ಆಪರೇಷನ್ ಸಿಂಧೂರ | ಭಾರತದ ವಿಮಾನಗಳನ್ನು ನಾವೂ ಹೊಡೆದುರುಳಿಸಿದ್ದೇವೆ ಎಂದ ಪಾಕ್

Date:

ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಎರಡು ವಾರಗಳ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈ ನಡುವೆ “ಭಾರತದ ವಿಮಾನಗಳನ್ನು ನಾವೂ ಹೊಡೆದುರುಳಿಸಿದ್ದೇವೆ” ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ತಿಳಿಸಿದೆ. ಈ ವರದಿ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ಸೇನೆಯು, “ನ್ಯಾಯ ದೊರಕಿತು. ಜೈ ಹಿಂದ್!” ಎಂದು ಹೇಳಿದೆ.

ಇದನ್ನು ಓದಿದ್ದೀರಾ? BREAKING NEWS : ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕ್ ಭಯೋತ್ಪಾದಕರ‌ ನೆಲೆಗಳ ಮೇಲೆ ಭಾರತದಿಂದ ವಾಯು ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ದಾಳಿ ನಡೆಸಿದ ಕೂಡಲೇ ಪಾಕಿಸ್ತಾನದ ಮಿಲಿಟರಿ ವಕ್ತಾರರು ARY ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. “ದೇಶ ತಾನೇ ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇದಕ್ಕೆ ಪ್ರತಿಕ್ರಿಯಿಸುತ್ತದೆ” ಎಂದು ಹೇಳಿದ್ದಾರೆ. ಈ ಬಗ್ಗೆ ಮುಂಜಾನೆ 04:38ಕ್ಕೆ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದಾರೆ.

“ಭಾರತವು ಆರು ಸ್ಥಳಗಳನ್ನು ಗುರಿಯಾಗಿಸಿಕೊಂಡು ಒಟ್ಟು 24 ದಾಳಿಗಳನ್ನು ಮಾಡಿದೆ. ಇದರಲ್ಲಿ ಒಂದು ಮಗು ಸೇರಿದಂತೆ ಎಂಟು ಪಾಕಿಸ್ತಾನಿಗಳು ಸಾವನ್ನಪ್ಪಿದ್ದಾರೆ. 35 ಜನರು ಗಾಯಗೊಂಡಿದ್ದಾರೆ. ಮಸೀದಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ, ನಾಲ್ಕು ಕ್ವಾರ್ಟರ್‌ಗಳು ಸಹ ನಾಶವಾಗಿವೆ. ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಪಾಕಿಸ್ತಾನದ ವಾಯುಪಡೆಯು ಎರಡು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಿದೆ ಎಂದೂ ಡಿಜಿ ಐಎಸ್‌ಪಿಆರ್ ಚೌಧರಿ ಹೇಳಿಕೊಂಡಿದ್ದಾರೆ. ಭಟಿಂಡಾ ಮತ್ತು ಅಖ್ನೂರ್‌ನಲ್ಲಿ ಈ ಘಟನೆ ನಡೆದಿದೆ ಎಂದಿದ್ದಾರೆ.

ಪಾಕಿಸ್ತಾನದ ಮಾಧ್ಯಮ ಪಿಟಿವಿ ಮೂರು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ವರದಿ ಮಾಡಿದೆ. ಆದರೆ ಈ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ. ಕಾಶ್ಮೀರದ ಪ್ಯಾಂಪೋರ್‌ನಲ್ಲಿ ಒಂದು ವಿಮಾನ ಅಪಘಾತಕ್ಕೀಡಾಗಿದೆ ಎಂಬ ವಿಡಿಯೋಗಳು ಹರಿದಾಡುತ್ತಿದೆ. ಆದರೆ ಅದು ಯಾವ ವಿಮಾನ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಅದೇ ರೀತಿ, ಜಮ್ಮು ಬಳಿಯ ಅಖ್ನೂರ್‌ನಲ್ಲಿ ವಿಮಾನ ಅಪಘಾತಕ್ಕೀಡಾಗಿರುವ ವರದಿಗಳಿವೆ. ಆದರೆ ಭಾರತೀಯ ರಕ್ಷಣಾ ಸಚಿವಾಲಯ ಇದನ್ನು ದೃಢೀಕರಿಸಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...