ಅಮೆರಿಕ | ಅಲಾಸ್ಕಾ ಬಳಿ 7.4 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ

Date:

ಅಮೆರಿಕ ಅಲಾಸ್ಕಾ ಪೆನಿನ್ಸುಲಾ ಪ್ರದೇಶದ ಬಳಿ ಭಾನುವಾರ (ಜುಲೈ 16) 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಹಿನ್ನೆಲೆ ಸುತ್ತಮುತ್ತಲ ಕೆಲವು ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್‌) ಹೇಳಿದೆ.

ಅಲಾಸ್ಕನ್‌ ಪೆನಿನ್ಸುಲಾ, ಅಲ್ಯೂಟಿಯನ್‌ ದ್ವೀಪಗಳು ಮತ್ತು ಕುಕ್‌ ಇನ್ಲೆಟ್‌ ಪ್ರದೇಶಗಳಲ್ಲಿ ನಡುಕದ ಅನುಭವವಾಗಿದೆ ಎಂದು ಅಲಾಸ್ಕಾ ಭೂಕಂಪ ಕೇಂದ್ರ ಹೇಳಿದೆ.

ಅಮೆರಿಕದ ಅಲಾಸ್ಕಾ ಪ್ರದೇಶವು ಭೂಕಂಪಗಳು ಸಂಭವಿಸುವ ಫೆಸಿಪಿಕ್‌ ವಲಯದ ಒಂದು ಭಾಗವಾಗಿದೆ. ಭೂಕಂಪವು 9.3 ಕಿ.ಮೀ (5.7 ಮೈಲು) ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಯುಎಸ್‌ಜಿಎಸ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1964ರ ಮಾರ್ಚ್‌ನಲ್ಲಿ ಅಲಾಸ್ಕಾದಲ್ಲಿ 9.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದು ಉತ್ತರ ಅಮೆರಿಕದಲ್ಲಿ ದಾಖಲಾದ ಪ್ರಬಲ ಭೂಕಂಪ ಎಂದು ವರದಿಯಾಗಿದೆ. ಇದು ಕರಾವಳಿಯ ಹಡಗು ಪ್ರದೇಶವನ್ನು ಧ್ವಂಸಗೊಳಿಸಿತು.

ಈ ಸುದ್ದಿ ಓದಿದ್ದೀರಾ? ಡೊನಾಲ್ಡ್‌ ಟ್ರಂಪ್‌ ಬಿಟ್ಟು ಅಮೆರಿಕ ಆಳಿದ ಅಧ್ಯಕ್ಷರೆಲ್ಲ ಗುಲಾಮಗಿರಿ ಪ್ರೋತ್ಸಾಹಿಸಿದ ವಂಶಕ್ಕೆ ಸೇರಿದವರು

ಅಮೆರಿಕ ಪಶ್ಚಿಮ ಕರಾವಳಿ, ಅಲಾಸ್ಕಾದ ಕೊಲ್ಲಿ ಮತ್ತು ಹವಾಯಿ ಪ್ರದೇಶಗಳಲ್ಲಿ ಭಾರೀ ಸುನಾಮಿ ಉಂಟಾಗಲು ಭೂಕಂಪ ಕಾರಣವಾಗಿತ್ತು.

ಭೂಕಂಪ ಮತ್ತು ಸುನಾಮಿಗೆ ಸುಮಾರು 250ಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದರು ಎಂದು ವರದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...