾರ್ಯಾಚರಣೆಗಳು ನಡೆದಿವೆ. ಭಾನುವಾರ, ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ನಡೆದ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಏಳು ಟಿಟಿಪಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಮಾಧ್ಯಮ ವಿಭಾಗವಾದ ಐಎಸ್‌ಪಿಆರ್ ತಿಳಿಸಿದೆ. ಈ ಏಳು ಮಂದಿಯಲ್ಲಿ ಮೂವರು ಆಫ್ಘಾನ್ ಪ್ರಜೆಗಳು ಮತ್ತು ಇಬ್ಬರು ಆತ್ಮಾಹುತಿ ಬಾಂಬರ್‌ಗಳಾಗಿದ್ದರು ಎನ್ನಲಾಗಿದೆ.

ಸೆಪ್ಟೆಂಬರ್ 13-14ರಂದು, ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 31 ಟಿಟಿಪಿ ಉಗ್ರರನ್ನು ಕೊಲ್ಲಲಾಗಿತ್ತು. ಈ ಪ್ರಾಂತ್ಯದಲ್ಲಿ ಉಗ್ರಗಾಮಿ ಚಟುವಟಿಕೆಗಳು ಇತ್ತೀಚೆಗೆ ಗಣನೀಯವಾಗಿ ಹೆಚ್ಚಾಗಿವೆ ಎನ್ನಲಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಆತಂಕ: ಜೂನ್‌ನಲ್ಲಿ, ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಖೈಬರ್ ಪಖ್ತುಂಖ್ವಾದಲ್ಲಿ ನಡೆಯುತ್ತಿರುವ ಡ್ರೋನ್ ದಾಳಿಗಳು ನಾಗರಿಕರ ಜೀವನಕ್ಕೆ ಗಂಭೀರ ಧಕ್ಕೆ ತರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿತ್ತು. “ಪಾಕಿಸ್ತಾನದ ಅಧಿಕಾರಿಗಳು ಖೈಬರ್ ಪಖ್ತುಂಖ್ವಾದ ನಾಗರಿಕರ ಜೀವನ ಮತ್ತು ಆಸ್ತಿಯನ್ನು ರಕ್ಷಿಸಲು ವಿಫಲರಾಗಿದ್ದಾರೆ. ಈ ದಾಳಿಗಳು ಮಾರ್ಚ್‌ನಿಂದ ತೀವ್ರಗೊಂಡಿವೆ,” ಎಂದು ಅಮ್ನೆಸ್ಟಿಯ ದಕ್ಷಿಣ ಏಷ್ಯಾದ ಉಪ ಪ್ರಾದೇಶಿಕ ನಿರ್ದೇಶಕಿ ಇಸಾಬೆಲ್ ಲಾಸ್ಸೀ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...