ಉಕ್ರೇನ್‌ ಸಂಘರ್ಷವನ್ನು ‘ಮೋದಿ ಯುದ್ಧ’ ಎಂದ ಅಮೆರಿಕ

Date:

ಕಳೆದ ಎರಡು ವರ್ಷಗಳಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಉದ್ವಿಘ್ನತೆ ಮುಂದುವರೆದಿದೆ. ಇದೆಲ್ಲದರ ನಡುವೆ ರಷ್ಯಾ ಜೊತೆ ತೈಲ ಮತ್ತು ಶಸ್ತ್ರಾಸ್ತ್ರ ವ್ಯವಹಾರ ನಡೆಸುತ್ತಿರುವ ಭಾರತವನ್ನು ಅಮೆರಿಕ ಟೀಕಿಸುತ್ತಿದೆ. ಭಾರತದ ಮೇಲೆ 50% ತೆರಿಗೆ ಹೇರಿದೆ. ಇದೀಗ, ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ‘ಮೋದಿ ಯುದ್ಧ’ ಎಂದು ಅಮೆರಿಕ ಆರೋಪಿಸಿದೆ.

ಆಗಸ್ಟ್‌ 27ರಿಂದ ಜಾರಿಗೆ ಬರುವಂತೆ ಭಾರತದ ಸರಕುಗಳ ಮೇಲೆ ಅಮೆರಿಕವು 50% ಆಮದು ಸುಂಕವನ್ನು ಜಾರಿಗೊಳಿಸಿದೆ. ಜೊತೆಗೆ, ರಷ್ಯಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸುವಂತೆ ಭಾರತದ ಮೇಲೆ ಒತ್ತಡ ಹೇರಲು ಮೋದಿ ಅವರಿಗೆ ಟ್ರಂಪ್ ಕರೆ ಮಾಡಿದ್ದಾರೆ. ಆದರೆ, ಅವರ ಕರೆಯನ್ನು ಮೋದಿ ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಇದೀಗ, ಭಾರತದ ವಿರುದ್ಧ ಅಮೆರಿಕ ವಾಗ್ದಾಳಿ ನಡೆಸಿದೆ. ಅಮೆರಿಕ ಶ್ವೇತಭವನದ ವಾಣಿಜ್ಯ ಸಲಹೆಗಾರ ಪೀಟರ್‌ ನವಾರೊ, “ಭಾರತವು ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಮೂಲಕ ರಷ್ಯಾಗೆ ಹಣಕಾಸಿನ ನೆರವು ನೀಡುತ್ತಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವುದು ಮೋದಿ ಯುದ್ಧವೆಂದು ನಾವು ಹೇಳುತ್ತೇವೆ. ಹೀಗಾಗಿ, ಉಕ್ರೇನ್‌ಗೆ ಅಮೆರಿಕ ಆರ್ಥಿಕ ನೆರವು ನೀಡಬೇಕಾದ ಪರಿಸ್ಥಿತಿ ಇದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕದ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿರುವ ನವಾರೊ, “ಪ್ರತಿ ಸುಂಕ ಪ್ರಮಾಣದ ಏರಿಕೆಯು ವ್ಯಾಪಾರ, ವ್ಯವಹಾರವನ್ನು ಸುಗಮಗೊಳಿಸಲು ಕೈಗೊಂಡಿರುವ ಕ್ರಮವಾಗಿದೆ. ಭಾರತವು ನಮ್ಮ ಮೇಲೆ ಭಾರೀ ಸುಂಕ ವಿಧಿಸುತ್ತಿರುವ ಪರಿಣಾಮ ಅಮೆರಿಕದಲ್ಲಿರುವ ಎಲ್ಲರೂ ಸಂಕಷ್ಟ ಎದುರಿಸುವಂತಾಗಿದೆ. ಅಂತೆಯೇ, ನಾವು ಕೂಡ ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 25% ಸುಂಕ, 25% ದಂಡ (ಒಟ್ಟು 50%) ತೆರಿಗೆ ವಿಧಿಸಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ಭಾರತವು ವಾರ್ಷಿಕ 87.3 ಶತಕೋಟಿ ಡಾಲರ್ ಮೊತ್ತದ ಸರಕುಗಳನ್ನು ಅಮೆರಿಕಗೆ ರಫ್ತು ಮಾಡುತ್ತಿದೆ. ಈ ಮೊತ್ತದಲ್ಲಿ ಬರೋಬ್ಬರಿ 50% ಮೊತ್ತವು ಈಗ ಸುಂಕ ಪಾವತಿಗೆ ವ್ಯಯವಾಗಲಿದೆ. ಪರಿಣಾಮವಾಗಿ, ಭಾರತದ ಪ್ರಮುಖ ರಫ್ತು ಸರಕುಗಳಾದ ಜವಳಿ, ಉಡುಪುಗಳು, ರತ್ನಗಳು, ಆಭರಣ, ಸಮುದ್ರ ಆಹಾರ ಹಾಗೂ ಚರ್ಮ ಸೇರಿದಂತೆ ಹಲವಾರು ಸರಕುಗಳು ಬಾಧಿತವಾಗಲಿವೆ.

ಅಮೆರಿಕದ 50% ಸುಂಕದಿಂದಾಗಿ ಭಾರತೀಯ ಜವಳಿ ರಫ್ತು ವಲಯವು ನೇರ ಮತ್ತು ಪರೋಕ್ಷ ಉದ್ಯೋಗ ಸೇರಿದಂತೆ ಸುಮಾರು 5,00,000 ಉದ್ಯೋಗ ನಷ್ಟ ಎದುರಿಸುವಂತಾಗಿದೆ. ಅಲ್ಲದೆ, ಸೌರಾಷ್ಟ್ರ ಪ್ರದೇಶದಾದ್ಯಂತ ವಜ್ರ ಕತ್ತರಿಸುವ ಮತ್ತು ಹೊಳಪು ನೀಡುವ ಕೆಲಸ ಮಾಡುತ್ತಿದ್ದರುವ ಉದ್ಯೋಗಿಗಳಲ್ಲಿ 1,50,000 ರಿಂದ 2,00,000 ಮಂದಿ ಉದ್ಯೋಗಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...