2ನೇ ಸುತ್ತಿನ ಉದ್ಯೋಗ ಕಡಿತಕ್ಕೆ ‘ಅಮೆಜಾನ್’ ಚಿಂತನೆ; 1,000 ಭಾರತೀಯರ ಕೆಲಸಕ್ಕೆ ಕುತ್ತು!

Date:

ದೈತ್ಯ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ‘ಅಮೆಜಾನ್’ ತನ್ನಲ್ಲಿನ ಕಾರ್ಪೊರೇಟ್‌ ಉದ್ಯೋಗಗಳನ್ನು ಕಡಿತಗೊಳಿಸುತ್ತಿದೆ. ಈ ಹಿಂದೆ, 2025ರ ಅಕ್ಟೋಬರ್‌ನಲ್ಲಿ 14,000 ಉದ್ಯೋಗಿಗಳನ್ನು ಹೊರಹಾಕಿದ್ದ ಸಂಸ್ಥೆ, ಇದೀಗ 2ನೇ ಸುತ್ತಿನ ಉದ್ಯೋಗ ಕಡಿತಕ್ಕೆ ಯೋಜಿಸುತ್ತಿದೆ. ಈ ಬಾರಿ, ಸುಮಾರು 30,000 ಉದ್ಯೋಗ ಕಡಿತವಾಗುವ ನಿರೀಕ್ಷೆಯಿದ್ದು, ಈ ಪೈಕಿ, ಸುಮಾರು 1,000 ಮಂದಿ ಭಾರತೀಯ ಉದ್ಯೋಗಿಗಳು ತಮ್ಮ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ.

ಅಮೆಜಾನ್ ಕಂಪನಿಯು ಕಂಪನಿಯು ಸುಮಾರು 5-6 ಲಕ್ಷ ಉದ್ಯೋಗಗಳನ್ನು ರೊಬೋಟ್‌ಗಳೊಂದಿಗೆ ಮರುಹೊಂದಾಣಿಕೆ ಮಾಡುವುದಾಗಿ ಘೋಷಿಸಿದೆ. ಅದರ ಭಾಗವಾಗಿ 2025ರಲ್ಲಿ, ಅಮೆಜಾನ್ ತನ್ನ 14,000 ವೈಟ್-ಕಾಲರ್ ಉದ್ಯೋಗಗಳನ್ನೂ ಕಡಿತಗೊಳಿಸಿತ್ತು. ಆಗ, ಸುಮಾರು 1,000 ಮಂದಿ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದರು.

ಮೂಲಗಳ ಪ್ರಕಾರ, ಈ ತಿಂಗಳ (ಜನವರಿ) 27-28ರೊಳಗೆ ಉದ್ಯೋಗ ಕಡಿತವನ್ನು ಘೋಷಿಸುವ ಸಾಧ್ಯತೆಯಿದೆ. ಕಂಪನಿಯ ಅಮೆಜಾನ್ ವೆಬ್ ಸೇವೆಗಳು, ಚಿಲ್ಲರೆ ವ್ಯಾಪಾರ, ಪ್ರೈಮ್ ವಿಡಿಯೋ, ಮಾನವ ಸಂಪನ್ಮೂಲ, ಪೀಪಲ್ ಎಕ್ಸ್‌ಪೀರಿಯೆನ್ಸ್ ಹಾಗೂ ಟೆಕ್ನಾಲಜಿ ಘಟಕಗಳಲ್ಲಿ ಉದ್ಯೋಗಗಳು ಕಡಿತವಾಗಲಿವೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆಜಾನ್‌ನಲ್ಲಿ ಸುಮಾರು 15.8 ಲಕ್ಷ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ, ಈಗ 30,000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ. ಅಮೆಜಾನ್‌ನ ಹೆಚ್ಚಿನ ನೌಕರರು ಪೂರೈಕೆ ಕೇಂದ್ರಗಳು ಮತ್ತು ಗೋದಾಮುಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...