ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

Date:

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಸೇನಾ ಮುಖ್ಯಸ್ಥ ವಾಕರ್ ಉಜ್ ಜಮಾನ್ ಹೇಳಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸೋಮವಾರ ಮಧ್ಯಾಹ್ನ 2:30 ರ ಸುಮಾರಿಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂಗಾಬಬಾನ್‌ನಿಂದ ಹೊರಟಿದ್ದಾರೆ. ಅವರ ಕಿರಿಯ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ‘ಸುರಕ್ಷಿತ ಸ್ಥಳ’ಕ್ಕೆ ತೆರಳಿದರು ಎಂದು ಬಾಂಗ್ಲಾದೇಶ ಮಾಧ್ಯಮ ವರದಿ ಮಾಡಿದೆ.

ಭಾರತಕ್ಕೆ ಶೇಖ್ ಹಸೀನಾ ಆಗಮಿಸಿದ್ದಾರೆ ಎಂದು ಕೂಡ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ಮಿಲಿಟರಿ ಆಡಳಿತ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಂಗ್ಲಾದೇಶ | ಪ್ರತಿಭಟನಾಕಾರರು, ಆಡಳಿತ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ; 100 ಮಂದಿ ಸಾವು

ಭಾನುವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಯು ಮತ್ತೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಮತ್ತು ಆಡಳಿತ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಬಾಂಗ್ಲಾ ದೇಶದಾದ್ಯಂತ ಅನಿರ್ದಿಷ್ಟಾವಧಿಗೆ ನಿಷೇಧಾಜ್ಞೆ ಹೇರಲಾಗಿದೆ.

ಉದ್ಯೋಗ ಮೀಸಲಾತಿ ವಿಚಾರಕ್ಕೆ ಸಂಬಂಧಸಿದಂತೆ ಹಲವಾರು ದಿನಗಳಿಂದ ಬಾಂಗ್ಲಾದೇಶದಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿದೆ. ಪ್ರತಿಭಟನಾಕಾರರು ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಈ ಪ್ರತಿಭಟನೆಗೆ ಆಡಳಿತ ಪಕ್ಷದ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದು, ಅಲ್ಲಲ್ಲಿ ಘರ್ಷಣೆ ನಡೆದಿದೆ.

ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದವರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡ 30ರಷ್ಟು ಮೀಸಲಿಡುವ ವ್ಯವಸ್ಥೆ ವಿರುದ್ಧ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದು, ಇತ್ತೀಚಿಗಷ್ಟೆ ಸುಮಾರು 200 ಮಂದಿ ಸಾವನ್ನಪ್ಪಿದ್ದಾರೆ. ಅಂದಿನಿಂದ ಈವರೆಗೂ 11,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...