ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ

Date:

ವಿದೇಶದಲ್ಲಿ ಕೆಲಸ ಕೊಡುವುದಾಗಿ ನಂಬಿಸಿ ಏಜೆಂಟ್‌ಗಳು ಎಸಗುವ ಮೋಸಕ್ಕೆ ಜನರು ಬಲಿಯಾಗಬಾರದು. ಕೆಲಸದ ಆಮಿಷ ಒಡ್ಡಿ ವಿಸಿಟ್ ವಿಸಾದಲ್ಲಿ ಕಾರ್ಮಿಕರನ್ನು ಕರೆತಂದು ಅತಂತ್ರ ಸ್ಥಿತಿಯಲ್ಲಿ ಸಮಸ್ಯೆಗೆ ಸಿಲುಕಿಸುವವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಬಿಸಿಸಿಐ ಹಾಗೂ ದುಬೈ ಕಾನ್ಸುಲೇಟ್ ಜಂಟಿಯಾಗಿ ಮಾಡಬೇಕು ಎಂದು ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಹೇಳಿದ್ದಾರೆ.

ಇತ್ತೀಚೆಗೆ ದುಬೈನಲ್ಲಿ ನಡೆದಿದ್ದ ಬ್ಯಾರಿ ಮೇಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಅವರು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ (ಬಿಸಿಸಿಐ) ಯುಎಇ ಮುಖಂಡರನ್ನು ದುಬೈನ ಕಾನ್ಸುಲೇಟ್ ಕಚೇರಿಗೆ ಆಹ್ವಾನಿಸಿದ್ದರು. ಅವರ ವಿಶೇಷ ಆಹ್ವಾನದ ಮೇರೆಗೆ ಕಾನ್ಸುಲೇಟ್ ಕಚೇರಿಗೆ ಬಿಸಿಸಿಐ ಸದಸ್ಯರು ಭೇಟಿ ನೀಡಿದ್ದರು. ಈ ವೇಳೆ, ಸಮುದಾಯದ ಮತ್ತು ಅನಿವಾಸಿಗಳ ಹಲವಾರು ವಿಷಯಗಳ ಕುರಿತು ಮುಕ್ತವಾಗಿ ಚರ್ಚೆ ನಡೆದಿದೆ.

ಚರ್ಚೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಪದೇ ಪದೇ ಕರ್ನಾಟಕದವರು ಎದುರಿಸುತ್ತಿರುವ ವಿಸಾ ಸಮಸ್ಯೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಗಮನ ಸೆಳೆದರು. ಅವರ ಮಾತಿಗೆ ಉತ್ತರಿಸಿದ ಕಾನ್ಸುಲ್ ಜನರಲ್, “ಕಳೆದ ವರ್ಷ ಘೋಷಿಸಿದ್ದ ಅಮ್ನೆಸ್ಟಿ ಹಾಗೂ ಅದನಂತರ ಯುಎಇ ಸರ್ಕಾರದ ಕೆಲವು ಕಠಿಣ ವಿಸಾ ನಿಲುವಿನಿಂದಾಗಿ ಈ ಬದಲಾವಣೆ ಕಂಡುಬರುತ್ತಿದೆ. ಇದು ಕೇವಲ ಒಂದು ರಾಜ್ಯ, ಸಮುದಾಯ, ಪ್ರದೇಶಕ್ಕೆ ಸೀಮಿತವಾದ ವಿಚಾರವಲ್ಲ. ದೇಶದ ಎಲ್ಲ ರಾಜ್ಯದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಬರಲಿದೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಜೆಂಟ್‌ಗಳ ಮೋಸಕ್ಕೆ ಬಲಿಯಾಗಿ, ಕೆಲಸ ಹರಸಿ ವಿಸಿಟ್ ವಿಸಾದಲ್ಲಿ ಬಂದವರು ವಿಸಾ ಅವಧಿ ಮುಗಿದ ಮೇಲೂ ಹಿಂತಿರುಗಿದೇ ಇದ್ದರೆ ಅವರಿಂದ ನಮ್ಮ ದೇಶಕ್ಕೆ ಕೆಟ್ಟ ಹೆಸರು, ಕೆಲಸಕ್ಕಾಗಿ ಬರುವವರು ಕೆಲಸದ ವರ್ಕ್ ಪರ್ಮಿಟ್ ವೀಸಾ ರೆಸಿಡೆನ್ಸ್ ವೀಸಾದಲ್ಲೇ ಬರಲಿ ಎಂಬುದೇ ನನ್ನ ನಿಲುವು” ಎಂದರು.

ಬ್ಯಾರಿ ಮೇಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದ ಬ್ಯಾರಿ ಸಮುದಾಯದ ಜನರ ಒಗ್ಗಟ್ಟು, ಶಿಸ್ತು ಹಾಗೂ ಬ್ಯಾರಿಗಳ ಸಾಧನೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದ ಕಾನ್ಸುಲ್ ಜನರಲ್ ಸತೀಶ್, ದುಬೈ ಕಾನ್ಸುಲೇಟ್‌ನಲ್ಲಿ ಮುಂದೆ ನಡೆಯುವ ಎಲ್ಲ ಬ್ಯುಸಿನೆಸ್ ಸಮ್ಮಿಟ್‌ಗೆ ಬಿಸಿಸಿಐಗೆ ಆಹ್ವಾನ ನೀಡುವುದಾಗಿ ತಿಳಿಸಿದರು. ಅಲ್ಲದೇ ಬಿಸಿಸಿಐ ನಡೆಸುವ ಎಲ್ಲ ವೃತ್ತಿಪರ, ಸಮುದಾಯದ ಪರ, ಬ್ಯಾರಿ ಕಾರ್ಯಕ್ರಮಗಳಲ್ಲಿ ತಾನು ಸಕ್ರಿಯವಾಗಿ ಭಾಗವಹಿಸುವೆನು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್, ಮುಸ್ತಾಕ್ ಕದ್ರಿ, ಇಮ್ರಾನ್ ಖಾನ್ ಎರ್ಮಾಳ್ ಹಾಗೂ ಏಮ್ ಇಂಡಿಯಾ ಫೋರಂ ಸ್ಥಾಪಕ ಶೇಕ್ ಮುಝಫರ್, ನಿಯಾಝ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...