ವಿಮಾನ ದುರಂತ: ‘ಆತುರದ, ಊಹಾಪೋಹ’ ಮಾಧ್ಯಮ ವರದಿ ಎಂದ ಅಮೆರಿಕ ತನಿಖಾ ಸಂಸ್ಥೆ

Date:

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ಇಂಧನ ಹರಿವನ್ನು ನಿಯಂತ್ರಿಸುವ ಸ್ವಿಚ್‌ಗಳನ್ನು ಕ್ಯಾಪ್ಟನ್ ಎಳೆದಿರಬಹುದು ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಾಧ್ಯಮಗಳ ವರದಿಯನ್ನು ಅಮೆರಿಕ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯ(NTSB) ಮುಖ್ಯಸ್ಥರು ಟೀಕಿಸಿದ್ದು, ‘ಆತುರದ, ಊಹಾಪೋಹ’ ವರದಿ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ NTSB ಅಧ್ಯಕ್ಷೆ ಜೆನ್ನಿಫರ್ ಹೋಮೆಂಡಿ ಪೋಸ್ಟ್ ಮಾಡಿದ್ದಾರೆ. “ಈ ರೀತಿಯ ತನಿಖೆ ಸಾಮಾನ್ಯವಾಗಿ ಸಮಯ ತೆಗೆದುಕೊಳ್ಳುತ್ತದೆ. ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಈ ಬಗ್ಗೆ ಮಾಧ್ಯಮಗಳ ವರದಿಯು ಆತುರವಾಗಿ ಮಾಡಲಾಗಿದೆ ಮತ್ತು ಊಹಾತ್ಮಕವಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ಎರಡೂ ಎಂಜಿನ್‌ಗಳು ಸ್ಥಗಿತ: ಏರ್‌ ಇಂಡಿಯಾ ದುರಂತದ ತನಿಖಾ ವರದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾದ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ 242 ರಲ್ಲಿ 241 ಜನರು ಸೇರಿದಂತೆ ಕನಿಷ್ಠ 270 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ತನಿಖಾ ವರದಿ ಇತ್ತೀಚೆಗೆ ಬಿಡುಗಡೆಗೊಂಡಿದೆ. ಎನ್‌ಟಿಎಸ್‌ಬಿ ನೆರವಿನೊಂದಿಗೆ ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ ನೇತೃತ್ವದ ತನಿಖಾಧಿಕಾರಿಗಳು ಪುರಾವೆಗಳನ್ನು ಒಟ್ಟುಗೂಡಿಸಿದ್ದಾರೆ.

ಹಾಗೆಯೇ ತನಿಖೆ ನಡೆಯುತ್ತಿರುವಾಗ ಯಾವುದೇ ನಿರ್ಧಾರಕ್ಕೆ ಬರಬಾರದು ಎಂದು ಎಎಐಬಿ ಮತ್ತು ಏರ್ ಇಂಡಿಯಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ಯಾಂಪ್‌ಬೆಲ್ ವಿಲ್ಸನ್ ಸಹ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಇನ್ನು ಅಂತಿಮ ವರದಿ ಬಿಡುಗಡೆಗೆ ಒಂದು ವರ್ಷ ತೆಗೆದುಕೊಳ್ಳಬಹುದು ಅಥವಾ ಅದಕ್ಕೂ ಅಧಿಕ ಸಮಯ ತೆಗೆದುಕೊಳ್ಳಬಹುದು.

ಈ ದುರಂತದ ಪ್ರಾಥಮಿಕ ತನಿಖಾ ವರದಿ ಪ್ರಕಾರ ಟೇಕ್ ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡು ಇಂಧನ ನಿಯಂತ್ರಣ ಸ್ವಿಚ್‌ಗಳು ತ್ವರಿತವಾಗಿ ‘ಕಟ್‌ಆಫ್’ ಸ್ಥಾನಕ್ಕೆ ಮರಳಿದೆ. ಎಂಜಿನ್‌ಗಳಿಗೆ ಇಂಧನ ಪೂರೈಕೆ ಕಡಿಮೆಯಾಗಿದ್ದು, ವಿಮಾನವು ಸಂಪೂರ್ಣ ಒತ್ತಡವನ್ನೂ ಕಳೆದುಕೊಂಡಿತ್ತು. ಅಂದರೆ ಎರಡೂ ಇಂಜಿನ್‌ಗಳು ಸ್ಥಗಿತಗೊಂಡಿತ್ತು.

ಇದನ್ನು ಓದಿದ್ದೀರಾ? ಏರ್‌ ಇಂಡಿಯಾ ದುರಂತ | ವಿಮಾನ ಅಪ್ಪಳಿಸಿದ ಮುನ್ನಿನ ಆ 32 ಸೆಕೆಂಡುಗಳು!

ವಿಮಾನದಿಂದ ಬಂದ ಕಾಕ್‌ಪಿಟ್ ಧ್ವನಿ ರೆಕಾರ್ಡಿಂಗ್‌ನಿಂದಾಗಿ ಪೈಲಟ್ ಕ್ಲೈವ್ ಕುಂದರ್ ಅವರು ಸಹ ಪೈಲಟ್‌ ಸುಮೀತ್ ಸಭರ್ವಾಲ್ ಅವರ ಬಳಿಕ ಸ್ವಿಚ್‌ಗಳನ್ನು ಏಕೆ ಸರಿಸಿದ್ದೀರಿ ಎಂದು ಕೇಳಿರುವುದು ತಿಳಿದುಬಂದಿದೆ. ಈ ವೇಳೆ ಸುಮೀತ್ ಸಭರ್ವಾಲ್ ತಾನು ಸ್ವಿಚ್‌ಗಳನ್ನು ಸರಿಸಿಲ್ಲ ಎಂದು ಉತ್ತರಿಸಿದ್ದಾರೆ.

ಇದೀಗ ಸ್ವಿಚ್‌ಗಳನ್ನು ಹೇಗೆ ಮತ್ತು ಏಕೆ ಆಫ್ ಮಾಡಲಾಗಿದೆ ಎಂಬುದು ತನಿಖಾಧಿಕಾರಿಗಳ ವಿಚಾರಣೆಯ ಪ್ರಮುಖ ವಿಷಯವಾಗಿದೆ. ಕೆಲವರು ಇದು ಪೈಲಟ್‌ನ ಅಜಾಗರೂಕತೆ ಎಂದು ಹೇಳಿದರೆ, ಇನ್ನು ಕೆಲವು ತಜ್ಞರು ಈ ರೀತಿ ಆಗಲು ಸಾಧ್ಯವೇ ಇಲ್ಲ, ಇದು ವಿಮಾನದ ಸಮಸ್ಯೆ ಎಂದು ಹೇಳಿದ್ದಾರೆ. ಈ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...