ಬಾಂಗ್ಲಾದೇಶ | ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ, 19 ಸಾವು, 100 ಮಂದಿಗೆ ಗಾಯ

Date:

ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ನಡೆದಿದೆ.

ಏರ್ ಇಂಡಿಯಾ ವಿಮಾನ ದುರಂತದ ಮಾದರಿಯಲ್ಲೇ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ 19 ಮಂದಿ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್ (ಐಎಸ್‌ಪಿಆರ್) ಹೇಳಿಕೆ ಬಿಡುಗಡೆ ಮಾಡಿದ್ದು, ಸೋಮವಾರ ಮಧ್ಯಾಹ್ನ 1.06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿದೆ. 19 ಮಂದಿ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡ ನಾಲ್ವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡ ಸಂಭವಿಸಿದಾಗ ಶಾಲೆಯಲ್ಲಿ ಮಕ್ಕಳಿದ್ದರು. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...