ಲಾಹೋರ್‌ ಮಿಲಿಟರಿ ವಿಮಾನ ನಿಲ್ದಾಣದ ಬಳಿ ಸ್ಫೋಟ

Date:

ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಡ್ರೋನ್‌ ಮೂಲಕ ದಾಳಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.

ಸ್ಥಳೀಯ ಭದ್ರತಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಪ್ರದೇಶವನ್ನು ಮುಚ್ಚಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪಾಕಿಸ್ತಾನ ವಾಯುಪಡೆಯ (ಪಿಎಎಫ್) ತರಬೇತಿ ಸಮಯದಲ್ಲಿ ಸ್ಫೋಟ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆವರಣದಲ್ಲಿ ನೆಲೆಗೊಂಡಿರುವ ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಮುನ್ನೆಚ್ಚರಿಕೆ ಕ್ರಮವಾಗಿ, ವಾಲ್ಟನ್ ರಸ್ತೆಯಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಈ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಗಡಿಯುದ್ದಕ್ಕೂ ನಿರಂತರ ಗುಂಡಿನ ಚಕಮಕಿ ನಡೆಯುತ್ತಿರುವುದರಿಂದ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಮತ್ತು ಕಥುವಾ ಹಾಗೂ ಜಮ್ಮುವಿನ ಆರ್‌ಎಸ್ ಪುರ ಪ್ರದೇಶದಲ್ಲಿ ಮುಂದಿನ 72 ಗಂಟೆಗಳ ಕಾಲ ಎಚ್ಚರಿಕೆ ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಕರ್ನಾ ಪ್ರದೇಶದಲ್ಲಿ ಪಾಕಿಸ್ತಾನ ಗಡಿಯುದ್ದಕ್ಕೂ ಗುಂಡು ಹಾರಿಸಿದೆ. ‘ಆಪರೇಷನ್ ಸಿಂಧೂರ್’ ನಂತರ, ಪಾಕಿಸ್ತಾನವು ಎಲ್‌ಒಸಿ ಮೇಲೆ ಸತತ ಎರಡನೇ ದಿನ ಗುಂಡಿನ ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...