ಬಾಂಗ್ಲಾದೇಶದ ಸಂಸದನ ಹತ್ಯೆಗೆ 5 ಕೋಟಿ ರೂ. ಸುಪಾರಿ: ಪ್ರಕರಣ ಭೇದಿಸಿದ ಪೊಲೀಸರು

Date:

ಕೋಲ್ಕತ್ತಾದಲ್ಲಿ ಹತ್ಯೆಯಾಗಿದ್ದ ಬಾಂಗ್ಲಾದೇಶ ಸಂಸದನ ಪ್ರಕರಣವನ್ನು ಪಶ್ಚಿಮ ಬಂಗಾಳ ಪೊಲೀಸರು ಭೇದಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಂಗ್ಲಾದೇಶದ ಸಂಸದ ಅನ್ವರೂಲ್ ಅಜೀಮ್ ಅನರ್ ಅವರನ್ನು ಹತ್ಯೆ ಮಾಡಲು ಸಂಸದರ ಸ್ನೇಹಿತನೊಬ್ಬ 5 ಕೋಟಿ ರೂ. ಸುಪಾರಿ ನೀಡಿದ್ದ ಎಂದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ ಎಂದು ಕೊಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅನ್ವರೂಲ್‌ ಮೇ 13ರಂದು ಕೋಲ್ಕತ್ತಾದಲ್ಲಿ ನಾಪತ್ತೆಯಾಗಿ, ಮೇ.23ರಂದು ಕೊಲೆಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಗೃಹ ಸಚಿವ ಅಸಾದುಜ್ಜೀಮಾನ್ ಖಾನ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣವನ್ನು ತನಿಖೆಗೊಳಪಡಿಸಲು ಪಶ್ಚಿಮ ಬಂಗಾಳ ಪೊಲೀಸ್ ರಾಜ್ಯ ಸಿಐಡಿಗೆ ನೀಡಿತ್ತು.

“ಇದೊಂದು ಪೂರ್ವ ಯೋಜಿತ ಕೃತ್ಯವಾಗಿದೆ. ನೆರೆಯ ದೇಶದ ಸಂಸದರನ್ನು ಹತ್ಯೆ ಮಾಡಲು ದೊಡ್ಡ ಮೊತ್ತವಾದ ಸುಮಾರು 5 ಕೋಟಿ ರೂ.ಗಳನ್ನು ಸಂಸದರ ಸ್ನೇಹಿತನೊಬ್ಬ ಸುಪಾರಿ ನೀಡಿದ್ದ” ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುಪಿ-ಬಿಹಾರದಲ್ಲಿ ಧೂಳೆಬ್ಬಿಸಿದೆ ʼಖಟಾಖಟ್ ಖಟಾಖಟ್ʼ ಮಹಾಲಕ್ಷ್ಮೀ ಯೋಜನೆ

ಸುಪಾರಿ ನೀಡಿದ ಆರೋಪಿಯು ಅಮೆರಿಕ ಪ್ರಜೆಯಾಗಿದ್ದು, ಕೋಲ್ಕತ್ತಾದಲ್ಲಿ ಸ್ವಂತ ಪ್ಲಾಟ್‌ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಐಡಿ ಪೊಲೀಸರು ಕೋಲ್ಕತ್ತಾದ ಹೊರವಲಯದಲ್ಲಿರುವ ಆರೋಪಿ ಅಪಾರ್ಟ್‌ಮೆಂಟ್ ಬಳಿ ಕೆಲೆಯಾದ ಸಂಸದರ ರಕ್ತದ ಕಲೆಗಳನ್ನು ಪತ್ತೆ ಹಚ್ಚಿದ್ದಾರೆ. ಭಾರತದಲ್ಲಿ ಚಿಕಿತ್ಸೆ ಪಡೆಯಲು ಬಂಧಿದ್ದ ಬಾಂಗ್ಲಾದೇಶದ ಸಂಸದರಾದ ಅನ್ವರೂಲ್ ಅಜೀಮ್ ಅನರ್ ಮೇ.13 ರಂದು ನಾಮತ್ತೆಯಾಗಿದ್ದರು. ನಮ್ಮ ಫಾರೆನ್ಸಿಕ್‌ ತಂಡ ಅಪರಾಧ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ” ಎಂದು ಸಿಐಡಿ ವಿಭಾಗದ ಐಜಿ ಅಖಿಲೇಶ್ ಚತುರ್ವೇದಿ ತಿಳಿಸಿದ್ದಾರೆ.

ಅನ್ವರೂಲ್‌ ಅವರು ವೈದ್ಯಕೀಯ ಚಿಕಿತ್ಸೆಗೆಂದು ಮೇ 13ರಂದು ಕೋಲ್ಕತ್ತಾಗೆ ಆಗಮಿಸಿದ ನಂತರ ನಾಪತ್ತೆಯಾಗಿದ್ದರು. ಪರಿಚಿತರನ್ನು ಭೇಟಿ ಮಾಡಲು ತೆರಳಿದ್ದವರು ವಾಪಸಾಗಿರಲಿಲ್ಲ. ನಂತರ ಅವರು ನಾಪತ್ತೆಯ ಬಗ್ಗೆ ಸಂಸದರ ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದರು.

ಅನ್ವರೂಲ್‌ ಅವರ ದೇಹ ಛಿದ್ರಗೊಂಡಿದ್ದು,ಸಂಜೀವಾ ಗಾರ್ಡನ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...