ಇಟಲಿ | ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; 9 ಮಂದಿ ಸಾವು, ಸಾವಿರಾರು ಮಂದಿ ಸ್ಥಳಾಂತರ

Date:

  • ಇಟಲಿ ಎಮಿಲಿಯಾ-ರೊಮಾಗ್ನಾ ಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ
  • ಇಮೋಲಾದಲ್ಲಿ ಆಯೋಜನೆ ಆಗಿದ್ದ ಫಾರ್ಮಲಾ ಒನ್ ಕಾರ್ಯಕ್ರಮ ರದ್ದು

ಇಟಲಿ ದೇಶದ ಉತ್ತರ ಭಾಗದ ಎಮಿಲಿಯಾ-ರೊಮಾಗ್ನಾ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ 9 ಮಂದಿ ಮೃತಪಟ್ಟಿದ್ದಾರೆ ಎಂದು ಗುರುವಾರ (ಮೇ 18) ವರದಿಯಾಗಿದೆ.

ದೇಶದ ಕೆಲವು ಪ್ರದೇಶಗಳಲ್ಲಿ ವಾರ್ಷಿಕವಾಗಿ ಆಗುವ ಅರ್ಧದಷ್ಟು ಮಳೆಯು ಕಳೆದ 36 ಗಂಟೆಗಳಲ್ಲಿ ಸುರಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ನಾಗರಿಕ ರಕ್ಷಣಾ ಸಚಿವ ನೆಲ್ಲೊ ಮುಸುಮೆಸಿ ಹೇಳಿದ್ದಾರೆ.

ಭಾರೀ ಮಳೆಯಿಂದ ನದಿಗಳು ತುಂಬಿದ ಪರಿಣಾಮ ಅವುಗಳ ದಂಡೆಗಳು ಒಡೆದು ನೀರು ಇಟಲಿ ಪಟ್ಟಣಗಳಿಗೆ ನುಗ್ಗಿದ್ದು ಸಾವಿರಾರು ಎಕರೆ ಕೃಷಿ ಭೂಮಿಯೂ ಮುಳುಗಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏತನ್ಮಧ್ಯೆ ಹಾನಿಗೊಳಗಾದ ಪ್ರದೇಶಗಳಿಗೆ ಸನಿಹದಲ್ಲಿರುವ ಇಮೋಲಾದಲ್ಲಿ ಫಾರ್ಮಲಾ ಒನ್ ಗ್ರ್ಯಾಂಡ್ ಪ್ರಿ ಕಾರ್ಯಕ್ರಮ ಭಾನುವಾರ (ಮೇ 21) ನಿಗದಿಯಾಗಿತ್ತು.

ಈಗ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ತುರ್ತು ಸೇವೆಗಳಿಗೆ ತೊಂದರೆಯಾಗಬಾರದು ಹಾಗೂ ಮೋಟಾರ್ ರೇಸಿಂಗ್‌ನ ಗ್ರ್ಯಾಂಡ್ ಪ್ರಿ ಕಾರ್ಯಕ್ರಮದಲ್ಲಿ ಅಪಾರ ಜನರು ಸೇರುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಟಲಿ ಎಮಿಲಿಯಾ-ರೊಮಾಗ್ನಾ ಪ್ರದೇಶದ ಅಧ್ಯಕ್ಷ ಸ್ಟೆಫಾನೊ ಬೊನಾಸಿನಿ ಸುದ್ದಿಗಾರರೊಂದಿಗೆ ಮಾತನಾಡಿ, “ನಾವು ಹಿಂದೆಂದೂ ನೋಡಿರದ ದುರಂತಕ್ಕೆ ಸಾಕ್ಷಿಯಾಗಿದ್ದೇವೆ. ಅಪಾರ ಪ್ರಮಾಣ ಮಳೆ ನೆಲದ ಮೇಲೆ ಬಿದ್ದ ಪರಿಣಾಮ ಹಾನಿಯಾಗಿದೆ” ಎಂದು ಹೇಳಿದರು.

ಕ್ರಿಶ್ಚಿಯನ್ ಪರಂಪರೆ ತಾಣಗಳಿಗೆ ಪ್ರಸಿದ್ಧವಾದ ಅಡ್ರಿಯಾಟಿಕ್ ಕರಾವಳಿ ನಗರ ರಾವೆನ್ನಾ ನಿರಂತರ ಮಳೆಯಿಂದ ಭಾರೀ ಹಾನಿಗೀಡಾಗಿದೆ.

ಭಾರೀ ಮಳೆಯಿಂದ ಅಪಾರ ಹಾನಿಯಾಗಿದ್ದು ತೊಂದರೆಗೀಡಾಗಿರುವ ಸುಮಾರು 14 ಸಾವಿರ ಜನರನ್ನು ಶೀಘ್ರದಲ್ಲಿ ಸ್ಥಳಾಂತರಿಸಲಾಗುವುದು ಎಂದು ಸ್ಥಳೀಯ ಆಂತರಿಕ ಸಚಿವಾಲಯದ ಪ್ರತಿನಿಧಿ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆ ರಾಯಿಟರ್ಸ್‌ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಜಮ್ಮು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ಸಹಚರನ ನಿವಾಸ ಸೇರಿ, 12 ಸ್ಥಳದಲ್ಲಿ ಸಿಬಿಐ ಶೋಧ

ದೇಶದಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ 37 ಪಟ್ಟಣಗಳು ಹಾಗೂ ಸಮುದಾಯಗಳಿಗೆ ಹಾನಿಯಾಗಿದೆ. ಸುಮಾರು 120 ಭೂಕುಸಿತ ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಟಲಿ ಬೊಲೊಗ್ನಾ ನಗರದ ಬಳಿ ಒಂದು ಸೇತುವೆ ಕುಸಿದು ಬಿದ್ದಿದೆ. ಕೆಲವು ರಸ್ತೆಗಳು ಪ್ರವಾಹದ ನೀರಿನಿಂದ ಆವೃತವಾಗಿವೆ. ಅನೇಕ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...