ಜಪಾನ್‌ನಲ್ಲಿ ಮತ್ತೆ ಭಾರೀ ಅವಘಡ | ಲ್ಯಾಂಡಿಂಗ್ ವೇಳೆ ಹೊತ್ತಿ ಉರಿದ 360ಕ್ಕೂ ಹೆಚ್ಚು ಜನರಿದ್ದ ವಿಮಾನ

Date:

ಹೊಸ ವರ್ಷದ ಮೊದಲ ದಿನವೇ ಭಯಾನಕ ಭೂಕಂಪನದಿಂದ ಸುದ್ದಿಯಾಗಿದ್ದ ಜಪಾನ್‌ನಲ್ಲಿ ಮತ್ತೊಂದು ಭಾರೀ ಅವಘಡ ಸಂಭವಿಸಿದೆ.

ರನ್‌ವೇಯಲ್ಲಿ ಲ್ಯಾಂಡ್‌ ಆಗುತ್ತಿದ್ದಾಗ ವಿಮಾನವೊಂದು ಇನ್ನೊಂದು ವಿಮಾನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ಟೋಕಿಯೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಪಾನಿನ ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, ವಿಮಾನದಲ್ಲಿ 360ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಜಪಾನಿನ ಮಾಧ್ಯಮಗಳು ವರದಿ ಮಾಡಿದೆ. ಈವರೆಗೆ ಸಾವು ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ವಿಮಾನದಲ್ಲಿದ್ದ ಎಲ್ಲಾ 379 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಯನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ವರದಿ ಮಾಡಿವೆ.

ಜಪಾನ್ ಏರ್‌ಲೈನ್ಸ್‌ನ 516, ಸ್ಥಳೀಯ ಸಮಯ 16:00 ಕ್ಕೆ ನ್ಯೂ ಚಿಟೋಸ್ ವಿಮಾನ ನಿಲ್ದಾಣದಿಂದ ಹೊರಟಿದ್ದು, 17:40 ಕ್ಕೆ ಹನೆಡಾದಲ್ಲಿ ಇಳಿಯಲು ನಿಗದಿಯಾಗಿತ್ತು. ಲ್ಯಾಂಡಿಗ್ ವೇಳೆ ಕೋಸ್ಟ್‌ ಗಾರ್ಡ್‌ ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ  ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಹೊಸ ವರ್ಷದ ಮೊದಲ ದಿನ ಸಂಭವಿಸಿದ್ದ ಭೂಕಂಪದ ಸಂತ್ರಸ್ತರಿಗೆ ನೆರವನ್ನು ತಲುಪಿಸಲು ಜಪಾನ್ ಕೋಸ್ಟ್ ಗಾರ್ಡ್ DHC-8-315Q ವಿಮಾನವು ನಿಗಾಟಾಗೆ ಹೊರಡಲು ಕಾಯುತ್ತಿರುವಾಗ ಜಪಾನ್ ಏರ್‌ಲೈನ್ಸ್ ವಿಮಾನ ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ. ಘಟನೆಯಿಂದಾಗಿ ಕೋಸ್ಟ್ ಗಾರ್ಡ್ ವಿಮಾನವು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಜೊತೆಗೆ ಪ್ರಯಾಣಿಕರಿದ್ದ ವಿಮಾನ ಕೂಡ ಬೆಂಕಿಯ ಕೆನ್ನಾಲಿಗೆಗೆ ನಾಶವಾಗಿದೆ.

ಕೋಸ್ಟ್ ಗಾರ್ಡಿಗೆ ಸೇರಿದ ವಿಮಾನದಲ್ಲಿ ಕ್ಯಾಪ್ಟನ್ ಸಹಿತ ಆರು ಮಂದಿ ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ. ಕ್ಯಾಪ್ಟನ್ ಬಚಾವಾಗಿದ್ದು, ಉಳಿದ ಐದು ಮಂದಿಯ ವಿವರ ಪತ್ತೆಯಾಗಿಲ್ಲ ಎಂದು ಕೋಸ್ಟ್ ಗಾರ್ಡ್ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...