ಪಾಕ್ ಬೆಂಗಾವಲು ಪಡೆ ಮೇಲೆ ದಾಳಿ; 90 ಸೈನಿಕರು ಸಾವು: ಬಿಎಲ್‌ಎ ಹೇಳಿಕೆ

Date:

ಪಾಕಿಸ್ತಾನದ ಸೈನಿಕರು ಪ್ರಯಾಣಿಸುತ್ತಿದ್ದ ಮಿಲಿಟರಿ ವಾಹನದ ಮೇಲೆ ಬಲೂಚಿ ಬಂಡುಕೋರರು ದಾಳಿ ನಡೆಸಿದ್ದು, 90 ಮಂದಿ ಪಾಕ್‌ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ‘ಬಲೂಚ್ ಲಿಬರೇಶನ್ ಆರ್ಮಿ’ (ಬಿಎಲ್‌ಎ) ಹೇಳಿದೆ. ಆದರೆ, ದಾಳಿಯಲ್ಲಿ ಕೇವಲ 5 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನಿ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಬಿಎಲ್‌ಎ – ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸಬೇಕೆಂದು ಒತ್ತಾಯಿಸುತ್ತಿರುವ ಪ್ರತ್ಯೇಕವಾಗಿ ಸಂಘಟನೆಯಾಗಿದೆ. ಪಾಕ್ ಬೆಂಗಾವಲು ಪಡೆಯ ಮೇಲೆ ತಾವೇ ದಾಳಿ ನಡೆಸಿರುವುದಾಗಿ ಬಿಎಲ್‌ಎ ಹೇಳಿಕೊಂಡಿದೆ. “ಕೆಲವು ಗಂಟೆಗಳ ಹಿಂದೆ ಬಲೂಚಿಸ್ತಾನದ ನೋಶ್ಕಿಯ ಆರ್‌ಸಿಡಿ ಹೆದ್ದಾರಿಯಲ್ಲಿರುವ ರಕ್ಷನ್ ಮಿಲ್ ಬಳಿ ಪಾಕ್‌ ಪಡೆಯ ಮೇಲೆ ದಾಳಿ ನಡೆಸಿದ್ದೇವೆ. ಸೇನೆಯ ಎಂಟು ಬಸ್‌ಗಳ ಮೇಲೆ ದಾಳಿ ಮಾಡಿದ್ದು, ಒಂದು ಬಸ್‌ ಸಂಪೂರ್ಣವಾಗಿ ನಾಶವಾಗಿದೆ” ಎಂದು ಹೇಳಿದೆ.

ದಾಳಿಯನ್ನು ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಖಂಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...