ಭಾರತೀಯ ಉದ್ಯಮಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ಅಫ್ಘಾನಿಸ್ತಾನ

Date:

ಭಾರತದ ಜತೆಗಿನ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಮುಂದುವರಿಸಿರುವ ಅಫ್ಘಾನಿಸ್ತಾನ, ಭಾರತೀಯ ಉದ್ಯಮಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ಘೋಷಿಸಿದೆ. ಜತೆಗೆ ಕಚ್ಚಾ ವಸ್ತುಗಳು ಮತ್ತು ಯಂತ್ರೋಪಕರಣಗಳ ಮೇಲೆ ಕೇವಲ ಶೇಕಡ 1ರಷ್ಟು ಆಮದು ಸುಂಕ ವಿಧಿಸಲಾಗುವುದು ಎಂದು ವಾಣಿಜ್ಯ ಸಚಿವ ನೂರುದ್ದೀನ್ ಅಝೀಝಿ ಶುಕ್ರವಾರ ಪ್ರಕಟಿಸಿದ್ದಾರೆ.

ಹಲವು ವರ್ಷಗಳಿಂದ ಸಂಘರ್ಷದಲ್ಲಿ ಸಿಲುಕಿದ್ದ ದೇಶಕ್ಕೆ ಸಿಮೆಂಟ್, ಅಕ್ಕಿ, ಜವಳಿ, ಔಷಧ, ಗಣಿಗಾರಿಕೆ ಮತ್ತು ವಿದ್ಯುತ್ ಆದ್ಯತೆಯ ಕ್ಷೇತ್ರಗಳು ಎಂದು ಗುರುತಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಈ ʼಗಣ್ಯರುʼ ಸರ್ಕಾರದ ತುತ್ತೂರಿಯಾದರೆ ಸಾಕೇ? ಸತ್ಯವಂತ ಸಮಾಜಮುಖಿ ಆಗಲೂ ಬೇಕೇ? 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶಿ ಕೈಗಾರಿಕೆಗಳನ್ನು ಬೆಂಬಲಿಸಲು ಕಚ್ಚಾ ವಸ್ತುಗಳು ಮತ್ತು ಯಂತ್ರೋಪಕರಣಗಳ ಮೇಲೆ ಕೇವಲ ಶೇಕಡ 1ರಷ್ಟು ಆದ್ಯತಾ ಸುಂಕವನ್ನು ವಿಧಿಸಲಾಗುತ್ತದೆ ಹಾಗೂ ಅಫ್ಘಾನಿಸ್ತಾನದಲ್ಲಿ ಆರಂಭವಾಗುವ ಭಾರತೀಯ ಉದ್ಯಮಗಳಿಗೆ ಐದು ವರ್ಷಗಳ ಕಾಲ ತೆರಿಗೆ ವಿನಾಯಿತಿ ನೀಡಲಾಗುತ್ತದೆ” ಎಂದು ಪಿಎಚ್‌ಡಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಸಮಾರಂಭದಲ್ಲಿ ಹೇಳಿದರು.

ಅಫ್ಘಾನಿಸ್ತಾನವು ಸ್ಥಿತಿಸ್ಥಾಪಕತ್ವ ಹೊಂದಿದ ಮತ್ತು ಸಶಕ್ತ ವ್ಯಾಪಾರ ಪರಿಸರವನ್ನು ಕಲ್ಪಿಸಿಕೊಟ್ಟಿದೆ ಹಾಗೂ ಭಾರತೀಯ ಕಂಪನಿಗಳು ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಬೇಕು ಎನ್ನುವುದು ನಮ್ಮ ಬಯಕೆ ಎಂದು ಸ್ಪಷ್ಟಪಡಿಸಿದರು. ಉತ್ಪಾದನಾ ಉತ್ತೇಜಕಗಳ ಬಗ್ಗೆ ಪ್ರಸ್ತಾಪಿಸಿದ ಅವರು, “ನಾವು ಆರ್ಥಿಕ ದೃಷ್ಟಿಕೋನದ ನೀತಿಗಳನ್ನು ಹೊಂದಿದ್ದೇವೆ. ಆದ್ದರಿಂದ ಉತ್ಪಾದನೆ ಶೇಕಡ 20ರಷ್ಟು ಹೆಚ್ಚಿಸಿದರೆ, ನಾವು ಸರ್ಕಾರಿ ಬೆಂಬಲವನ್ನು ಹೆಚ್ಚಿಸುತ್ತೇವೆ. ಉತ್ಪಾದನೆ ಹೆಚ್ಚಿದಂತೆಲ್ಲ ಸರ್ಕಾರದ ಉತ್ತೇಜನವೂ ಹೆಚ್ಚುತ್ತದೆ ಎಂದು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...