ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದೆಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

Date:

ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರ್ಯಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾದ ಕೊರೊನಾ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಅಸ್ಟ್ರಾಜೆನೆಕಾ ನ್ಯಾಯಾಲಯಗಳ ದಾಖಲೆಗಳ ಮೂಲಕ ಮೊದಲ ಬಾರಿಗೆ ಒಪ್ಪಿಕೊಂಡಿದೆ.

ತಯಾರಕರು ಹೇಳುವಂತೆ ಕೋವಿಶೀಲ್ಡ್ ಲಸಿಕೆಯಿಂದಾಗಿ ಅಪರೂಪದ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವುದು, ಪ್ಲೇಟ್‌ಲೆಟ್ ಪ್ರಮಾಣ ಕಡಿಮೆಯಾಗಲು ಕಾರಣವಾಗಬಹುದು. ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಅಥವಾ ಟಿಟಿಎಸ್ ಎಂಬ ರೋಗ ಲಕ್ಷಣಕ್ಕೆ ಕಾರಣವಾಗಬಹುದು.

ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದೆ. ಇದನ್ನು ಭಾರತ ಮತ್ತು ಇತರೆ ದೇಶಗಳಲ್ಲಿ ಜನರಿಗೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮೋದಿಯ ಮೂರು ಸುಳ್ಳುಗಳು | ಮಣಿಪುರ, ಚೀನಾ ಅತಿಕ್ರಮಣ ಮತ್ತು ಕೋವಿಡ್‌ನಿಂದ ಬಚಾವು- ಇದು ಜನದ್ರೋಹವಲ್ಲವೇ?

ಇನ್ನು ಅಸ್ಟ್ರಾಜೆನೆಕಾ ಯುಕೆಯಲ್ಲಿ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾದ ಈ ಲಸಿಕೆಯು ಸಾವಿಗೆ ಮತ್ತು ಮಿದುಳಿಗೆ ತೀವ್ರವಾದ ಹಾನಿಯಾಗಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಈ ಲಸಿಕೆಯಿಂದಾಗಿ 51 ಪ್ರಕರಣಗಳಲ್ಲಿ 100 ಮಿಲಿಯನ್ ಪೌಂಡ್‌ಗಳವರೆಗೆ ನಷ್ಟವಾಗಿದೆ ಎಂದು ಯುಕೆ ಹೈಕೋರ್ಟ್‌ನಲ್ಲಿ ದಾಖಲಾದ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ಫೈಲಿಂಗ್‌ನಲ್ಲಿ ಲಸಿಕೆ “ಅಪರೂಪದ ಸಂದರ್ಭಗಳಲ್ಲಿ, ಟಿಟಿಎಸ್‌ಗೆ ಕಾರಣವಾಗಬಹುದು” ಎಂದು ಆಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನು ಓದಿದ್ದೀರಾ?  ಕೋವಿಡ್‌ ವೇಳೆ ಬಿಜೆಪಿಗೆ ₹52 ಕೋಟಿ ನೀಡಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಸಿಇಒ ಅದಾರ್‌ ಪೂನಾವಾಲ: ವರದಿ

ಈ ಬಗ್ಗೆ ಮೊದಲ ಬಾರಿಗೆ 2023ರಲ್ಲಿ ಆರೋಪ ಕೇಳಿ ಬಂದಿದ್ದು ಜೇಮೀ ಸ್ಕಾಟ್ ಎಂಬವರು ಆರೋಪಿಸಿದ್ದರು. ಏಪ್ರಿಲ್ 2021ರಲ್ಲಿ ವ್ಯಾಕ್ಸಿನೇಷನ್ ನಂತರದ ಶಾಶ್ವತ ಮಿದುಳಿನ ಗಾಯ ಉಂಟಾಗಿದೆ ಎಂದು ಆರೋಪಿಸಿದ್ದರು. ಮೇ 2023ರಲ್ಲಿ ಸ್ಕಾಟ್ ಅವರ ವಕೀಲರಿಗೆ ಪ್ರತಿಕ್ರಿಯೆಯನ್ನು ನೀಡಿದ್ದ ಅಸ್ಟ್ರಾಜೆನೆಕಾ ಟಿಟಿಎಸ್ ಮತ್ತು ಲಸಿಕೆಗೆ ಯಾವುದೇ ನೇರ ಸಂಪರ್ಕ ಇಲ್ಲ ಎಂದು ಹೇಳಿದ್ದರು. ಆದರೆ ಈಗ ಅಡ್ಡಪರಿಣಾಮದ ಬಗ್ಗೆ ಸಂಸ್ಥೆ ಒಪ್ಪಿಕೊಂಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಲಸಿಕೆಯನ್ನು 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಿಗೆ ನೀಡುವುದು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...