ಇಸ್ರೇಲ್ ವಿರೋಧಿ ಪ್ರತಿಭಟನೆ: ಶ್ವೇತ ಭವನದ ಬಳಿ ಬೆಂಕಿ ಹಚ್ಚಿಕೊಂಡ ಪತ್ರಕರ್ತ

Date:

ಇಸ್ರೇಲ್ ವಿರೋಧಿ ಪ್ರತಿಭಟನೆ ವೇಳೆ ಗಾಜಾ ಯುದ್ಧದ ಬಗ್ಗೆ ನಾವು ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದೇವೆಂದು ʼಫೋಟೊ ಜರ್ನಲಿಸ್ಟ್ʼ ಓರ್ವರು ಕೈಗೆ ಬೆಂಕಿ ಹಚ್ಚಿಕೊಂಡು ಪ್ರತಿಭಟಿಸಿದ ಘಟನೆ ಅಮೆರಿಕದ ಶ್ವೇತಭವನದ ಬಳಿ ನಡೆದಿದೆ ಎಂದು ವರದಿಯಾಗಿದೆ.

ಫೋಟೊ ಜರ್ನಲಿಸ್ಟ್ ಸ್ಯಾಮ್ಯುಯೆಲ್ ಮೆನಾ ಜೂನಿಯರ್ ಕೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಕೈಗಳನ್ನು ಮೆನಾ ಮೇಲಕ್ಕೆ ಹಿಡಿದುಕೊಂಡಿರುವುದು, ಬಟ್ಟೆಗಳನ್ನು ಬಳಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುವುದು, ಅವರ ಕೈ ಮೇಲೆ ಇನ್ನೋರ್ವರು ನೀರನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಇಸ್ರೇಲ್ ವಿರೋಧಿ ಪ್ರತಿಭಟನೆಯ ವೇಳೆ ಮೆನಾ ಅವರು ತಮ್ಮ ಎಡಗೈಗೆ ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಅಲ್ಲಿದ್ದವರು ಅವರ ರಕ್ಷಣೆಗೆ ಧಾವಿಸಿದ್ದಾರೆ. ಮೆನಾ ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಈ ಬಗ್ಗೆ ಮೇನಾ ತಮ್ಮ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ್ದು, ಗಾಜಾ ಸಂಘರ್ಷಕ್ಕೆ ಸಂಬಂಧಿಸಿ ಮಾಧ್ಯಮದ ವಸ್ತುನಿಷ್ಠತೆಯನ್ನು ಪ್ರಶ್ನಿಸಿದ್ದಾರೆ. ತನ್ನ ಪೋಸ್ಟ್ ನಲ್ಲಿ ಅವರು ಯುದ್ಧ ಪೀಡಿತ ಮಕ್ಕಳಿಗೆ ಸಂದೇಶವನ್ನು ಬರೆದು ಸಂಘರ್ಷದಲ್ಲಿ ಕೈಕಾಲುಗಳನ್ನು ಕಳೆದುಕೊಂಡಿರುವ ಗಾಜಾದ 10,000 ಮಕ್ಕಳಿಗೆ ತಮ್ಮ ಎಡಗೈಯನ್ನು ಅರ್ಪಿಸುವುದಾಗಿ ಹೇಳಿದ್ದಾರೆ.

ಅರಿಝೋನಾ ಸ್ಟೇಟ್ ಯೂನಿವರ್ಸಿಟಿಯ ವಾಲ್ಟರ್ ಕ್ರಾಂಕೈಟ್ ಸ್ಕೂಲ್ ಆಫ್ ಜರ್ನಲಿಸಂಲ್ಲಿ ಪದವಿ ಶಿಕ್ಷಣ ಮುಗಿಸಿರುವ ಪತ್ರಕರ್ತ ಸ್ಯಾಮ್ಯುಯೆಲ್ ಮೆನಾ ಜೂನಿಯರ್ ಪ್ರಸ್ತುತ ‘AZFamily’ ಮಾಧ್ಯಮದಲ್ಲಿ ಫೋಟೊ ಜರ್ನಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...