ಜು.14ಕ್ಕೆ ಶುಭಾಂಶು ಶುಕ್ಲಾ ನೇತೃತ್ವದ ಆ್ಯಕ್ಸಿಯಂ-4 ತಂಡ ಭೂಮಿಯತ್ತ ಪ್ರಯಾಣ

Date:

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸದಸ್ಯರು ಜುಲೈ 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶದಿಂದ ವಾಪಸ್ಸಾಗಲಿದ್ದಾರೆ ಎಂದು ನಾಸಾ ಘೋಷಿಸಿದೆ.

ಜೂನ್ 25 ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಯಮ್-4 ಮಿಷನ್ ಉಡಾವಣೆಗೊಂಡಿತು. 28 ಗಂಟೆಗಳ ಪ್ರಯಾಣದ ನಂತರ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಮರುದಿನ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು.

ಶುಭಾಂಶು ಶುಕ್ಲಾ, ಪೆಗ್ಗಿ ವಿಟ್ಸನ್, ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಹಾಗೂ ಟಿಬೋರ್ ಕಾಪು ಅವರನ್ನೊಳಗೊಂಡ ಗಗನಯಾತ್ರಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 230 ಸೂರ್ಯೋದಯಗಳನ್ನು ಕಂಡಿದ್ದಾರೆ. ಕಕ್ಷೆಯ ಪ್ರಯೋಗಾಲಯದಲ್ಲಿ ಎರಡು ವಾರಗಳ ಕೊನೆಯಲ್ಲಿ ಬಾಹ್ಯಾಕಾಶದಲ್ಲಿ ಸುಮಾರು 100 ಲಕ್ಷ ಕಿ.ಮೀ. ಪ್ರಯಾಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಮಿಯಿಂದ ಸುಮಾರು 250 ಮೈಲುಗಳಷ್ಟು ಎತ್ತರದಲ್ಲಿರುವ ಗಗನಯಾತ್ರಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಚಿತ್ರಗಳು ಮತ್ತು ವೀಡಿಯೊಗಳನ್ನು ಸೆರೆಹಿಡಿಯುವುದು, ಭೂಮಿಯ ನೋಟವನ್ನು ವೀಕ್ಷಿಸುವುದು ಮತ್ತು ಪ್ರೀತಿಪಾತ್ರರನ್ನು ಸಂಪರ್ಕಿಸಿ ಸಮಯ ಕಳೆಯುವ ಕೆಲಸ ಮಾಡಿದ್ದಾರೆಂದು ಆಕ್ಸಿಯಮ್ ಸ್ಪೇಸ್ ಹೇಳಿಕೆ ತಿಳಿಸಿದೆ.

ವಿಶೇಷ ಗಾಜಿನ ತಟ್ಟೆಯಲ್ಲಿ ಚಿಗುರೊಡೆದ ಮೆಂತೆ ಮತ್ತು ಹೆಸರು ಬೀಜಗಳು ಹಾಗೂ ಅವುಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿನ ಶೀತಲಗ್ರಹದಲ್ಲಿ ಸಂಗ್ರಹಿಸಿಡುವ ಚಿತ್ರ ತೆಗೆದು ಸಂಭ್ರಮಿಸಿದ್ದಾರೆ. ಗುರುತ್ವರಹಿತ ಪ್ರದೇಶದಲ್ಲಿ ಕಾಳುಗಳ ಮೊಳಕೆಯೊಡೆಯುವಿಕೆ ಮತ್ತು ಗಿಡದ ಬೆಳವಣಿಗೆ ಮೇಲೆ ಅದು ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಪ್ರಯೋಗ ಮಾಡಿದ್ದಾರೆ.

ಗ್ರೂಪ್ ಕ್ಯಾಪ್ಟನ್ ಶುಕ್ಲಾ ಅವರು ಭಾರತಕ್ಕೆ ಸಂಬಂಧಿಸಿದ ಏಳು ಪ್ರಯೋಗಗಳನ್ನು ಮಾಡಿದರು. ಆಕ್ಸಿಯಂ-4 ಅಥವಾ ಮಿಷನ್ ‘ಆಕಾಶ್ ಗಂಗಾ’, ಭಾರತದ ಗಗನಯಾನ, ಮಾನವ ಬಾಹ್ಯಾಕಾಶ ಹಾರಾಟದ ಮೊದಲ ದೃಢವಾದ ಹೆಜ್ಜೆಯಾಗಿದೆ. ಈ ಮಿಷನ್ ಭಾರತದ ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗೆ ದಾರಿದೀಪವಾಗಿದೆ.

ಶುಭಾಂಶು ಶುಕ್ಲಾ ಅವರು ಕಳೆದ ಎರಡು ವಾರಗಳಲ್ಲಿ 230 ಸೂರ್ಯೋದಯಗಳಿಗೆ ಸಾಕ್ಷಿಯಾಗಿದ್ದಾರೆ. ಜತೆಗೆ, ಬಾಹ್ಯಾಕಾಶದಲ್ಲಿ ಇದುವರೆಗೂ 100 ಲಕ್ಷ ಕಿ.ಮೀ ಅಂತರ ಕ್ರಮಿಸಿದ್ದಾರೆ ಎಂದು ಆ್ಯಕ್ಸಿಯಂ ಸ್ಪೇಸ್‌ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...