ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಅಸ್ಟ್ರಾಜೆನೆಕಾ

Date:

ಕೋವಿಶೀಲ್ಡ್ ಅಡ್ಡಪರಿಣಾಮವು ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆ ಈ ಲಸಿಕೆಯನ್ನು ಅಭಿವೃದ್ಧಿಸಿ ಪಡಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಜಾಗತಿಕವಾಗಿ ತನ್ನ ಕೋವಿಡ್ ಲಸಿಕೆಯನ್ನು ಹಿಂಪಡೆದುಕೊಳ್ಳಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು ದೇಹದಲ್ಲಿ ಪ್ಲೇಟ್‌ಲೆಟ್ ಪ್ರಮಾಣ ಕಡಿಮೆಯಾಗಬಹುದು. ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಅಥವಾ ಟಿಟಿಎಸ್ ಎಂಬ ರೋಗ ಉಂಟಾಗಬಹುದು ಎಂದು ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದೆ.

ಇದನ್ನು ಓದಿದ್ದೀರಾ?  ಕೋವಿಶೀಲ್ಡ್ ಪಡೆದ ಬಳಿಕ ನಮ್ಮ ಮಗಳ ಸಾವು; ದಂಪತಿ ಆರೋಪ: ಅಸ್ಟ್ರಾಜೆನೆಕಾ ವಿರುದ್ಧ ಮೊಕದ್ದಮೆಗೆ ಸಜ್ಜು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾವು ಕೋವಿಶೀಲ್ಡ್ ಎಂಬ ಹೆಸರಿನಲ್ಲಿ ತಯಾರಿಸಿದೆ.

ವಾಣಿಜ್ಯ ಕಾರಣದಿಂದಾಗಿ ಜಾಗತಿಕವಾಗಿ ಕೋವಿಡ್ ಲಸಿಕೆಯನ್ನು ಹಿಂಪಡೆಯಲಾಗುವುದು ಎಂದು ಅಸ್ಟ್ರಾಜೆನೆಕಾ ಹೇಳಿಕೊಂಡಿದೆ. ಲಸಿಕೆಯನ್ನು ಇನ್ನು ಮುಂದೆ ಉತ್ಪಾದಿಸಲಾಗುವುದಿಲ್ಲ ಮತ್ತು ಇನ್ನು ಮುಂದೆ ಬಳಸಲಾಗುವುದಿಲ್ಲ ಎಂದು ಸಂಸ್ಥೆ ಹೇಳಿದೆ.

ಇದನ್ನು ಓದಿದ್ದೀರಾ? ಕೋವಿಶೀಲ್ಡ್ ಲಸಿಕೆ ಪಡೆದವರು ಎಚ್ಚರವಹಿಸಬೇಕಾದ್ದು ಎಲ್ಲಿ?

ಅಸ್ಟ್ರಾಜೆನೆಕಾದ ಕೋವಿಡ್ ಲಸಿಕೆಯು ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರ್ಯಾಂಡ್ ಹೆಸರುಗಳಲ್ಲಿ ಜಾಗತಿಕವಾಗಿ ಮಾರಾಟವಾಗುತ್ತದೆ. ಈ ಲಸಿಕೆಯಿಂದ ಸಾವು, ನೋವು ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಸಂಸ್ಥೆಯು ವಿರುದ್ಧ 100 ಮಿಲಿಯನ್ ಪೌಂಡ್ ಮೊಕದ್ದಮೆ ಎದುರಿಸುತ್ತಿದೆ.

ಯುಕೆಯಲ್ಲಿ ನಡೆದ ಸುಮಾರು 81 ಸಾವುಗಳಿಗೆ ಕೋವಿಶೀಲ್ಡ್‌ನಿಂದಾಗಿ ಉಂಟಾದ ಟಿಟಿಎಸ್‌ ಕಾರಣ ಎಂದು ಆರೋಪಿಸಲಾಗಿದೆ. ಆದರೆ ಈಗ ಕೋವಿಶೀಲ್ಡ್ ಲಸಿಕೆ ಹಿಂಪಡೆಯುತ್ತಿರುವ ಅಸ್ಟ್ರಾಜೆನೆಕಾ ನ್ಯಾಯಾಲಯದ ಪ್ರಕರಣಕ್ಕೂ ಈ ನಿರ್ಧಾರಕ್ಕೂ ಸಂಬಂಧವನ್ನು ಅಲ್ಲಗಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...