ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ವಾಯುದಾಳಿ: ನಾಲ್ವರು ಪತ್ರಕರ್ತರು ಸೇರಿ 19 ಮಂದಿ ಸಾವು

Date:

ದಕ್ಷಿಣ ಗಾಝಾದ ಮುಖ್ಯ ಆಸ್ಪತ್ರೆಯ ನಾಲ್ಕನೇ ಮಹಡಿಯ ಮೇಲೆ ಇಸ್ರೇಲ್ ಸೋಮವಾರ ವಾಯುದಾಳಿ ನಡೆಸಿದ್ದು, ನಾಲ್ವರು ಪತ್ರಕರ್ತರು ಸೇರಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ನಾಸರ್ ಆಸ್ಪತ್ರೆಯ ನಾಲ್ಕನೇ ಮಹಡಿಯ ಮೇಲೆ ಮೊದಲು ಒಂದು ಕ್ಷಿಪಣಿ ದಾಳಿ ನಡೆದಿದೆ. ರಕ್ಷಣಾ ಸಿಬ್ಬಂದಿ ಆಗಮಿಸುತ್ತಿದ್ದಂತೆ ಮತ್ತೊಂದು ಕ್ಷಿಪಣಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಈ ಬಗ್ಗೆ ಇಸ್ರೇಲ್ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಇಸ್ರೇಲ್ ಪ್ರಧಾನಿ ಕಚೇರಿ ಮತ್ತು ಇಸ್ರೇಲಿ ಮಿಲಿಟರಿ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಇದನ್ನು ಓದಿದ್ದೀರಾ? ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸೋಸಿಯೇಟೆಡ್ ಪ್ರೆಸ್‌ಗಾಗಿ ಕೆಲಸ ಮಾಡಿದ ಫ್ರೀಲ್ಯಾನ್ಸರ್ ಸೇರಿದಂತೆ ನಾಲ್ವರು ಪತ್ರಕರ್ತರೂ ಸಾವನ್ನಪ್ಪಿದ್ದಾರೆ. ಎಪಿಗಾಗಿ ಕೆಲಸ ಮಾಡುತ್ತಿದ್ದ ಫ್ರೀಲ್ಯಾನ್ಸರ್ 33 ವರ್ಷದ ಮರಿಯಮ್ ದಕ್ಕಾ ಎಂದು ಹೇಳಲಾಗಿದ್ದು, ಆಸ್ಪತ್ರೆಯ ವೈದ್ಯರು ಹಸಿವಿನಿಂದ ಮಕ್ಕಳನ್ನು ರಕ್ಷಿಸಲು ಹೆಣಗಾಡುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ನಾಸರ್ ಆಸ್ಪತ್ರೆ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ತನ್ನ ಪತ್ರಕರ್ತ ಮೊಹಮ್ಮದ್ ಸಲಾಮ್ ಕೂಡ ಸೇರಿದ್ದಾರೆ ಎಂದು ಅಲ್ ಜಜೀರಾ ದೃಢಪಡಿಸಿದೆ. ಹಾಗೆಯೇ ತಮ್ಮ ಕ್ಯಾಮೆರಾಮನ್ ಹುಸಾಮ್ ಅಲ್-ಮಸ್ರಿ ಕೂಡ ಸಾವನ್ನಪ್ಪಿದ್ದಾರೆ. ಛಾಯಾಗ್ರಾಹಕ ಹತೀಮ್ ಖಲೀದ್ ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್-ಹಮಾಸ್ ಯುದ್ಧ ಆರಂಭವಾದ ಬಳಿಕ 22 ತಿಂಗಳ ಸಂಘರ್ಷದಲ್ಲಿ ಗಾಝಾದಲ್ಲಿ ಒಟ್ಟು 192 ಪತ್ರಕರ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅದೇ ರಷ್ಯಾ-ಉಕ್ರೇನ್ ಯುದ್ಧದಲ್ಲಿ ಈವರೆಗೆ 18 ಪತ್ರಕರ್ತರು ಸಾವನ್ನಪ್ಪಿದ್ದಾರೆ ಎಂದು ಸಿಪಿಜೆ ತಿಳಿಸಿದೆ.

ಜೂನ್‌ನಲ್ಲಿ ನಾಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಯಲ್ಲಿ ಮೂವರು ಸಾವನ್ನಪ್ಪಿದರು ಮತ್ತು 10 ಮಂದಿ ಗಾಯಗೊಂಡಿದ್ದರು. ಆ ಸಂದರ್ಭದಲ್ಲಿ “ನಾವು ಜನರನ್ನು ಗುರಿಯಾಗಿಸಿ ದಾಳಿ ನಡೆಸಿದಲ್ಲ, ಹಮಾಸ್ ಉಗ್ರರ ಮೇಲೆ ದಾಳಿ ನಡೆಸಿದ್ದು” ಎಂದು ಇಸ್ರೇಲ್ ಹೇಳಿಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...