‘ಯುದ್ಧದ ಕೃತ್ಯ’: ಮಡುರೊ ಸೆರೆಗೆ ಮಮ್ದಾನಿ ಖಂಡನೆ

Date:

ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ ಮತ್ತು ಅವರ ಪತ್ನಿಯನ್ನು ಅಮೆರಿಕ ಮಿಲಿಟರಿ ಸೆರೆಹಿಡಿದಿರುವುದನ್ನು ನ್ಯೂಯಾರ್ಕ್‌ ಮೇಯರ್ ಜೋಹ್ರಾನ್ ಮಮ್ದಾನಿ ಖಂಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಜೊತೆ ನೇರವಾಗಿ ಮಾತನಾಡಿರುವ ಮಮ್ದಾನಿ, “ಸಾರ್ವಭೌಮ ರಾಷ್ಟ್ರದ ಮೇಲಿನ ಏಕಪಕ್ಷೀಯ ದಾಳಿಯು ‘ಯುದ್ಧದ ಕೃತ್ಯ’ವೆಂದು ಖಂಡಿಸಿದ್ದೇನೆ” ಎಂದು ಹೇಳಿದ್ದಾರೆ.

ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆ ಹಿಡಿದು, ನ್ಯೂಯಾರ್ಕ್‌ಗೆ ಕರೆತರಲಾಗಿದ್ದು, ಫೆಡರಲ್ ಕಸ್ಟಡಿಯಲ್ಲಿ ಇರಿಸಲಾಗಿದೆ. ಮಡುರೊ ವಿರುದ್ಧ ಅಮೆರಿಕವು ಮಾದಕ ದ್ರವ್ಯ-ಭಯೋತ್ಪಾದನಾ ಪಿತೂರಿ, ಕೊಕೇನ್ ಆಮದು ಪಿತೂರಿ, ಮೆಷಿನ್ ಗನ್‌ಗಳು ಮತ್ತು ವಿನಾಶಕಾರಿ ಸಾಧನಗಳ ಬಳಕೆ ಹಾಗೂ ಅಮೆರಿಕ ವಿರುದ್ಧ ವಿನಾಶಕಾರಿ ಸಾಧನಗಳನ್ನು ಸಂಗ್ರಹಿಸಲು ಪಿತೂರಿ ನಡೆಸಿದ ಆರೋಪ ಹೊರಿಸಲಾಗಿದೆ.

ಮಡುರೊ ಸೆರೆಯನ್ನು ಖಂಡಿಸಿರುವ ಮಮ್ದಾನಿ, “ಅಧ್ಯಕ್ಷ ಟ್ರಂಪ್‌ಗೆ ಕರೆ ಮಾಡಿ, ವೆನೆಜುವೆಲಾ ಮೇಲಿನ ದಾಳಿ ಮತ್ತು ಮಡುರೋ ಸೆರೆ ಕೃತ್ಯಕ್ಕೆ ನನ್ನ ವಿರೋಧ ದಾಖಲಿಸಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಮ್ದಾನಿ ಅವರು ನ್ಯೂಯಾರ್ಕ್ ನಗರದ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಎರಡು ದಿನಗಳಲ್ಲೇ ಇಂತಹದೊಂದು ಅಸಾಧಾರಣ ಅಂತರರಾಷ್ಟ್ರೀಯ ಬೆಳವಣಿಗೆ ಸಂಭವಿಸಿದೆ.

“ಸಾರ್ವಭೌಮ ರಾಷ್ಟ್ರದ ಮೇಲೆ ಏಕಪಕ್ಷೀಯವಾಗಿ ದಾಳಿ ಮಾಡುವುದು ಯುದ್ಧದ ಕೃತ್ಯ. ಇದು ಫೆಡರಲ್ ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ” ಎಂದು ಮಮ್ದಾನಿ ಹೇಳಿದ್ದಾರೆ.

“ವೆನೆಜುವೆಲಾದಲ್ಲಿ ಆಡಳಿತ ಬದಲಾವಣೆಗೆ ಅಮೆರಿಕದ ಯತ್ನವು ಕೇಲವ ಅಲ್ಲಿನ ಜನರ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ. ಇದು, ನ್ಯೂಯಾರ್ಕ್‌ ನಗರದಲ್ಲಿ ವಾಸಿಸುತ್ತಿರುವ ಹತ್ತಾರು ಸಾವಿರ ವೆನೆಜುವೆಲಾದವರು ಮತ್ತು ನ್ಯೂಯಾರ್ಕ್‌ ಜನರ ಮೇಲೂ ಪರಿಣಾಮ ಬೀರುತ್ತವೆ. ನನ್ನ ಕಾಳಜಿಯು ನ್ಯೂಯಾರ್ಕ್‌ನಲ್ಲಿರುವ ಎಲ್ಲ ಜನರ ಸುರಕ್ಷತೆ ಮೇಲಿದೆ” ಎಂದು ಮಮ್ದಾನಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...