26/11 ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್‌ನ ಪ್ರಮುಖ ನಿಕಟವರ್ತಿ ಕರಾಚಿಯಲ್ಲಿ ಗುಂಡಿಕ್ಕಿ ಹತ್ಯೆ

Date:

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬನಾದ ಹಾಗೂ 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖನಾದ ಮುಫ್ತಿ ಕೈಸರ್ ಫಾರೂಕ್‌ನನ್ನು ಕರಾಚಿಯಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮ ವರದಿ ಮಾಡಿದೆ.

ಕೈಸರ್ ಫಾರೂಕ್ ಎಲ್‌ಇಟಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬ ಮತ್ತು 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿ ಹಫೀಜ್ ಸಯೀದ್‌ನ ನಿಕಟ ಸಹವರ್ತಿ.

ಶನಿವಾರ ಸಮನಾಬಾದ್ ಪ್ರದೇಶದ ಧಾರ್ಮಿಕ ಸಂಸ್ಥೆಯೊಂದರ ಬಳಿ ನಡೆದ ಉದ್ದೇಶಿತ ದಾಳಿಯಲ್ಲಿ 30 ವರ್ಷದ ಖೈಸರ್ ಫಾರೂಕ್‌ಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಹಿಳಾ ಮೀಸಲಾತಿ ಮಸೂದೆ 2034ರವರೆಗೂ ಜಾರಿಯಾಗುವುದಿಲ್ಲ, ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ: ಖರ್ಗೆ

ಬೆನ್ನಿಗೆ ಗುಂಡು ತಗುಲಿದ್ದ ಫಾರೂಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ. ಫಾರೂಕ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದಾಳಿಯಲ್ಲಿ 10 ವರ್ಷದ ಬಾಲಕನೂ ಗಾಯಗೊಂಡಿದ್ದಾನೆ.

ಈ ಉದ್ದೇಶಿತ ದಾಳಿಯ ಹಿಂದಿನ ಉದ್ದೇಶಗಳನ್ನು ಪತ್ತೆ ಹಚ್ಚಲು ಸ್ಥಳೀಯ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಘಟನೆಯು ಲಷ್ಕರ್-ಎ-ತೊಯ್ಬಾ ತಂಡಕ್ಕೆ ದೊಡ್ಡ ಆಘಾತವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಅಸ್ಥಿರ ಪರಿಸ್ಥಿತಿಗಳ ನಡುವೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಪಾಕಿಸ್ತಾನದ ಭದ್ರತಾ ಪಡೆಗಳು ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...