ಪುಟ್ಟಪರ್ತಿ ಸಾಯಿಬಾಬಾ ಭಕ್ತರಾಗಿದ್ದ ವೆನೆಜುವೆಲಾ ಮಾಜಿ ಅಧ್ಯಕ್ಷ ನಿಕೋಲಸ್‌ ಮಡುರೊ

Date:

ಅಮೆರಿಕದ ಸೆರೆಯಲ್ಲಿರುವ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್‌ ಮಡುರೊ ಅವರ ರಾಜಕೀಯ ಜೀವನದಷ್ಟೇ ಕುತೂಹಲಕಾರಿಯಾದ ಸಂಗತಿಯೊಂದು ಮುನ್ನೆಲೆಗೆ ಬಂದಿದೆ. ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯ ಸತ್ಯ ಸಾಯಿಬಾಬಾ ಅವರ ಪರಮ ಭಕ್ತರಾಗಿದ್ದರು ಎಂಬುದು ವಿಶೇಷ.

​ಮಡುರೊ ಮತ್ತು ಪುಟ್ಟಪರ್ತಿಯ ನಡುವಿನ ನಂಟು ಎರಡು ದಶಕಗಳಷ್ಟು ಹಳೆಯದು. 2005ರಲ್ಲಿ ವೆನೆಜುವೆಲಾದ ವಿದೇಶಾಂಗ ಸಚಿವರಾಗಿದ್ದಾಗ, ಮಡುರೊ ತಮ್ಮ ಪತ್ನಿ ಸಿಲಿಯಾ ಫ್ಲೋರ್ಸ್‌ ಅವರೊಂದಿಗೆ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಯಾವುದೇ ರಾಜಕೀಯ ಮಾತುಕತೆಗಿಂತ ಮಿಗಿಲಾಗಿ, ಆಧ್ಯಾತ್ಮಿಕ ಗುರು ಸಾಯಿಬಾಬಾ ಅವರ ದರ್ಶನ ಪಡೆಯಲು ಪುಟ್ಟಪರ್ತಿಗೆ ತೆರಳಿದ್ದರು. ಸಾಯಿಬಾಬಾ ಅವರ ಕಾಲಿಗೆ ನಮಸ್ಕರಿಸಿ, ನೆಲದ ಮೇಲೆ ಕುಳಿತು ಭಕ್ತಿ ಪ್ರದರ್ಶಿಸಿದ್ದ ಛಾಯಾಚಿತ್ರಗಳು ಈಗಲೂ ಲಭ್ಯವಿವೆ.

​ಮೂಲತಃ ಕ್ರೈಸ್ತರಾಗಿದ್ದ ಮಡುರೊ ಅವರ ಪತ್ನಿ ಸಿಲಿಯಾ ಅವರು ಸಾಯಿಬಾಬಾರ ಅಪ್ಪಟ ಭಕ್ತೆ. ಪತ್ನಿಯ ಪ್ರಭಾವದಿಂದ ಮಡುರೊ ಕೂಡ ಬಾಬಾರ ಅನುಯಾಯಿಯಾಗಿ ಬದಲಾದರು. ಎಷ್ಟರಮಟ್ಟಿಗೆಂದರೆ, ಮಡುರೊ ತಮ್ಮ ಕಚೇರಿಯಲ್ಲಿ ವೆನೆಜುವೆಲಾದ ಕ್ರಾಂತಿಕಾರಿ ನಾಯಕರಾದ ಸೈಮನ್ ಬೊಲಿವರ್ ಮತ್ತು ಹ್ಯೂಗೋ ಚಾವೆಜ್ ಅವರ ಭಾವಚಿತ್ರಗಳ ಜೊತೆಗೆ ಸತ್ಯ ಸಾಯಿಬಾಬಾ ಅವರ ದೊಡ್ಡ ಭಾವಚಿತ್ರವನ್ನೂ ಇರಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ‘ಕಾಮುಕರ’ ವಿರುದ್ಧ ಕುಡುಗೋಲು ಹಿಡಿದ ಮಹಿಳಾ ಶಕ್ತಿ!

​2011ರ ಏಪ್ರಿಲ್‌ನಲ್ಲಿ ಸತ್ಯಸಾಯಿ ಬಾಬಾ ನಿಧನರಾದಾಗ, ಲ್ಯಾಟಿನ್ ಅಮೆರಿಕದ ರಾಷ್ಟ್ರಗಳ ಪೈಕಿ ವೆನೆಜುವೆಲಾ ಮಾತ್ರ ಬಾಬಾರಿಗೆ ಅಧಿಕೃತ ಗೌರವ ಸಲ್ಲಿಸಿತ್ತು. ಮಡುರೊ ನೇತೃತ್ವದಲ್ಲಿ ರಾಷ್ಟ್ರೀಯ ಸಭೆಯು ಸಂತಾಪ ನಿರ್ಣಯವನ್ನು ಅಂಗೀಕರಿಸಿ, ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತ್ತು. ಇತ್ತೀಚೆಗೆ, 2025ರ ನವೆಂಬರ್ 23ರಂದು ಸಾಯಿಬಾಬಾ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿಯೂ ಮಡುರೊ ಬಾಬಾರನ್ನು ‘ಬೆಳಕಿನ ಸ್ವರೂಪಿ’ ಎಂದು ಸ್ಮರಿಸಿದ್ದರು.

​ಮಡುರೊ ಆಳ್ವಿಕೆಯಲ್ಲಿ ಅನೇಕ ವಿದೇಶಿ ಸರ್ಕಾರೇತರ ಸಂಸ್ಥೆಗಳ ಮೇಲೆ ನಿರ್ಬಂಧವಿದ್ದರೂ, ಸತ್ಯಸಾಯಿ ಸೇವಾ ಸಂಸ್ಥೆಗಳು ವೆನೆಜುವೆಲಾದಲ್ಲಿ ನಿರ್ಭೀತಿಯಿಂದ ಕಾರ್ಯನಿರ್ವಹಿಸುತ್ತಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...