ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಇಸ್ರೇಲ್ ಆಸ್ಪತ್ರೆ ಮೇಲೆ ಇರಾನ್ ದಾಳಿ: ಪ್ರತಿದಾಳಿಗೆ ಮುಂದಾದ ಇಸ್ರೇಲ್

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶರಣಾಗುವಂತೆ ಇರಾನ್‌ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್ ನಡುವೆ ವಾಯುದಾಳಿ ತೀವ್ರಗೊಂಡಿದೆ. ಈಗಾಗಲೇ ಇರಾನ್ ಮೇಲೆ ದಾಳಿ ನಡೆಸುವ ಯೋಜನೆಗೆ ಟ್ರಂಪ್ ಅನುಮೋದನೆ ನೀಡಿದ್ದಾರೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದೆ.

ಕಳೆದ ಶುಕ್ರವಾರ ದಾಳಿ ಪ್ರಾರಂಭವಾಗಿದ್ದು ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 585 ಜನರು ಸಾವನ್ನಪ್ಪಿದ್ದಾರೆ ಎಂದು ವಾಷಿಂಗ್ಟನ್ ಡಿಸಿ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರು ಹೇಳಿದ್ದಾರೆ. ಈ ಪೈಕಿ 239 ನಾಗರಿಕರು ಮತ್ತು 126 ಭದ್ರತಾ ಸಿಬ್ಬಂದಿ ಎಂದು ಹೇಳಲಾಗಿದೆ. ಪ್ರತೀಕಾರವಾಗಿ ಇಸ್ರೇಲ್ ಮೇಲೆ ಇರಾನ್ ಸುಮಾರು 400 ಕ್ಷಿಪಣಿಗಳನ್ನು ಹಾರಿಸಿದೆ. ಅದರಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ನಾಗರಿಕರು ಎಂದು ಇಸ್ರೇಲ್ ಹೇಳಿಕೊಂಡಿದೆ.

ಇದನ್ನು ಓದಿದ್ದೀರಾ? ಟಿವಿಯಲ್ಲಲ್ಲ, ಮನೆಯ ಹೊರಗೆ ಯುದ್ಧ ನಡೆಯುತ್ತಿದೆ: ಇರಾನ್-ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಉಭಯ ದೇಶಗಳ ನಡುವಿನ ಸಂಘರ್ಷವು ತೀವ್ರ ಹಂತಕ್ಕೆ ತಲುಪುವ ಸಾಧ್ಯತೆ ಕಂಡುಬಂದಿದೆ. ಬುಧವಾರ ಶರಣಾಗುವಂತೆ ಇರಾನ್‌ಗೆ ಅಮೆರಿಕ ಅಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಅಮೆರಿಕ ”ಇರಾನ್ ಮೇಲೆ ದಾಳಿ ನಡೆಸಲೂ ಬಹುದು, ನಡೆಸದಿರಲೂ ಬಹುದು. ನಾನು ಏನು ಮಾಡಲಿದ್ದೇನೆ ಎಂದು ಯಾರಿಗೂ ತಿಳಿದಿಲ್ಲ” ಎಂದು ಎಂದಿನಂತೆ ಗೊಂದಲಕಾರಿ ಹೇಳಿಕೆಯನ್ನೇ ಟ್ರಂಪ್ ನೀಡಿದ್ದಾರೆ.

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇರಾನ್ ಶರಣಾಗುವಂತೆ ಟ್ರಂಪ್ ಹೇಳಿರುವುದನ್ನು ಖಂಡಿಸಿದ್ದಾರೆ. ಯಾವುದೇ ಕಾರಣಕ್ಕೂ ಇರಾನ್ ಶರಣಾಗುವುದಿಲ್ಲ ಎಂದು ಹೇಳಿದ್ದಾರೆ. ಇವೆಲ್ಲವುದರ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್ ನಡುವೆ ವಾಯುದಾಳಿಗಳು ತೀವ್ರಗೊಳ್ಳುತ್ತಿದೆ. ಆಸ್ಪತ್ರೆ ಮೇಲೆ ಕ್ಷಿಪಣಿ ದಾಳಿ ನಡೆದಿದೆ ಎಂದು ಇಸ್ರೇಲ್ ಹೇಳಿಕೊಂಡರೆ, ಇನ್ನೊಂದೆಡೆ ಇರಾನ್‌ನ ಅರಾಕ್ heavy water reactor ಮೇಲೆ ದಾಳಿ ನಡೆಸಲು ಇಸ್ರೇಲ್ ಮುಂದಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...