ಸ್ಪೇನ್ | ರೈಲುಗಳು ಮುಖಾಮುಖಿ ಢಿಕ್ಕಿಯಿಂದ 21 ಮಂದಿ ಸಾವು

Date:

ಸ್ಪೇನ್‌ನ ದಕ್ಷಿಣ ಭಾಗದ ಅಂದಲೂಸಿಯಾ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ 21 ಮಂದಿ ಸಾವನ್ನಪ್ಪಿ, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ. ಈ ದುರಂತದ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ, “ಇದು ಅತೀವ ನೋವಿನ ರಾತ್ರಿ” ಎಂದಿದ್ದಾರೆ.

ಮಲಾಗಾದಿಂದ ಮ್ಯಾಡ್ರಿಡ್ ಗೆ ತೆರಳುತ್ತಿದ್ದ ಹೈಸ್ಪೀಡ್ ರೈಲು ಅಡಮುಝ್ ಬಳಿ ಹಳಿ ತಪ್ಪಿದೆ. ಹಳಿ ತಪ್ಪಿದ ರೈಲು ಮತ್ತೊಂದು ಹಳಿಗೆ ನುಗ್ಗಿದ ಪರಿಣಾಮ, ಆ ಹಳಿಯಲ್ಲಿ ಬರುತ್ತಿದ್ದ ಇನ್ನೊಂದು ರೈಲಿಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಎರಡನೇ ರೈಲೂ ಸಹ ಹಳಿ ತಪ್ಪಿದೆ ಎಂದು ಸ್ಪೇನ್ ನ ಅಡಿಫ್ (Adif) ರೈಲು ಜಾಲ ಸಂಸ್ಥೆ ತನ್ನ ಎಕ್ಸ್ (X) ಖಾತೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಾದೇಶಿಕ ಪಕ್ಷಗಳನ್ನು ನುಂಗುವ ಬಿಜೆಪಿ ತಂತ್ರ ಅರಿಯಲು ಜೆಡಿಎಸ್‌ಗೆ ಸಕಾಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರಂತದಲ್ಲಿ 21 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವಕ್ತಾರರು ಎಎಫ್ ಪಿಗೆ ತಿಳಿಸಿದ್ದಾರೆ. ಅಂದಲೂಸಿಯಾ ತುರ್ತು ಸೇವೆಗಳ ಮುಖ್ಯಸ್ಥ ಅಂಟೋನಿಯೊ ಸಾಂಝ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನಿಷ್ಠ 73 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. “ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನಮ್ಮ ಮುಂದಿರುವುದು ಅತ್ಯಂತ ಸಂಕೀರ್ಣವಾದ ರಾತ್ರಿ,” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ಸಚಿವ ಆಸ್ಕರ್ ಪುವೆಂಟೆ ಪತ್ರಕರ್ತರಿಗೆ ಮಾಹಿತಿ ನೀಡುತ್ತಾ, ಗಂಭೀರ ಸ್ಥಿತಿಯಲ್ಲಿದ್ದ 30 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಗಾಯಗೊಂಡ ಎಲ್ಲರನ್ನೂ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...