ಬಾಂಗ್ಲಾದೇಶ | ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವಿದ್ಯಾರ್ಥಿ ನಾಯಕ ಸಾವು

Date:

ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯ ಬೆನ್ನಲ್ಲೇ, ಸೋಮವಾರ (ಡಿ.22) ನೈಋತ್ಯ ಖುಲ್ನಾ ನಗರದಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ನಾಯಕ ಮೊತಾಲೇಬ್ ಸಿಕ್ದರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

​ನ್ಯಾಷನಲ್ ಸಿಟಿಜನ್ ಪಾರ್ಟಿಯ (ಎನ್‌ಸಿಪಿ) ಖುಲ್ನಾ ವಿಭಾಗದ ಮುಖ್ಯಸ್ಥ ಹಾಗೂ ಪಕ್ಷದ ಕಾರ್ಮಿಕ ರಂಗದ ಕೇಂದ್ರ ಸಂಯೋಜಕರಾಗಿದ್ದ ಮೊತಾಲೇಬ್ ಸಿಕ್ದರ್ ಅವರ ತಲೆಗೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು.

​ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖುಲ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಯ ಎಡಭಾಗಕ್ಕೆ ಗುಂಡು ತಗುಲಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಆತಂಕ ಸೃಷ್ಟಿಸಿದ ಸರಣಿ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನಗೊಳ್ಳಲು ಕಾರಣವಾದ ವಿದ್ಯಾರ್ಥಿ ಹೋರಾಟದ ಮುಂಚೂಣಿ ನಾಯಕರಾಗಿದ್ದ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿರುವುದು ಬಾಂಗ್ಲಾದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಡಿ.12 ರಂದು ಢಾಕಾದಲ್ಲಿ ಚುನಾವಣಾ ಪ್ರಚಾರದ ವೇಳೆ ಹಾದಿ ಅವರ ಮೇಲೆ ಗುಂಡು ಹಾರಿಸಲಾಗಿತ್ತು, ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಾ ಗುರುವಾರ (ಡಿ.18) ಮೃತಪಟ್ಟಿದ್ದರು. ಇದೀಗ ಮೊತಾಲೇಬ್ ಅವರ ಹತ್ಯೆಯು ವಿದ್ಯಾರ್ಥಿ ನಾಯಕರ ಮೇಲಿನ ಯೋಜಿತ ದಾಳಿ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಾಯು ಮಾಲಿನ್ಯದ ಚರ್ಚೆಯೇ ಇಲ್ಲದೆ ಮುಗಿಯಿತು ಸಂಸತ್ ಅಧಿವೇಶನ!

​ಹಾದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಫೈಸಲ್ ಕರೀಂ ಮಸೂದ್‌ನಿಗಾಗಿ ಶೋಧ ಮುಂದುವರಿದಿದ್ದು, ಆತನ ಪೋಷಕರು ಹಾಗೂ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಂತಕರ ಪತ್ತೆಗೆ ಎಲ್ಲ ಕ್ರಮ ಕೈಗೊಳ್ಳುವುದಾಗಿ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಭರವಸೆ ನೀಡಿದ್ದರೂ, ಸರಣಿ ಹತ್ಯೆಗಳಿಂದಾಗಿ ದೇಶದ ಪ್ರಮುಖ ನಗರಗಳಲ್ಲಿ ಆಕ್ರೋಶ ಭುಗಿಲೆದ್ದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...