ಇಮ್ರಾನ್‌ ಖಾನ್‌ ಬಂಧನ | ಸೇನಾ ಕಚೇರಿಗಳ ಮೇಲೆ ದಾಳಿ; ಘರ್ಷಣೆ ವೇಳೆ ಇಬ್ಬರ ಸಾವು

Date:

  • ಪಾಕಿಸ್ತಾನದ ಹಲವು ನಗರಗಳಲ್ಲಿ ಪ್ರತಿಭಟನೆ; 144 ಸೆಕ್ಷನ್‌ ಜಾರಿ
  • ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದ ಪಿಟಿಐ ಪಕ್ಷದ ನಾಯಕರು

ಭ್ರಷ್ಟಾಚಾರದ ಆರೋಪದ ಹಿನ್ನೆಲೆ ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್‌ ಖಾನ್‌ ಬಂಧನವಾಗಿರುವ ಹಿನ್ನೆಲೆ ಪಾಕಿಸ್ತಾನದ ಹಲವು ನಗರಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಇಸ್ಲಾಮಾಬಾದ್‌ ಸೇರಿದಂತೆ ಹಲವೆಡೆ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಸೇನಾ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಉಂಟಾದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

70 ವರ್ಷ ವಯಸ್ಸಿನ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಅರೆಸೇನಾ ಪಡೆ ಮಂಗಳವಾರ ಬಂಧಿಸಿತ್ತು. ಕಳೆದ ವರ್ಷ ಏಪ್ರಿಲ್‌ನಲ್ಲಿ ಅಧಿಕಾರದಿಂದ ಕೆಳಗಿಳಿದ ನಂತರ ಇಮ್ರಾನ್ ಖಾನ್ ನೂರಕ್ಕೂ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಮ್ರಾನ್‌ ಖಾನ್ ಬಂಧನದ ಸುದ್ದಿ ವೈರಲ್ ಆಗುತ್ತಿದ್ದಂತೆ ದೇಶದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಬೆಂಬಲಿಗರು ದೊಣ್ಣೆ ಮತ್ತು ಮಾರಕಾಸ್ತ್ರಗಳೊಂದಿಗೆ ಪಾಕಿಸ್ತಾನ ಸೇನೆಯ ಜನರಲ್ ಹೆಡ್‌ಕ್ವಾರ್ಟರ್ಸ್‌ ಸೇರಿದಂತೆ ಭದ್ರತಾ ಸಂಸ್ಥೆಗಳ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಫ್ಯಾಸಿಸ್ಟ್ ಸರ್ಕಾರದ ವಿರುದ್ಧ ಪಿಟಿಐ ಪಕ್ಷದ ನಾಯಕರು ಬುಧವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದರು.

ಪಂಜಾಬ್, ಬಲೂಚಿಸ್ತಾನ್ ಮತ್ತು ಖೈಬರ್-ಪಖ್ತುಂಖ್ವಾ ಪ್ರದೇಶಗಳ ಪ್ರಮುಖ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್‌ ಜಾರಿ ಮಾಡಿದರೂ ಪ್ರತಿಭಟನಾಕಾರರು ಅದನ್ನು ಲೆಕ್ಕಿಸಿಲ್ಲ. ಹಾಗಾಗಿ ಲಾಹೋರ್, ಪೇಶಾವರ, ಕ್ವೆಟ್ಟಾ, ಕರಾಚಿ ಮತ್ತು ರಾವಲ್‌ಪಿಂಡಿಯಲ್ಲಿ ಹಿಂಸಾಚಾರ ಹಾಗೂ ವಿಧ್ವಂಸಕ ಘಟನೆಗಳು ವರದಿಯಾಗಿವೆ.

ಪಿಟಿಐ ಕಾರ್ಯಕರ್ತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಕಾನೂನು ಜಾರಿ ಸಂಸ್ಥೆಗಳೊಂದಿಗಿನ ಘರ್ಷಣೆಯಿಂದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಮತ್ತು ವಾಹನಗಳಿಗೆ ಹಾನಿ ಉಂಟಾಗಿದೆ.

ಈ ಸುದ್ದಿ ಓದಿದ್ದೀರಾ? ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

ಎರಡು ದಿನಗಳಿಂದ ನಡೆಯುತ್ತಿರುವ ಘರ್ಷಣೆಯಿಂದಾಗಿ ಪಾಕಿಸ್ತಾನದ ರಾಷ್ಟ್ರೀಯ ಖಜಾನೆಗೆ ಅಂದಾಜು 50 ಶತಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ. ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ಇಮ್ರಾನ್‌ ಖಾನ್ ಅವರನ್ನು ಮತ್ತಷ್ಟು ದಿನ ತಮ್ಮ ವಶಕ್ಕೆ ನೀಡುವಂತೆ ಕೋರಲು ಬುಧವಾರ ನ್ಯಾಯಾಲಯದ ಮುಂದೆ ಎನ್‌ಎಬಿ ಅಧಿಕಾರಿಗಳು ಹಾಜರು ಪಡಿಸಲಿದ್ದಾರೆ.

ಭದ್ರತಾ ದೃಷ್ಟಿಯಿಂದ ಪ್ರಕರಣದ ವಿಚಾರಣೆಯನ್ನು ಇಸ್ಲಾಮಾಬಾದ್ ಜಿಲ್ಲಾ ನ್ಯಾಯಾಲಯದ ಬದಲಿಗೆ ರಾಜಧಾನಿಯ ಭಾರೀ ಭದ್ರತೆಯ ಪೊಲೀಸ್ ಲೈನ್ಸ್ ಪ್ರದೇಶದಲ್ಲಿ ನಡೆಸಲಾಗುವುದು ಎಂದು ಇಸ್ಲಾಮಾಬಾದ್ ಪೊಲೀಸರು ತಿಳಿಸಿದ್ದಾರೆ. ಆಯುಕ್ತರ ಕಚೇರಿಯು ಸುತ್ತೋಲೆಯ ಮೂಲಕ ಪೊಲೀಸ್ ಲೈನ್‌ಗಳನ್ನು ತಾತ್ಕಾಲಿಕ ನ್ಯಾಯಾಲಯ ಎಂದು ಗೊತ್ತುಪಡಿಸಿದೆ.

ಇಮ್ರಾನ್‌ ಖಾನ್ ನ್ಯಾಯಾಲಯಕ್ಕೆ ಹಾಜರಾಗುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್‌ ಹಾಕಲಾಗಿದೆ. ಆ ಪ್ರದೇಶದಲ್ಲಿ ಸಂಬಂಧಿತ ವ್ಯಕ್ತಿಗಳು ಮತ್ತು ವಕೀಲರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...