ಅಫ್ಘಾನ್ ವಿದೇಶಾಂಗ ಸಚಿವ ಮುತ್ತಕಿ ದೆಹಲಿಗೆ ಆಗಮನ: ಉಭಯ ದೇಶಗಳ ಸಂಬಂಧಕ್ಕೆ ಹೊಸ ಆಯಾಮ

Date:

ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರು ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸಿದ್ದಾರೆ. ತಾಲಿಬಾನ್‌ ಸರ್ಕಾರವು ನಾಲ್ಕು ವರ್ಷಗಳ ಹಿಂದೆ ಅಶ್ರಫ್ ಘನಿ ಸರ್ಕಾರದ ಪತನದ ನಂತರ ಕಾಬೂಲ್‌ನಲ್ಲಿ ಅಧಿಕಾರ ಹಿಡಿದ ಬಳಿಕ ಇದು ಕಾಬೂಲ್‌ನಿಂದ ಭಾರತಕ್ಕೆ ಆಗಮಿಸಿದ ಮೊದಲ ಉನ್ನತ ಮಟ್ಟದ ಭೇಟಿಯಾಗಿದೆ.

ಮುತ್ತಾಕಿ ಅವರು ತಮ್ಮ ಆರು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ವಿವರವಾದ ಚರ್ಚೆ ನಡೆಸಲಿದ್ದಾರೆ ಎಂದು ಈ ವಿಷಯದ ಬಗ್ಗೆ ಮಾಹಿತಿಯುಳ್ಳವರು ತಿಳಿಸಿದ್ದಾರೆ.

“ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಾಕಿ ಅವರನ್ನು ನವದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಹಾರ್ದಿಕವಾಗಿ ಸ್ವಾಗತಿಸುತ್ತೇವೆ,” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಧೀರ್ ಜೈಸ್ವಾಲ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. “ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅವರೊಂದಿಗೆ ಚರ್ಚೆಗೆ ಎದುರು ನೋಡುತ್ತಿದ್ದೇವೆ,” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುತ್ತಾಕಿ ಅವರ ಕಾರ್ಯಕ್ರಮದಲ್ಲಿ ದಾರುಲ್ ಉಲೂಮ್ ದೇವಬಂದ್ ಧಾರ್ಮಿಕ ಶಾಲೆಗೆ ಭೇಟಿ ಮತ್ತು ತಾಜ್‌ಮಹಲ್ ವೀಕ್ಷಣೆಯು ಸೇರಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಬಿಹಾರ ಗೆಲ್ಲಲು ಮೋದಿ ರಣತಂತ್ರ- ಹಣದ ಹೊಳೆ, ಆಶ್ವಾಸನೆಗಳ ಮಳೆ!

ಕಳೆದ ತಿಂಗಳು ಮುತ್ತಾಕಿ ಅವರು ದೆಹಲಿಗೆ ಭೇಟಿ ನೀಡಬೇಕಿತ್ತಾದರೂ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC)ನಿರ್ಬಂಧದಿಂದಾಗಿ ಅವರಿಗೆ ತಡೆಯಾದ ಪ್ರಯಾಣ ನಿಷೇಧದಿಂದಾಗಿ ಆ ಭೇಟಿ ರದ್ದಾಗಿತ್ತು. ಆದರೆ, ಸೆಪ್ಟೆಂಬರ್ 30 ರಂದು ಯುಎನ್ಎಸ್‌ಸಿ ಮುತ್ತಾಕಿ ಅವರಿಗೆ ಅಕ್ಟೋಬರ್ 9 ರಿಂದ 16 ರವರೆಗೆ ದೆಹಲಿಗೆ ಭೇಟಿ ನೀಡಲು ತಾತ್ಕಾಲಿಕವಾಗಿ ಪ್ರಯಾಣ ನಿಷೇಧದಿಂದ ವಿನಾಯಿತಿ ನೀಡಿದೆ ಎಂದು ವಿಶ್ವಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಈ ವಿನಾಯಿತಿಯು ಅಫ್ಘಾನ್ ವಿದೇಶಾಂಗ ಸಚಿವರ ಭಾರತ ಭೇಟಿಗೆ ಮಾರ್ಗ ಮಾಡಿಕೊಟ್ಟಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ತಾಲಿಬಾನ್‌ನ ಎಲ್ಲ ಪ್ರಮುಖ ನಾಯಕರ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದು, ಅವರಿಗೆ ವಿದೇಶಿ ಪ್ರಯಾಣಕ್ಕೆ ವಿನಾಯಿತಿ ಪಡೆಯುವ ಅಗತ್ಯವಿದೆ.

ಮುತ್ತಾಕಿ ಅವರ ಈ ಭೇಟಿಯು ಭಾರತ ಮತ್ತು ಕಾಬೂಲ್‌ನ ತಾಲಿಬಾನ್ ಸರ್ಕಾರದ ನಡುವಿನ ಸಂಬಂಧಕ್ಕೆ ಹೊಸ ಆಯಾಮವನ್ನು ಒದಗಿಸುವ ನಿರೀಕ್ಷೆಯಿದೆ. ಈ ಹಿಂದೆ, ಮೇ 15 ರಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುತ್ತಾಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಇದು ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಭಾರತ ಮತ್ತು ಕಾಬೂಲ್ ನಡುವಿನ ಉನ್ನತ ಮಟ್ಟದ ಸಂಪರ್ಕವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...