ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್‌ ಬೆದರಿಕೆ, ತುರ್ತು ಭೂಸ್ಪರ್ಶ

Date:

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ ಹಿನ್ನೆಲೆಯಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

“ವಿಸ್ತಾರ UK17 ವಿಮಾನವು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ತಪಾಸಣೆ ನಡೆಸಲಾಗುತ್ತಿದೆ” ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ.

“ಅಕ್ಟೋಬರ್ 18 ರಂದು (ಶುಕ್ರವಾರ) ದೆಹಲಿಯಿಂದ ಲಂಡನ್‌ಗೆ ತೆರಳುತ್ತಿದ್ದ ವಿಸ್ತಾರ ವಿಮಾನಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಹಾಕಲಾಗಿದೆ. ಶಿಷ್ಟಾಚಾರದ ಪ್ರಕಾರ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ, ಪೈಲಟ್‌ಗಳು ವಿಮಾನವನ್ನು ಫ್ರಾಂಕ್‌ಫರ್ಟ್‌ಗೆ ಮಾರ್ಗ ಬದಲಿಸಿದರು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದ ಸರಣಿ ಬಾಂಬ್ ಬೆದರಿಕೆ

ವಿಮಾನಗಳಿಗೆ ಸರಣಿ ಬಾಂಬ್ ಬೆದರಿಕೆ ಮುಂದುವರೆದಿದ್ದು, ಗುರುವಾರ ಮುಂಬೈಯಿಂದ ಹಾರಬೇಕಿದ್ದ ಎರಡು ಅಂತರಾಷ್ಟ್ರೀಯ ವಿಮಾನಗಳಿಗೆ, ವಿಸ್ತಾರಾ ಮತ್ತು ಇಂಡಿಗೋದ ತಲಾ ಒಂದು ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಬುಧವಾರ ಇಂಡಿಗೋ, ಸ್ಪೈಸ್ ಜೆಟ್ ಮತ್ತು ಆಕಾಶ ಏರ್‌ನ ಏಳು ವಿಮಾನಗಳಿಗೆ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಇದಕ್ಕೂ ಮೊದಲು, ಸೋಮವಾರ ಮತ್ತು ಮಂಗಳವಾರದಂದು ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 12 ವಿಮಾನಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿದ್ದವು.

ಗುರುವಾರ, ಬೋಯಿಂಗ್ 787 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ 147 ಜನರೊಂದಿಗೆ ಮುಂಬೈಗೆ ಹೊರಟಿದ್ದ ವಿಸ್ತಾರಾ ವಿಮಾನ ಫ್ರಾಂಕ್‌ಫರ್ಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ತಕ್ಷಣ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು ಎಂದು ಏರ್‌ಲೈನ್ಸ್ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...