ಪೆಸಿಫಿಕ್ ರಾಷ್ಟ್ರ ವನವಾಟುವಿನಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

Date:

ಫ್ರೆಂಚ್ ಪ್ರಾಂತ್ಯದ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ದ್ವೀಪಗಳ ಆಗ್ನೇಯ ಭಾಗದಲ್ಲಿ ಶುಕ್ರವಾರ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಾದ ವನವಾಟು, ಫಿಜಿ ಹಾಗೂ ನ್ಯೂ ಕ್ಯಾಲೆಡೋನಿಯಾಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ದ್ವೀಪ ರಾಷ್ಟ್ರದ ಬಂದರು ಪಟ್ಟಣವಾದ ಲೆನಾಕೆಲ್‌ ತೀರದಲ್ಲಿ 1.5 ಅಡಿಯಷ್ಟು ಅಲೆಗಳು ಮತ್ತು ಫಿಜಿ, ಕಿರಿಬಾಟಿ, ಪಪುವಾ ನ್ಯೂಗಿನಿಯಾ, ಗುವಾಮ್ ಮತ್ತು ಇತರ ಪೆಸಿಫಿಕ್ ದ್ವೀಪಗಳಿಗೆ ಸಣ್ಣ  ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಹೇಳಿದೆ.

ಕರಾವಳಿ ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ವನವಾಟುವಿನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಚೇರಿಯು ಸೂಚನೆ ನೀಡಿದೆ. ರೇಡಿಯೋ ಸಂದೇಶಗಳನ್ನು ಆಲಿಸುವಂತೆ ಮತ್ತು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾರ್ವಜನಿಕರಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಿಜಿಯ ನೈಋತ್ಯಕ್ಕೆ, ನ್ಯೂಜಿಲೆಂಡ್‌ನ ಉತ್ತರಕ್ಕೆ ಹಾಗೂ ಆಸ್ಟ್ರೇಲಿಯಾದ ಪೂರ್ವದಲ್ಲಿ 10 ಕಿಮೀ (6.21 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂವಿಜ್ಞಾನ ಇಲಾಖೆ (ಯುಎಸ್‌ಜಿಎಸ್) ಹೇಳಿದೆ. ಇದು ನ್ಯೂ ಕ್ಯಾಲೆಡೋನಿಯಾ, ಫಿಜಿ ಮತ್ತು ವನವಾಟು ಪ್ರದೇಶಗಳಿಗೆ ಸಂಭವನೀಯ ಸುನಾಮಿಯ ಎಚ್ಚರಿಕೆಯನ್ನು ಉಂಟುಮಾಡಿದೆ ಎಂದು ʻಯುಎಸ್ ಸುನಾಮಿ ಎಚ್ಚರಿಕೆ ಕೇಂದ್ರʼ ಹೇಳಿದೆ.

ವನವಾಟು, ಫಿಜಿ ಮತ್ತು ನ್ಯೂ ಕ್ಯಾಲೆಡೋನಿಯಾಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ‘ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ (ಪಿಟಿಡಬ್ಲ್ಯುಸಿ)’ ತಿಳಿಸಿದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆ ತನ್ನ ಪೂರ್ವ ಕರಾವಳಿಯಲ್ಲಿರುವ ಲಾರ್ಡ್ ಹೋವ್ ದ್ವೀಪಕ್ಕೆ ಅಪಾಯವಿದೆ ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...