ಬೆಂಗಳೂರಿನಲ್ಲಿ ಓದಿದ ಯುವಕ‌ ಈಗ ನೇಪಾಳದ ಪ್ರಧಾನಿ

Date:

ನೇಪಾಳದಲ್ಲಿ ಇತ್ತೀಚಿನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕರಣವಾಗಿದೆ. ಮಹತ್ವದ ಬೆಳವಣಿಗೆ ನಡೆದಿದೆ. ನೇಪಾಳ ರಾಜಧಾನಿ ಕಠ್ಮಂಡುವಿನ ಪಾಲಿಕೆಯ ಮಾಜಿ ಮೇಯರ್ ಬಲೇಂದ್ರ ಶಾ ಅವರ ಆರ್‌ಎಸ್‌ಪಿ ಪಕ್ಷ ಭಾರಿ ಮುನ್ನಡೆ ಸಾಧಿಸಿದೆ. ಇದೀಗ, ಶಾ‌ ಅವರು ನೇಪಾಳದ ಮುಂದಿನ ಪ್ರಧಾನಿಯಾಗಲಿದ್ದಾರೆ.

ನೇಪಾಳದಲ್ಲಿ ಕಳೆದ 18 ವರ್ಷಗಳಿಂದ ರಾಜಕೀಯ ಅಸ್ಥಿರತೆ ಎದ್ದು ಕಾಣುತ್ತಿತ್ತು. ಬೇಸತ್ತ ಯುವಜನರು ‘ಝನ್-ಜೀ’ ಪ್ರತಿಭಟನೆ ನಡೆಸಿ ಹಿಂದಿನ ಪ್ರಧಾನಿ ಕೆ.ಪಿ ಶರ್ಮಾ ಓಲಿ ಅವರ ಸರ್ಕಾರವನ್ನು ಉರುಳಿಸಿದ್ದರು. ಆನಂತರ ನಡೆದ‌ ಚುನಾವಣೆಯಲ್ಲಿ ಮತದಾರರು ಮತ್ತು ಜನಸಾಮಾನ್ಯರು ಸ್ಥಾಪಿತ ಪಕ್ಷಗಳನ್ನು ತಿರಸ್ಕರಿಸಿ, 35 ವರ್ಷದ ಬಲೇಂದ್ರ ಶಾ ಅವರನ್ನು ಬೆಂಬಲಿಸಿದ್ದಾರೆ.

ನೇಪಾಳದ ಒಟ್ಟು 165 ನೇರ ಚುನಾವಣಾ ಕ್ಷೇತ್ರಗಳ ಪೈಕಿ ಆರ್‌ಎಸ್‌ಪಿ 116 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಬಲೇಂದ್ರ ಶಾ ಅವರು ಝಾಪಾ-5 ಕ್ಷೇತ್ರದಲ್ಲಿ ನಾಲ್ಕು ಬಾರಿ ಪ್ರಧಾನಿಯಾಗಿದ್ದ ಸಿಪಿಎನ್-ಯುಎಂಎಲ್ ಅಧ್ಯಕ್ಷ ಕೆ.ಪಿ. ಶರ್ಮಾ ಓಲಿ ಅವರ ವಿರುದ್ಧ ಗೆದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಲೇಂದ್ರ ಶಾ ಅವರು ಕರ್ನಾಟಕದೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದು ಗಮನಾರ್ಹ. ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಿವಿಲ್ ಮತ್ತು ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಧ್ಯಯನ ಮಾಡಿ, ಅಲ್ಲಿ ಸ್ಟ್ರಕ್ಚರಲ್ ಎಂಜಿನಿಯರಿಂಗ್‌ನಲ್ಲಿ ಎಂಟೆಕ್ ಪದವಿ ಪಡೆದರು. 2016 ಮತ್ತು 2018 ರ ನಡುವೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...